ಬಂಟ್ವಾಳ: ಬಂಟ್ವಾಳ ತಾಲೂಕು ಹೊಕ್ಕಾಡಿಗೋಳಿ ಮಹಿಷಮರ್ಧಿನಿ ಕಂಬಳ ಸಮಿತಿ ವತಿಯಿಂದ ಇತಿಹಾಸ ಪ್ರಸಿದ್ಧ ವೀರ-ವಿಕ್ರಮ  ಜೋಡುಕರೆ ಬಯಲು ಕಂಬಳವು ಹೊಕ್ಕಾಡಿಗೋಳಿಯಲ್ಲಿ ಡಿ. 22ರಂದು ನಡೆಯಲಿದೆ ಎಂದು ಕಂಬಳ ಸಮಿತಿ ಆಧ್ಯಕ್ಷ ನೋಣಾಲ್ಗುತ್ತು ರಶ್ಮಿತ್ ಶೆಟ್ಟಿ ಕೈತ್ರೋಡಿ ಆವರು ತಿಳಿಸಿದ್ದಾರೆ. ಸಿದ್ದಕಟ್ಟೆ ಅಶ್ವಿನಿ ಸಭಾಂಗಣದಲ್ಲಿ ಗುರುವಾರ ಮಧ್ಯಾಹ್ನ ಕರೆದ ಪತ್ರಿಕಾ ಗೋಷ್ಠಿಯಲ್ಲಿ ಆವರು ಮಾತನಾಡಿದರು. ಅಂದು ಬೆಳಗ್ಗೆ ಗಂಟೆ 8ಕ್ಕೆ ಶ್ರೀ ಕ್ಷೇತ್ರ ಪೂಂಜದ ಆಸ್ರಣ್ಣ ಕೃಷ್ಣ ಪ್ರಸಾದ್ ಆಚಾರ್ಯ ಅವರು ಕಂಬಳ ಉದ್ಘಾಟಿಸಲಿರುವರು. ಶ್ರೀ ಕ್ಷೇತ್ರದ ಪ್ರಧಾನ ಅರ್ಚಕ ಪ್ರಕಾಶ್ ಆಚಾರ್ಯ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿರುವರು ಹಾಗೂ ಮತ್ತಿತರರು ಅತಿಥಿಗಳಾಗಿ ಭಾಗವಹಿಸಲಿರುವರು. ಸಂಜೆ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ಉಳಿಪ್ಪಾಡಿಗುತ್ತು ಅವರು  ಅಧ್ಯಕ್ಷತೆ ವಹಿಸಲಿದ್ದು, ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ, ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್, ಸಂಸದರಾದ ನಳಿನ್ ಕುಮಾರ್ ಕಟೀಲು, ಪ್ರತಾಪ ಸಿಂಹ,  ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಹರೀಶ್ ಪೂಂಜ, ಸಂಜೀವ ಮಠಂದೂರು, ಕುಮಾರ್ ಬಂಗಾರಪ್ಪ, ಉಮಾನಾಥ ಕೋಟ್ಯಾನ್, ವಿ.ಸುನೀಲ್ ಕುಮಾರ್, ಡಾ. ವೈ. ಭರತ್ ಶೆಟ್ಟಿ, ವೇದವ್ಯಾಸ ಕಾಮತ್, ವಿಧಾನ ಪರಿಷತ್ ಸದಸ್ಯರಾದ ಹರೀಶ್ ಕುಮಾರ್, ಎಸ್.ಎಲ್. ಭೋಜೇ ಗೌಡ, ಐವಾನ್ ಡಿಸೋಜ, ಮಾಜಿ ಸಚಿವರಾದ ಬಿ. ನಾಗರಾಜ ಶೆಟ್ಟಿ, ಕೆ.ಅಭಯ ಚಂದ್ರ ಜೈನ್, ಕೆ.ಅಮರನಾಥ ಶೆಟ್ಟಿ, ಮಾಜಿ ಶಾಸಕ ಕೆ.ವಸಂತ ಬಂಗೇರ, ಜಿ.ಪಂ.ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಡಿಸಿಸಿ ಬ್ಯಾಂಕ್ ಆಧ್ಯಕ್ಷ ಡಾ. ಎಮ್. ಎನ್. ರಾಜೇಂದ್ರ ಕುಮಾರ್ ಹಾಗೂ ವಿವಿಧ ಕ್ಷೇತ್ರದ ಗಣ್ಯರು ಅತಿಥಿಗಳಾಗಿ ಭಾಗವಹಿಸಲಿರುವರು. ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿ ಮಾಜಿ ಸಚಿವ ಬಿ. ರಮಾನಾಥ ರೈ ಅವರು ಅಧ್ಯಕ್ಷತೆ ವಹಿಸಲಿರುವರು. ಆಲಂಗಾರುಗುತ್ತು ಶ್ರೀನಿವಾಸ್ ಆಳ್ವ ಅವರು ಬಹುಮಾನ ವಿತರಿಸಲಿರುವರು ಹಾಗೂ ಮತ್ತಿತರರು ಅತಿಥಿಗಳಾಗಿ ಭಾಗವಹಿಸಲಿರುವರು. ವಿಶೇಷ ಆಹ್ವಾನಿತರಾಗಿ ಚಲನಚಿತ್ರ ನಟರಾದ ಅಮಿತ್ ರಾವ್ ಮತ್ತು ನಿರಂಜನ್ ಶೆಟ್ಟಿ, ಅರ್ಜುನ್ ಕಾಪಿಕಾಡ್, ನಿಧಿ ಸುಬ್ಬಯ್ಯ, ನವೀನ್ ಡಿ. ಪಡೀಲ್, ದೇವದಾಸ್ ಕಾಪಿಕಾಡ್, ಭೋಜರಾಜ್ ವಾಮಂಜೂರು, ರೋಹಿತ್ ಕುಮಾರ್ ಕಟೀಲು, ಹಿಂದಿ ಚಲನಚಿತ್ರ ನಿರ್ಮಾಪಕ ರಾಜೇಶ್ ಭಟ್ ಭಾಗವಹಿಸಲಿರುವರು. ಈ ಸಂದರ್ಭದಲ್ಲಿ ಕಂಬಳ ಸಂಘಟಕ, ಕಂಬಳದ ಮಾಜಿ ಪ್ರಧಾನ ತೀರ್ಪುಗಾರ ಬೆಳ್ಳಿಪಾಡಿ ಮಂಜಯ್ಯ ರೈ ಅವರನ್ನು ಸಮ್ಮಾನಿಸಲಾಗುವುದು ಎಂದು ಅವರು ವಿವರಿಸಿದರು. ಕಂಬಳದ ವಿಶೇಷತೆ: ಇಲ್ಲಿನ ಇತಿಹಾಸ ಪ್ರಸಿದ್ಧ ಪೂಂಜ ಶ್ರೀ ಪಂಚದುರ್ಗಾ ಪರಮೇಶ್ವರಿ ದೇವಸ್ಥಾನ ಮತ್ತು ಹೊಕ್ಕಾಡಿಗೋಳಿ ವೀರ ವಿಕ್ರಮ ಕಂಬಳಕ್ಕೆ ಕಳೆದ ಹಲವಾರು ವರ್ಷಗಳಿಂದ ಧಾರ್ಮಿಕ ನಂಟು ಹೊಂದಿದ್ದು ಸಾಂಪ್ರದಾಯಿಕ ಕಂಬಳವೆಂದು ಗುರುತಿಸಿಕೊಂಡಿದೆ.  ಪ್ರತಿ ವರ್ಷ ಕಂಬಳಕ್ಕೆ ಒಂದು ದಿನ ಮುಂಚಿತವಾಗಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಲಾಗುತ್ತದೆ. ಈ ಹಿಂದೆ ಕೃಷಿಕರು ಕಂಬಳ ಕರೆಗೆ ಏತ ನೀರಾವರಿ ಮೂಲಕ ನೀರು ಹಾಯಿಸುತ್ತಿದ್ದು, ಗ್ಯಾಸ್ ಲೈಟ್ ಬೆಳಕಿನಲ್ಲಿ ಎಳ್ಳಮವಾಸ್ಯೆ ದಿನ ಕಂಬಳ ನಡೆಯುತ್ತಿತ್ತು. ವಿಜೇತ ಕೋಣಗಳಿಗೆ ಬಹುಮಾನವಾಗಿ ಬಾಳೆಗೊನೆ, ಸೀಯಾಳ ಮತ್ತಿತರ ಕೃಷಿ ಉ್ಪನ್ನಗಳನ್ನು ನೀಡುವ ಪದ್ಧತಿ ಇತ್ತು ಎಂದು ಅವರು ತಿಳಿಸಿದರು. ಈ ಬಾರಿ ಒಟ್ಟು 125 ಕ್ಕೂ ಮಿಕ್ಕಿ ಜೋಡಿ ಓಟದ ಕೋಣಗಳು ಭಾಗವಹಿಸುವ ನಿರೀಕ್ಷೆ ಇದೆ. ಸುಪ್ರೀಂ ಕೋರ್ಟಿನ ನಿರ್ದೇಶನದಂತೆ ಜಿಲ್ಲಾ ಕಂಬಳ ಸಮಿತಿಯ ಮಾರ್ಗದರ್ಶನದಲ್ಲಿ ಅಹಿಂಸಾತ್ಮಕವಾಗಿ  ಕಂಬಳ ನಡೆಸಲಾಗುತ್ತಿದೆ. ಅಂದು ತಹಶೀಲ್ದಾರ್ ಮತ್ತು ಪೊಲೀಸ್ ಹಾಗೂ ಪಶು ಸಂಗೋಪನೆ ಇಲಾಖೆ ಅಧಿಕಾರಿಗಳು ಭಾಗವಹಿಸುವರು ಎಂದು ಅವರು ಹೇಳಿದರು. ಸುದ್ದಿಗೋಷ್ಟಿಯಲ್ಲಿ ಸಮಿತಿ ಗೌರವಾಧ್ಯಕ್ಷ ಸಂಜೀವ ಶೆಟ್ಟಿ ಗುಂಡ್ಯಾರು, ಪದಾಧಿಕಾರಿಗಳಾದ ಸುರೇಶ್ ಶೆಟ್ಟಿ ಸಿದ್ದಕಟ್ಟೆ, ಬಾಬು ರಾಜೇಂದ್ರ ಶೆಟ್ಟಿ ಅಜ್ಜಾಡಿ, ಎಚ್. ಹರೀಶ್ ಹಿಂಗಾಣಿ, ಸಂದೇಶ್ ಶೆಟ್ಟಿ ಪೊಡುಂಬ, ಪುಷ್ಪರಾಜ ಜೈನ್ ನಡ್ಯೋಡಿ, ಹರಿಪ್ರಸಾದ್ ಶೆಟ್ಟಿ ಕುರ್ಡಾಡಿ, ಜಗನ್ನಾಥ ಶೆಟ್ಟಿ ಕೊನೆರೊಟ್ಟು, ರಾಜೇಶ್ ಶೆಟ್ಟಿ ಕೊನೆರೊಟ್ಟು, ಕೃಷ್ಣ ಶೆಟ್ಟಿ ಉಮನೊಟ್ಟು, ಸುಧೀರ್ ಶೆಟ್ಟಿ ಹೊಕ್ಕಾಡಿಗೋಳಿ, ಗೋಪಾಲ ಬಂಗೇರ ಉಳಿರೋಡಿ, ಟಿ.ನರಸಿಂಹ ಪೈ ಮಾವಿನಕಟ್ಟೆ, ನವೀನ ಹೆಗ್ಡೆ ಮಂಚಕಲ್ಲು, ಭೋಜ ಪೂಜಾರಿ, ಜನಾರ್ದನ ಬಂಗೇರ ತಿಮರಡ್ಕ, ಆರಂಬೋಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಪ್ರಭಾಕರ ಎಚ್.ಹುಲಿಮೇರು ಮತ್ತಿತರರು ಇದ್ದರು.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here