



ಬಂಟ್ವಾಳ: ಮಂಚಿ- ಇರಾ- ಸಾಲೆತ್ತೂರು- ಕೊಳ್ನಾಡು ಗ್ರಾಮಸ್ಥರ ಬಹುಕಾಲದ ಬೇಡಿಕೆಯಂತೆ ಮಂಜೂರುಗೊಂಡು ಸುಮಾರು 1 ಕೋಟಿ 30ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡು ಉದ್ಘಾಟನೆಗೊಳ್ಳಲು ಸಜ್ಜುಗೊಂಡಿರುವ ಮಂಚಿ ಪ್ರಾಥಮಿಕ ಆರೋಗ್ಯ ಕೇಂದ್ರದ ನೂತನ ಕಟ್ಟಡ ಕಾಮಗಾರಿಯನ್ನು ಕೆ.ಪಿ.ಸಿ.ಸಿ ಕಾರ್ಯದರ್ಶಿಗಳು, ಜಿಲ್ಲಾ ಪಂಚಾಯತ್ ಸದಸ್ಯರು ಆದ. ಎಂ.ಎಸ್.ಮೊಹಮ್ಮದ್ ಮತ್ತು ಕುರ್ನಾಡು ಜಿಲ್ಲಾ ಪಂಚಾಯತ್ ಸದಸ್ಯರು, ಕೆ.ಪಿ.ಸಿ.ಸಿ ಕಾರ್ಯದರ್ಶಿಗಳಾದ ಮಮತಾ ಡಿ.ಎಸ್.ಗಟ್ಟಿಯವರು ಪರಿಶೀಲನೆ ನಡೆಸಿದರು.

ಇರಾ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಅಬ್ದುಲ್ ರಝಾಕ್ ಕುಕ್ಕಾಜೆ, ಮಂಚಿ ಗ್ರಾಮ ಪಂಚಾಯತ್ ಸದಸ್ಯರಾದ ಇಬ್ರಾಹಿಮ್. ಜಿ, ತಾಲೂಕು ವೈದ್ಯಾಧಿಕಾರಿಗಳಾದ ಡಾ.ದೀಪಾ ಪ್ರಭು, ಹಾಗು ಡಾ.ಸುರೇಖಾ ಶೆಟ್ಟಿ, ಮಾಜಿ ಗ್ರಾಮ ಪಂಚಾಯತ್ ಸದಸ್ಯರಾದ ಅಬೂಬಕರ್ ನಿರ್ಬೈಲ್, ಮಂಚಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ರೋಹಿಣಿ ಇನ್ನಿತರರು ಜೊತೆಗಿದ್ದರು.





