






ವಿಟ್ಲ: ಕನ್ಯಾನ ಕಣಿಯೂರು ಶ್ರೀ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಡಿ.29 ರಂದು ಲೋಕ ಕಲ್ಯಾಣಾರ್ಥವಾಗಿ ಶ್ರೀ ಮಹಾಬಲ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಸಾಮೂಹಿಕ ಶ್ರೀ ಶನೈಶ್ಚರ ಪೂಜೆ ನಡೆಯಲಿದೆ. ಮಧ್ಯಾಹ್ನ ಧಾರ್ಮಿಕ ಸಭೆ ನಡೆಯಲಿದ್ದು, ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಮ್ನ ಶ್ರೀ ಗುರುದೇವಾನಂದ ಸ್ವಾಮೀಜಿ, ಮಾಣಿಲ ಶ್ರೀಧಾಮ ಶ್ರೀ ಮಹಾಲಕ್ಷ್ಮೀ ಕ್ಷೇತ್ರದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ, ಕಣಿಯೂರು ಶ್ರೀ ಮಹಾಬಲ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ.
ಕನ್ಯಾನ ಕುಟ್ಟಿತ್ತಡ್ಕ ಶ್ರೀ ವಿಷ್ಣುಮೂರ್ತಿ ಕ್ಷೇತ್ರದ ಅಧ್ಯಕ್ಷ ರಾಜೀವ ಬೆಳ್ಚಾಡ ಅಧ್ಯಕ್ಷತೆ ವಹಿಸಲಿದ್ದು, ನಾನಾ ಕ್ಷೇತ್ರ ಗಣ್ಯರು ಭಾಗವಹಿಸಲಿದ್ದಾರೆ. ಇದೇ ಸಂದರ್ಭದಲ್ಲಿ ನಾನಾ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಸನ್ಮಾನ ನಡೆಯಲಿದೆ. ಟಿ.ಕೆ.ಭಟ್ ಬಳಗದವರಿಂದ ಭಕ್ತಿ ಪುಷ್ಪಾಂಜಲಿ ನಡೆಯಲಿದೆ.





