Wednesday, April 10, 2024

ಕರಾಟೆ ಪಂದ್ಯಾಟದಲ್ಲಿ ಲೊರೆಟ್ಟೊ ಶಾಲೆಯ ವಿದ್ಯಾರ್ಥಿಗಳಿಗೆ ಚಿನ್ನದ ಪದಕ

ಬಂಟ್ವಾಳ:ಇತ್ತೀಚೆಗೆ ಮಂಗಳೂರಿನಲ್ಲಿ ನಡೆದ 11ನೇ ರಾಷ್ಟ್ರೀಯ ಮಟ್ಟದ ಮುಕ್ತ ಕರಾಟೆ ಪಂದ್ಯಾಟದಲ್ಲಿ ಲೊರೆಟ್ಟೊ  ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ಕಟಾ ಮತ್ತು ಕುಮಿಟೆ ವಿಭಾಗದಲ್ಲಿ ಚಿನ್ನ, ಬೆಳ್ಳಿ, ಮತ್ತು ಕಂಚಿನ ಪದಕಗಳನ್ನು ಗಳಿಸಿರುತ್ತಾರೆ. ಚಿನ್ನದ ಪದಕ ಗಳಿಸಿದವರು  ಶ್ರೇಯಸ್ 5 ತರಗತಿ, ಮತ್ತು ಛಾಯಾ 4ನೇ ತರಗತಿ.   ಬೆಳ್ಳಿಯ ಪದಕ ಗಳಿಸಿದವರು ಶಾನ್ 2ನೇ ತರಗತಿ,  ರಿಯೋಲ್ಲಾ 5ನೇತರಗತಿ, ಶಿಲ್ಪಾ 5ನೇ ತರಗತಿ. ಹಾಗೂ ವಿಘ್ನೇಶ್ 7ನೇ ತರಗತಿ ಕಂಚಿನ ಪದಕ ಗಳಿಸಿದವರು ಪವನ್ 4ನೇತರಗತಿ,  ಡಿಯೋನ್ 6ನೇ ತರಗತಿ, ಧನುಷ್ 6ನೇ ತರಗತಿ,  ಫಿಯೋನ್ನಾ 5 ನೇ ತರಗತಿ,  ಎಲ್ವೀನಾ 6ನೇ ತರಗತಿ  ಪ್ರೇಯಸ್ 5ನೇ ತರಗತಿ, ಆನ್ಸನ್  2ನೇ ತರಗತಿ ಮತ್ತು ವೈಷ್ಣವಿ 5ನೇ ತರಗತಿ.  ಶಾಲಾ ಸಂಚಾಲಕರಾದ ರೆ|ಫಾ  ಎಲಿಯಾಸ್ ಡಿ’ಸೋಜ, ಶಾಲಾ ಮುಖ್ಯೋಪಾಧ್ಯಾಯರಾದ ರೆ|ಫಾ ಜೋನ್ಸ್ ನ್ ಸಿಕ್ವೇರಾ ಕರಾಟೆ ತರಬೇತುದಾರರಾದ ಸೆನ್ ಸಾಯಿ ಜೆರಾಲ್ಡ್ ಫೆರ್ನಾಂಡಿಸ್ ಉಪಸ್ಥಿತರಿದ್ದಾರೆ.

More from the blog

ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವುದು ಹೇಗೆ….?​ ಇಲ್ಲಿದೆ ಮಾಹಿತಿ

ಬೆಂಗಳೂರು: ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು, ಶೇ 81.15 ಮಂದಿ ಉತ್ತೀರ್ಣಗೊಂಡಿದ್ದಾರೆ. 2024ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ ವಿಭಾಗದಲ್ಲಿ 1,28,448 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ...

ದ್ವಿತೀಯ ಪಿಯು ಫಲಿತಾಂಶ ಪ್ರಕಟ : ದಕ್ಷಿಣ ಕನ್ನಡ ಜಿಲ್ಲೆಗೆ ಮೊದಲ ಸ್ಥಾನ

ಬೆಂಗಳೂರು: ಮಾರ್ಚ್ 1ರಿಂದ ಮಾರ್ಚ್ 22ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಬುಧವಾರ ಪ್ರಕಟಗೊಂಡಿದೆ. ಬೆಂಗಳೂರಿನಲ್ಲಿ ಶಿಕ್ಷಣ ಇಲಾಖೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದೆ. ಈ ಬಾರಿ, ಶೇ 81.15 ಮಂದಿ ಉತ್ತೀರ್ಣರಾಗಿದ್ದಾರೆ....

ಶಾಲಾ ಸಮುದಾಯದತ್ತ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

ಮಾಣಿ: ಶೈಕ್ಷಣಿಕ ವಿಚಾರಗಳ ಸಂಬಂಧಿತವಾದ ಒಳ್ಳೆಯ ಚಚೆ೯ಗಳು ಮೂಡಿಬಂದಾಗ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗೆ ಪೂರಕವಾದ ಕೆಲಸಗಳು ಮೂಡಲು ಸಾಧ್ಯ ‌. ಪ್ರತಿಯೊಬ್ಬ ವಿದ್ಯಾರ್ಥಿ, ಪೋಷಕರು,ತನ್ನ ಶಾಲೆಯ ಬಗ್ಗೆ ಒಳ್ಳೆಯ ಭಾವನೆ, ಸಂಬಂಧ ಇರಬೇಕು...

ಮೈಟ್ ಎಜುಕೇಶನ್ ಸಂಸ್ಥೆಯ ವತಿಯಿಂದ 2024ರ ಪ್ರಾಕ್ಟಿಕಲ್ ಪರೀಕ್ಷೆ

ಮಂಗಳೂರು ಹಾಗೂ ಬಿಸಿರೋಡ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ಮೈಟ್ ಎಜುಕೇಶನ್ ಸಂಸ್ಥೆಯ ವತಿಯಿಂದ 2024ರ ಪ್ರಾಕ್ಟಿಕಲ್ ಪರೀಕ್ಷೆ ಸೋಮವಾರ ಬಿಸಿರೋಡ್ ಶಾಖೆಯಲ್ಲಿ ನಡೆಯಿತು. ಟೀಚರ್ಸ್ ಟ್ರೈನಿಂಗ್ ವಿಭಾಗದ ವಿದ್ಯಾರ್ಥಿನಿಯರಿಂದ ಪ್ರಸ್ತುತ ವರ್ಷದಲ್ಲಿ ತಯಾರಿಸಿದ ಎಲ್ಲಾ ಕಲಿಕಾ...