ಬಂಟ್ವಾಳ: ರೈಲಿನಡಿಗೆ ತಲೆಯಿಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಗೋಳ್ತಮಜಲು ಎಂಬಲ್ಲಿ ನಡೆದಿದೆ. ಮೃತರನ್ನು ಇಲ್ಲಿನ ಬಾಯಿಲ ನಿವಾಸಿ ಚಂದಪ್ಪ ಗೌಡ ಎಂಬವರ ಪುತ್ರ ದಿವಾಕರ (35) ಎಂದು ಗುರುತಿಸಲಾಗಿದೆ.

ಸುಬ್ರಹ್ಮಣ್ಯದಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ರೈಲಿಗೆ ಮಧ್ಯಾಹ್ನ 1.30 ಗಂಟೆ ಸುಮಾರಿಗೆ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.
ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ.
ಘಟನಾ ಸ್ಥಳಕ್ಕೆ ನಗರ ಠಾಣಾ ಹರೀಶ್, ಚಂದ್ರಶೇಟರ್, ಸಿಬ್ಬಂದಿ ಸುರೇಶ್, ಉಮೇಶ್ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದರು.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here