ವಿಟ್ಲ: ಕರ್ನಾಟಕ ಸೆಕೆಂಡರಿ ಪರೀಕ್ಷಾ ಮಂಡಳಿ ಬೆಂಗಳೂರು ಇವರು ನಡೆಸಿದ ಚಿತ್ರಕಲಾ ಪರೀಕ್ಷೆಯಲ್ಲಿ ವಿಟ್ಲ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ 29 ಮಕ್ಕಳು ಲೋವರ್ ಗ್ರೇಡ್ ಹಾಗೂ 8 ಮಕ್ಕಳು ಹೈಯರ್ ಗ್ರೇಡ್‌ನಲ್ಲಿ ಉತ್ತೀರ್ಣರಾಗಿರುತ್ತಾರೆ. ಲೋವರ್ ಗ್ರೇಡ್ ಪರೀಕ್ಷೆಯಲ್ಲಿ 3 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಹಾಗೂ 18 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ. ಹೈಯರ್ ಗ್ರೇಡ್ ಪರೀಕ್ಷೆಗೆ ಹಾಜರಾದ 8 ವಿದ್ಯಾರ್ಥಿಗಳಲ್ಲಿ ಒಬ್ಬ ವಿದ್ಯಾರ್ಥಿಯು ಡಿಸ್ಟಿಂಕ್ಷನ್ ಹಾಗೂ 7 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ. ಪರೀಕ್ಷೆಗೆ ಹಾಜರಾದ 37 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಶೇ.100% ಫಲಿತಾಂಶದ ಸಾಧನೆಯಾಗಿದೆ.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here