






ಪುತ್ತೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಶ್ರಯದಲ್ಲಿ ರಾಷ್ಟ್ರೀಯ ಶ್ರವಣ ದೋಷ ನಿಯಂತ್ರಣ ಹಾಗೂ ನಿವಾರಣಾ ಕಾರ್ಯಕ್ರಮದ ಅಂಗವಾಗಿ ಜಾನಪದ ಬೀದಿನಾಟಕ ಕಾರ್ಯಕ್ರಮವು ಪುತ್ತೂರು ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ ನೆಲ್ಲಿಕಟ್ಟೆ ಸರ್ಕಾರಿ ಪ್ರಾಥಮಿಕ ಶಾಲಾ ಆವರಣದಲ್ಲಿ ಶನಿವಾರ ನಡೆಯಿತು.
ಶಿಕ್ಷಣ ಇಲಾಖೆಯ ಸಮನ್ವಯ ಶಿಕ್ಷಣದ ಸಂಪನ್ಮೂಲ ವ್ಯಕ್ತಿ ತನುಜಾ ತಮ್ಕಿ ಬಾರಿಸುವ ಮೂಲಕ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಆರೋಗ್ಯದ ಬಗ್ಗೆ ಕಾಳಜಿ ಮೂಡಿಸುವ ಕಾರ್ಯಕ್ರಮ ಅರ್ಥ ಪೂರ್ಣವಾಗಿ ಮೂಡಿಬರಲಿ ಎಂದವರು ಶುಭ ಹಾರೈಸಿದರು.
ಸಂಸಾರ ಜೋಡುಮಾರ್ಗ ತಂಡದ ನಿರ್ದೇಶಕ ಮೌನೇಶ ವಿಶ್ವಕರ್ಮ, ವಲಯ ಸಂಪನ್ಮೂಲ ವ್ಯಕ್ತಿ ವೆಂಕಟೇಶ್,ಪುತ್ತೂರು ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿಗಳಾದ ಶಾಂತಿ ಜೆ.ಕೆ, ನಸ್ವೀರಾ ಕೆ.ಎಸ್. ವನಿತಾ, ಅಶ್ವಿನಿ, ಶಾಲಾಮುಖ್ಯ ಶಿಕ್ಷಕಿ ರಾಜೇಶ್ವರಿ, ಹಿರಿಯ ಶಿಕ್ಷಕಿ ಮೀನಾಕ್ಷಿ ಮೊದಲಾದವರು ಉಪಸ್ಥಿತರಿದ್ದರು. ಇದೇ ವೇಳೆ ಸಂಸಾರ ಜೋಡುಮಾರ್ಗ ತಂಡದ ಕಲಾವಿದರಾದ ಮೌನೇಶ ವಿಶ್ವಕರ್ಮ, ಲೋಕೇಶ್ ಬನ್ನೂರು, ಪೃಥ್ವಿರಾಜ್, ಧೀರಜ್, ಲಾವಣ್ಯ, ಸ್ವಾತಿ, ಸುದೇಶ್, ಕೃಷ್ಣಪ್ಪ ಸಂಪ್ಯ ರವರು ಶ್ರವಣ ದೋಷ ಪರಿಹಾರ, ಮುನ್ನೆಚ್ಚರಿಕೆ, ಚಿಕಿತ್ಸೆಗಳ ಕುರಿತಾಗಿ ಜಾಗೃತಿ ಬೀದಿನಾಟಕ ಹಾಗೂ ಹಾಡುಗಳನ್ನು ನಡೆಸಿಕೊಟ್ಟರು. ತಾಲೂಕಿನ ವಿವಿಧ ಶಾಲೆಗಳ ಎಸ್ ಡಿ ಎಂ ಸಿ ಸದಸ್ಯರು, ಶಾಲಾ ಮಕ್ಕಳು, ಆಶಾ ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.





