



ಬಂಟ್ವಾಳ: ಯುವ ಪ್ರತಿಭೆಗಳಿಗೆ ವೇದಿಕೆಯನ್ನು ಕಲ್ಪಿಸಿಕೊಡುವ ನಿಟ್ಟಿನಲ್ಲಿ ಶ್ರೀರಾಮ ಪದವಿ ಕಾಲೇಜಿನ ಪ್ರಬೋಧ ವಾಣಿಜ್ಯ ಸಂಘ ಮತ್ತು ಐ.ಕ್ಯೂ.ಎ.ಸಿ. ಆಶ್ರಯದಲ್ಲಿ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಆಯೋಜಿಸಿದ ಕಾಲೇಜು ಮಟ್ಟದ ವಿಧಾತ್ರಿ-2019-ಯುನಿಫೆಸ್ಟ್ Strive For Success” ಕಾರ್ಯಕ್ರಮವನ್ನು ಮಂಗಳೂರಿನ ಸಿವಿಲ್ ಇಂಜಿನಿಯರ್ ರಾಂಪ್ರಸಾದ್ ಕೊಂಬಿಲ ಉದ್ಘಾಟಿಸಿದರು.
ವೇದಿಕೆಯಲ್ಲಿ ಶ್ರೀರಾಮ ಪದವಿಪೂರ್ವ ಪ್ರಾಂಶುಪಾಲ ವಸಂತ ಬಲ್ಲಾಳ್ ಹಾಗೂ ಪದವಿ ಕಾಲೇಜಿನ ಪ್ರಾಚಾರ್ಯ ಕೃಷ್ಣಪ್ರಸಾದ ಕಾಯರ್ಕಟ್ಟೆ ಉಪಸ್ಥಿತರಿದ್ದರು.
ಸಮಾರೋಪ ಕಾರ್ಯಕ್ರಮದಲ್ಲಿ ಶ್ರೀರಾಮ ವಿದ್ಯಾಕೇಂದ್ರದ ಸಂಚಾಲಕ ವಸಂತ ಮಾಧವ ಅಧ್ಯಕ್ಷತೆ ವಹಿಸಿ ಸ್ಪರ್ಧೆಯು ವಿದ್ಯಾರ್ಥಿಗಳಲ್ಲಿ ಏಕಾಗ್ರತೆಯನ್ನು ಹೆಚ್ಚಿಸುತ್ತದೆ. ಪದವಿಪೂರ್ವ ವಿದ್ಯಾರ್ಥಿಗಳು ಕೇವಲ ಸ್ಪರ್ಧೆಗಳಲ್ಲಿ ಭಾಗವಹಿಸಿದ್ದು ಮಾತ್ರವಲ್ಲದೇ, ಪದವಿ ವಿದ್ಯಾರ್ಥಿಗಳೇ ವಿವಿಧ ಸ್ಪರ್ಧೆಗಳನ್ನು ನಡೆಸಿಕೊಟ್ಟಿರುವುದು ವಿಶೇಷ. ಇಂತಹ ಸ್ಪರ್ಧೆಗಳಿಂದ ಬದುಕನ್ನು ರೂಪಿಸುವ ಕಲೆಯನ್ನು ಬೆಳೆಸಿಕೊಳ್ಳಲು ಸಾಧ್ಯ ಎಂದರು.
ಅತಿಥಿಗಳಾಗಿ ಬಿಗ್ಬ್ಯಾಗ್ ಕಂಪೆನಿಯ ಅಸಿಸ್ಟೆಂಟ್ ಅಕೌಂಟೆಂಟ್ ರಾಜೇಶ್ ನರಿಂಗಾಣ, ಮೂಡಬಿದಿರೆಯ ಆಳ್ವಾಸ್ ಕಾಲೇಜಿನ ವಾಣಿಜ್ಯ ಉಪನ್ಯಾಸಕಿ ಸೌಮ್ಯಶ್ರೀ ಜೆ., ಸಂತ ಆಗ್ನೇಸ್ ಕಾಲೇಜಿನ ವಾಣಿಜ್ಯ ಉಪನ್ಯಾಸಕ, ವಿಷ್ಣು ಪೂಜಾರಿ, ಸರಕಾರ ಪ್ರಥಮ ದರ್ಜೆ ಕಾಲೇಜು ವಾಮದಪದವು ಸ್ನಾತಕೋತ್ತರ ವಿಭಾಗದ ಅತಿಥಿ ಉಪನ್ಯಾಸಕಿ ನಮಿತಾ ಆಗಮಿಸಿದ್ದರು.
ವೇದಿಕೆಯಲ್ಲಿ ನ್ಯಾಯವಾದಿ ಶಿವಗಿರಿ ಸತೀಶ್ ಭಟ್, ಶ್ರೀರಾಮ ಪದವಿಪೂರ್ವ ಪ್ರಾಂಶುಪಾಲ ವಸಂತ ಬಲ್ಲಾಳ್ ಹಾಗೂ ಪದವಿ ಕಾಲೇಜಿನ ಪ್ರಾಚಾರ್ಯ ಕೃಷ್ಣಪ್ರಸಾದ ಕಾಯರ್ಕಟ್ಟೆ ಉಪಸ್ಥಿತರಿದ್ದರು.
ಪದವಿಪೂರ್ವ ವಿಭಾಗದ ಒಟ್ಟು 271 ವಿದ್ಯಾರ್ಥಿಗಳು, ಅಂತಿಮ ವರ್ಷದ ವಿದ್ಯಾರ್ಥಿಗಳು ನಡೆಸಿಕೊಟ್ಟ 13 ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿದ್ದರು. ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಸಮಗ್ರ ಪ್ರಶಸ್ತಿಗೆ ಭಾಜನರಾದರು. ದ್ವಿತೀಯ ವಾಣಿಜ್ಯ ’ಬಿ’ ವಿಭಾಗದ ವಿದ್ಯಾರ್ಥಿಗಳು ದ್ವಿತೀಯ ಸ್ಥಾನವನ್ನು ಪಡೆದುಕೊಂಡರು.
ಪದವಿ ವಿಭಾಗದ ವಾಣಿಜ್ಯ ಉಪನ್ಯಾಸಕಿ ಕುಮಾರಿ ಸುಶ್ಮಿತಾ ಕಾರ್ಯಕ್ರಮದ ವರದಿ ಹಾಗೂ ಬಹುಮಾನದ ಪಟ್ಟಿ ವಾಚಿಸಿದರು. ವಿಜ್ಞಾನ ಉಪನ್ಯಾಸಕಿ ಕವಿತಾ ಅತಿಥಿಗಳನ್ನು ಸ್ವಾಗತಿಸಿ, ವಾಣಿಜ್ಯ ಉಪನ್ಯಾಸಕಿ ಶೈಲಜಾ ವಂದಿಸಿ, ಇಂಗ್ಲೀಷ್ ಉಪನ್ಯಾಸಕಿ ಲತಾಶ್ರೀ ಕಾರ್ಯಕ್ರಮ ನಿರೂಪಿಸಿದರು.






