

ಬಂಟ್ವಾಳ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ತಾಲೂಕು ಬಾಲಭವನ ಸೊಸೈಟಿ ಇವರ ಸಂಯುಕ್ತ ಆಶ್ರಯದಲ್ಲಿ ಗಣರಾಜ್ಯೋತ್ಸವ ಆಚರಣೆಯ ಅಂಗವಾಗಿ ಮಕ್ಕಳಿಗೆ ದೇಶ ಭಕ್ತಿ ಗೀತೆ ಹಾಗೂ ಪ್ರಭಂಧ ಸ್ಪರ್ಧೆ ಸ್ತ್ರೀ ಶಕ್ತಿ ಭವನದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದ ತಾ.ಪಂ.ಉಪಾಧ್ಯಕ್ಷ ಅಬ್ಬಾಸ್ ಆಲಿ ಪ್ರತಿಭೆಯ ಅನಾವರಣದ ಜೊತೆ ಕರ್ತವ್ಯ ಮತ್ತು ಹಕ್ಕುಗಳ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸುವ ಉದ್ದೇಶದಿಂದ ಸ್ಪರ್ಧೆಯನ್ನು ಏರ್ಪಡಿಸಿದ್ದು ಉತ್ತಮ ಕಾರ್ಯ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಸಿದ್ದ ತಾ.ಪಂ.ಅದ್ಯಕ್ಷ ಚಂದ್ರಹಾಸ ಕರ್ಕೇರ ಮಾತನಾಡಿ ಭಾರತೀಯತೆಯ ಬಗ್ಗೆ ವಿದ್ಯಾರ್ಥಿಗಳು ಅರಿತುಕೊಂಡು ಬದುಕಲು ಪ್ರಯತ್ನಿಸಿದಾಗ ಉತ್ತಮ ಸಮಾಜ ನಿರ್ಮಾಣ ಸಾಧ್ಯ ಎಂದು ಅವರು ಹೇಳಿದರು.
ಸ್ವಚ್ಚ ಭಾರತದ ಪರಿಕಲ್ಪನೆಯ ಜೊತೆ ಸಾಮರಸ್ಯದ ಸಮಾಜದ ನಿರ್ಮಾಣ ಕ್ಕೆ ವಿದ್ಯಾರ್ಥಿಗಳ ಬಹುದೊಡ್ಡ ಪಾಲು ಬೇಕಾಗಿದೆ ಎಂದು ಅವರು ಹೇಳಿದರು.
ಕಾರ್ಯಕ್ರಮ ದಲ್ಲಿ ತಾ.ಪಂ.ಸದಸ್ಯೆ ಮಲ್ಲಿಕಾ ಶೆಟ್ಟಿ, ತಾ.ಪಂ.ಇಒ.ರಾಜಣ್ಣ, ತೀರ್ಪುಗಾರರರಾದ ವೆಂಕಟಕ್ರಷ್ಣ ಭಟ್ ಶಿಕ್ಷಣ ಇಲಾಖೆಯ ಸುರೇಖಾ , ಪತ್ರಕರ್ತ ಹರೀಶ್ ಮಾಂಬಾಡಿ, ಬಂಟ್ವಾಳ ಸಿಡಿಪಿಒ ಮಲ್ಲಿಕಾ , ವಿಟ್ಲ ಸಿಡಿಪಿಒ ಸುಧಾಜೋಶಿ ಮತ್ತಿತರರು ಉಪಸ್ಥಿತರಿದ್ದರು.
ಬಂಟ್ವಾಳ ಸಿ.ಡಿ.ಪಿ.ಒ ಮಲ್ಲಿಕಾ ಸ್ವಾಗತಿಸಿದರು. ವಿಟ್ಲ ಮೇಲ್ವಿಚಾರಕಿ ಪುಷ್ಪ ವಂದಿಸಿದರು. ಹಿರಿಯ ಮೇಲ್ವಿಚಾರಕಿ ಗಾಯತ್ರಿ ಕಂಬಳಿ ಕಾರ್ಯಕ್ರಮ ನಿರೂಪಿಸಿದರು.







