


ಬಂಟ್ವಾಳ, ಫೆ. ೧೫: ಜಮ್ಮು-ಕಾಶ್ಮೀರದ ಪುಲ್ವಾಮದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ಕಾಂಗ್ರೆಸ್ ಬಂಟ್ವಾಳ ಕ್ಷೇತ್ರದ ವತಿಯಿಂದ ಶುಕ್ರವಾರ ರಾತ್ರಿ ಬಿ.ಸಿ.ರೋಡ್ ಜಂಕ್ಷನ್ನಲ್ಲಿ ಮೇಣದ ಬತ್ತಿ ಹಿಡಿದು ಮೌನ ಪ್ರತಿಭಟನೆ ನಡೆಸಿ, ಘಟನೆಯನ್ನು ಖಂಡಿಸಲಾಯಿತು.
ಈ ಸಂದರ್ಭದಲ್ಲಿ ಮಾಜಿ ಸಚಿವ ರಮಾನಾಥ ರೈ, ಜಿಪಂ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ, ಪದ್ಮಶೇಖರ್ ಜೈನ್, ಎಂ.ಎಸ್. ಮುಹಮ್ಮದ್, ತಾಪಂ ಉಪಾಧ್ಯಕ್ಷ ಅಬ್ಬಾಸ್ ಅಲಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬೇಬಿ ಕುಂದರ್, ಸುದೀಪ್ಕುಮಾರ್ ಶೆಟ್ಟಿ, ಮಾಯಿಲಪ್ಪ ಸಾಲ್ಯಾನ್, ಮಾಧವ ಮಾವೆ, ವಾಸುಪೂಜಾರಿ, ಮದುಸೂಧನ್, ಸಿದ್ದೀಕ್ ಸರವು, ಸಿದ್ದೀಕ್ ಗುಡ್ಡೆಯಂಗಡಿ, ಲೊಕೇಶ್ ಸುವರ್ಣ, ಚಂದ್ರಶೇಖರ ಪೂಜಾರಿ ಹಾಜರಿದ್ದರು.





