Friday, October 27, 2023

ಪುಂಜಾಲಕಟ್ಟೆ: ಅಪ್ರಾಪ್ತ ಬಾಲಕನಿಗೆ ಲೈಂಗಿಕ ದೌರ್ಜನ್ಯ

Must read

ಬಂಟ್ವಾಳ: ಅಪ್ರಾಪ್ತ ಬಾಲಕನೋರ್ವನಿಗೆ ಲೈಂಗಿಕ ದೌರ್ಜನ್ಯ ಹಾಗೂ ಕೊಲೆ ಬೆದರಿಕೆವೊಡ್ಡಿದ ಆರೋಪದ ಮೇರೆಗೆ ಆರೋಪಿಯ ವಿರುದ್ಧ ಫೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿ, ಬಂಧಿಸಿದ ಘಟನೆ ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರವಿವಾರ ನಡೆದಿದೆ.
ಬಂಟ್ವಾಳ ತಾಲೂಕು ಪಿಲಾತಬೆಟ್ಟು ಗ್ರಾಮದ ನಯನಾಡು ನಿವಾಸಿ ರಮಾನಂದ ಶೆಣೈ ಬಂಧಿತ ಆರೋಪಿಯಾಗಿದ್ದು, ಆರೋಪಿಯನ್ನು ನಾಳೆ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಬಾಲಕ ಪಿಲಾತಬೆಟ್ಟು ಗ್ರಾಮದ ನಯನಾಡು ಎಂಬಲ್ಲಿರುವ ರಮಾನಂದ ಶೆಣೈ ಎಂಬವರ ಸೈಕಲ್ ರಿಪೇರಿ ಅಂಗಡಿಗೆ ತನ್ನ ಸೈಕಲ್ ನ್ನು ರಿಪೇರಿ ಮಾಡಿಸಲು ತೆರಳಿದ್ದು, ಈ ವೇಳೆ ಆರೋಪಿಯು ಪುಸಲಾಯಿಸಿ ಮನೆಗೆ ಕರೆದುಕೊಂಡು ಹೋಗಿರುತ್ತಾನೆ. ಅಲ್ಲಿ ಯಾರೂ ಇಲ್ಲದ ವೇಳೆ ಬಾಲಕನಿಗೆ ಲೈಂಗಿಕ ದೌರ್ಜನ್ಯವೆಸಗಲು ಪ್ರಯತ್ನಿಸಿದಾಗ ಬಾಲಕನು ಆರೋಪಿಯ ಹೊಟ್ಟೆಗೆ ಕಾಲಿನಿಂದ ತುಳಿದು ತಪ್ಪಿಸಿಕೊಂಡು
ಅಲ್ಲಿಂದ ಸ್ನೇಹ ಗಿರಿ ಎಂಬಲ್ಲಿಗೆ ತನ್ನ ಸೈಕಲ್ ನಲ್ಲಿ ಹೋಗುತ್ತಿದ್ದಾಗ, ಆರೋಪಿಯು ತನ್ನ ಸೈಕಲ್ ನಲ್ಲಿ ಹಿಂಬಾಲಿಸಿಕೊಂಡು ಬಂದು ನೊಂದ ಬಾಲಕನನ್ನು ಎಳೆದು ನಿಲ್ಲಿಸಿ ಈ ವಿಚಾರವನ್ನು ಯಾರಿಗಾದರೂ ಹೇಳಿದರೆ ನಿನ್ನನ್ನು ಸಾಯಿಸುತ್ತೇನೆ. ನಿನ್ನ ಸೈಕಲ್ ಅನ್ನು ಹುಡಿ ಮಾಡುತ್ತೇನೆ ಎಂದು ಬೆದರಿಕೆವೊಡ್ಡಿದ್ದಾನೆ ಎಂದು ಪೊಲೀಸ್ ದೂರಿನಲ್ಲಿ ತಿಳಿಸಲಾಗಿದೆ.
ಈ ಸಂದರ್ಭ ಬಾಲಕನ ದೂರಿನಂತೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಫೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

More articles

Latest article