Thursday, April 11, 2024

ಶ್ರೀರಾಮ ಪದವಿ ಕಾಲೇಜಿನಲ್ಲಿ ಅಂತರ್‌ರಾಷ್ಟ್ರೀಯ ಮಹಿಳಾ ದಿನಾಚರಣೆ

ಬಂಟ್ವಾಳ: ಶ್ರೀರಾಮ ಪ್ರಥಮ ದರ್ಜೆ ಕಾಲೇಜು ಇಲ್ಲಿನ ಪ್ರಣತಿ ಇಂಗ್ಲೀಷ್ ಸಂಘದ ವತಿಯಿಂದ ಅಂತರ್‌ರಾಷ್ಟ್ರೀಯ ಮಹಿಳಾ ದಿನ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪದವಿ ಪ್ರಾಚಾರ್ಯ ಕೃಷ್ಣಪ್ರಸಾದ್ ಕಾಯರ್‌ಕಟ್ಟೆ ವಹಿಸಿ, ಎಲ್ಲಾ ದೇಶಗಳಲ್ಲಿರುವ ಅಭಿಪ್ರಾಯವೆಂದರೆ ಪುರುಷರು ಮತ್ತು ಮಹಿಳೆಯರು ಸಮಾನರು. ಆದರೆ ಭಾರತ ದೇಶದಲ್ಲಿ ಹೆಣ್ಣಿನ ಬಗ್ಗೆ ಇರುವ ಕಲ್ಪನೆಯೇ ವಿಭಿನ್ನ. ಪುರುಷರಿಗಿಂತಲೂ ಮಹಿಳೆ ಮಿಗಿಲು ಎಂಬ ಪೂಜನೀಯ ಭಾವ ನಮ್ಮದು. ನಮ್ಮ ಪೂರ್ವಜರು ಭೂಮಿಯನ್ನು ಹೆಣ್ಣಿಗೆ ಹೋಲಿಸಿದ್ದಾರೆ. ಯಾಕೆಂದರೆ ಬೀಜವು ಭೂಮಿಗೆ ಬಿದ್ದಾಗ ಮಾತ್ರ ಮೊಳಕೆಯೊಡೆಯಲು ಸಾಧ್ಯ. ಹಾಗೆಯೇ ಹೆಣ್ಣಿಗೆ ಮಾತ್ರ ಜನ್ಮ ನೀಡುವ ಸಾಮರ್ಥ್ಯವಿರುವುದು. ಈ ದೃಷ್ಟಿಯಿಂದಲೇ ಹೆಣ್ಣು ಮಾತೃಸ್ವರೂಪಿ ಎಂದೆನಿಸಿಕೊಂಡಿದ್ದಾಳೆ ಎಂದರು.
ಈ ಸಂದರ್ಭದಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿನಿ ಕುಮಾರಿ ಅನಿತಾ ಈ ದಿನದ ಮಹತ್ವವನ್ನು ವಿವರಿಸಿದರು.
ವೇದಿಕೆಯಲ್ಲಿ ಪ್ರಣತಿ ಇಂಗ್ಲೀಷ್ ಸಂಘದ ನಿರ್ದೇಶಕಿ ಎಲ್. ಶ್ರೀದೇವಿ, ವಾಣಿಜ್ಯಶಾಸ್ತ್ರ ಉಪನ್ಯಾಸಕಿ ಸುಕನ್ಯಾ, ಶೈಲಜಾ ಉಪಸ್ಥಿತರಿದ್ದರು. ಪ್ರಥಮ ವರ್ಷದ ವಿದ್ಯಾರ್ಥಿನಿ ಕುಮಾರಿ ಶ್ರೇಯಶ್ರೀ ಪಿ. ವಂದಿಸಿ, ಕಾರ್ಯಕ್ರಮವನ್ನು ನಿರೂಪಿಸಿದರು.

More from the blog

ಗುಡ್ಡೆ ಅಂಗಡಿ ನೂರೂದ್ದೀನ್ ಮಸೀದಿಯಲ್ಲಿ ಈದ್ ಮುಬಾರಕ್ ಆಚರಣೆ

ಗುಡ್ಡೆ ಅಂಗಡಿ ನೂರೂದ್ದೀನ್ ಮಸೀದಿಯಲ್ಲಿ ಈದ್ ಮುಬಾರಕ್ ಆಚರಣೆ ನಡೆಯಿತು. ಖತೀಬರಾದ ಅಸ್ವೀಫ್ ಧಾರಿಮಿ ಅವರು ನೇತೃತ್ವ ವಹಿಸಿ ಈದ್ ಸಂದೇಶವನ್ನು ಸಾರಿದರು.. ಪುರಸಭಾ ಸದಸ್ಯ ಅಬುಬಕ್ಕರ್ ಸಿದ್ದೀಕ್, ಎನ್‌.ಜೆ.ಎಮ್ ಮಸೀದಿ  ಇದರ ಅಧ್ಯಕ್ಷ...

ದ್ವಿತೀಯ ಪಿಯು ಫಲಿತಾಂಶ ಪ್ರಕಟ : ದಕ್ಷಿಣ ಕನ್ನಡ ಜಿಲ್ಲೆಗೆ ಮೊದಲ ಸ್ಥಾನ

ಬೆಂಗಳೂರು: ಮಾರ್ಚ್ 1ರಿಂದ ಮಾರ್ಚ್ 22ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಬುಧವಾರ ಪ್ರಕಟಗೊಂಡಿದೆ. ಬೆಂಗಳೂರಿನಲ್ಲಿ ಶಿಕ್ಷಣ ಇಲಾಖೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದೆ. ಈ ಬಾರಿ, ಶೇ 81.15 ಮಂದಿ ಉತ್ತೀರ್ಣರಾಗಿದ್ದಾರೆ....

ಏ.10ರಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ…. ರಿಸಲ್ಟ್​ ಚೆಕ್ ಮಾಡೋದು ಹೇಗೆ?

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ನಾಳೆ ಪ್ರಕಟಿಸಲಾಗುತ್ತಿದೆ. ಎಲ್ಲ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಮುಕ್ತಾಯವಾದ ಹಿನ್ನಲೆ ನಾಳೆ ಫಲಿತಾಂಶ ಪ್ರಕಟಿಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮುಂದಾಗಿದೆ. ನಾಳೆ...

ಮತ್ತೆ ಏರಿಕೆ ಕಂಡ ಚಿನ್ನದ ಬೆಲೆ : ಇವತ್ತಿನ ‌ಬೆಲೆ ಎಷ್ಟು ಗೊತ್ತಾ…?

ಯುಗಾದಿ ಹಬ್ಬ. ಇದು ಸಂಬಂಧ ಬೆಸೆಯುವ ಹಬ್ಬ. ಅಂದಹಾಗೆಯೇ ದೇಶದಾದ್ಯಂತ ಜನರು ಇಂದು ಸಂಭ್ರಮದಲ್ಲಿದ್ದಾರೆ. ಆದರೆ ಇದರ ನಡುವೆ ಚಿನ್ನದ ಬೆಲೆ ಏರಿಕೆಯ ಬಿಸಿಯಿಂದ ಕೊಂಚ ಬೇಸರವು ಅವರಲ್ಲಿ ಆವರಿಸಿದೆ. ಕಳೆದ ಎರಡು ದಿನಗಳ...