ಬಂಟ್ವಾಳ: ಪಿಂಚಣಿ ಸಹಿತ ವಿವಿಧ ಸೌಲಭ್ಯಗಳಿಗೆ ಆಧಾರ್ ಕಾರ್ಡ್‌ನ ಜನ್ಮ ದಿನಾಂಕ ಪರಿಗಣಿಸದಂತೆ ಭವಿಷ್ಯ ನಿಧಿ ಕಛೇರಿಗೆ ನಿರ್ದೇಶನ ನೀಡಲು ಸಂಸದ ನಳಿನ್ ಕುಮಾರ್ ಕಟೀಲು ಅವರಿಗೆ ತಾ.ಪಂ. ಸದಸ್ಯ ಪ್ರಭಾಕರ ಪ್ರಭು ಮನವಿ ಮಾಡಿದ್ದಾರೆ.
ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ನೀಡುತ್ತಿರುವ ವಿವಿಧ ಪಿಂಚಣಿ ಸೌಲಭ್ಯ ಪಡೆಯಲು ಆಧಾರ್ ಕಾರ್ಡ್‌ನಲ್ಲಿರುವ ಜನ್ಮದಿನಾಂಕ ಮಾನದಂಡವಾಗಿ ಪರಿಗಣಿಸಿ ಸೌಲಭ್ಯ ನೀಡಲಾಗುತ್ತಿತ್ತು. ಇದರಿಂದ ಪ್ರಾರಂಭದಲ್ಲಿ ಆಧಾರ್ ಕಾರ್ಡ್ ಮಾಡಿಸುವಾಗ ಅಂದಾಜು ಪ್ರಕಾರ ಜನ್ಮ ದಿನಾಂಕ ನೀಡಿದವರು ಸೌಲಭ್ಯಗಳಿಂದ ವಂಚಿತರಾಗುತ್ತಿದ್ದರು. ಬೀಡಿ ಕಾರ್ಮಿಕರು ಸಹ ತಮ್ಮ ವಯಸ್ಸಿನ ಮೇಲೆ ನಿವೃತ್ತಿ ಪಿಂಚಣಿ ಪಡೆಯಲು ತುಂಬಾ ತೊಂದರೆಯಾಗುತ್ತಿತ್ತು. ಸಾವಿರಾರು ಮಂದಿ ಅವಿಧ್ಯಾವಂತ ಬೀಡಿ ಕಾರ್ಮಿಕರು ಆಧಾರ್ ಕಾರ್ಡ್‌ನಲ್ಲಿ ತಮ್ಮ ಜನ್ಮ ದಿನಾಂಕ ತಿದ್ದುಪಡಿ ಮಾಡಲು ಯಾವುದೇ ಮೂಲ ದಾಖಲೆ ಅಥವಾ ಪುರಾವೆಗಳಿಲ್ಲದೆ ಗೊಂದಲಕ್ಕೀಡಾಗಿದ್ದಾರೆ. ಜನ್ಮ ದಿನಾಂಕದ ದಾಖಲೆಗಳಿದ್ದರೂ ಸಹ 3 ವರ್ಷಕ್ಕಿಂತ ಹೆಚ್ಚಿನ ವ್ಯತ್ಯಾಸವಿದ್ದಲ್ಲಿ ತಿದ್ದುಪಡಿಗೆ ಅವಕಾಶ ಆಧಾರ್ ಕೇಂದ್ರದಲ್ಲಿ ನೀಡುತ್ತಿರಲಿಲ್ಲಿ. ಇದರಿಂದ ತುಂಬಾ ಜನರ ಆಧಾರ್ ಕಾರ್ಡ್‌ನಲ್ಲಿ ಜನ್ಮ ದಿನಾಂಕ ತಿದ್ದುಪಡಿಯಾಗದೆ ತಿರಸ್ಕೃತ ಗೊಳ್ಳುತ್ತಿತ್ತು.
ಇದೀಗ ಕೇಂದ್ರ ಸರಕಾರದ ಮಾಹಿತಿ ತಂತ್ರಜ್ಞಾನ ಸಚಿವಾಲಯ ನವದೆಹಲಿ ಇವರ ಅಧಿಕೃತ ಜ್ಙಾಪನ ಎಫ್.ನಂ.ಎಫ್.ನಂ.4(4)57/186/2016 ಇ & ಯು ದಿನಾಂಕ: 21/12/2018
ಯು.ಐ.ಡಿ.ಎ.ಐ. ವಿಭಾಗೀಯ ಕಛೇರಿ ಬೆಂಗಳೂರು ಇವರ ಪತ್ರ ಸಂಖ್ಯೆ ಎಫ್.ನಂ. ಆರ್11013724/2018 ದಿನಾಂಕ:1-1-2019ರಂತೆ ಹೊರಡಿಸಿದ ಆದೇಶದಲ್ಲಿ ಯಾವುದೇ ಯೋಜನೆಗಳಿಗೆ ಆಧಾರ್ ಕಾರ್ಡ್ ಗುರುತು ಪತ್ರವೇ ಹೊರತಾಗಿ ಅದರಲ್ಲಿನ ಜನ್ಮ ದಿನಾಂಕವನ್ನು ಪುರಾವೆಯಾಗಿ ಯಾವುದೇ ಪಿಂಚಣಿ ಸಂಬಂಧಿಸಿದ ಯೋಜನೆಗಳಿಗೆ ಪರಿಗಣಿಸಬಾರದು. ಎಂದು ಸ್ಪಷ್ಟವಾಗಿ ತಿಳಿಸಲಾಗಿರುತ್ತದೆ. ಅದರಂತೆ ರಾಜ್ಯ ಸರಕಾರದ ಸಾಮಾಜಿಕ ಭದ್ರತೆ ಮತ್ತು ಪಿಂಚಣಿಗಳ ನಿರ್ದೇಶನಾಲಯದ ನಿರ್ದೇಶಕರು ಆಧಾರ್ ಕಾಡ್‌ರ್ಸನಲ್ಲಿನ ಜನ್ಮ ದಿನಾಂಕ ಪರಿಗಣಿಸದಿರುವಂತೆ ಎಲ್ಲಾ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿರುತ್ತಾರೆ.
ಆದರೆ ಬೀಡಿ ಕಾರ್ಮಿಕರಿಗೆ ತಮ್ಮ ತಮ್ಮ ಪಿಂಚಣಿ ಹಾಗೂ ಇತರ ಸೌಲಭ್ಯ ಪಡೆಯಲು ಬೀಡಿ ಕಾರ್ಮಿಕರ ಗುರುತು ಚೀಟಿಯಲ್ಲಿ ನಮೂದಿಸಿದ ಜನ್ಮದಿನಾಂಕಕ್ಕೆ ಆಧಾರ್ ಕಾರ್ಡ್‌ನಲ್ಲಿ ಸಹ ತಿದ್ದುಪಡಿ ಮಾಡಬೇಕು ಹಾಗೂ ಕೇಂದ್ರ ಸರಕಾರದ ಮಾಹಿತಿ ತಂತ್ರಜ್ಞಾನ ಸಚಿವಾಲಯದ ಆದೇಶ ಕಾರ್ಮಿಕರ ಭವಿಷ್ಯ ನಿಧಿ ಕಛೇರಿಗೆ ಸಂಬಂಧಪಡುವುದಿಲ್ಲ ಎಂದು ಭವಿಷ್ಯ ನಿಧಿಯ ಹಿರಿಯ ಅಧಿಕಾರಿಗಳು ತಿಳಿಸಿರುತ್ತಾರೆ. ಆದುದರಿಂದ ಕೇಂದ್ರ ಸರಕಾರದ ಮಾಹಿತಿ ತಂತ್ರಜ್ಞಾನ ಸಚಿವಾಲಯ ಆದೇಶದಂತೆ ಆಧಾರ್ ಕಾರ್ಡ್‌ನಲ್ಲಿಯ ಜನ್ಮ ದಿನಾಂಕವನ್ನು ಪುರಾವೆಯಾಗಿ ಪರಿಗಣಿಸದಂತೆ ಸಂಬಂಧಪಟ್ಟ ಭವಿಷ್ಯ ನಿಧಿ ಪ್ರಾದೇಶಿಕ ಆಯುಕ್ತರಿಗೆ ಸೂಕ್ತ ನಿರ್ದೇಶನ ನೀಡುವಂತೆ ಈ ಮೂಲಕ ಕೋರುತ್ತೇನೆ.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here