Saturday, April 6, 2024

ಕಲ್ಲುಬೆಟ್ಟು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ಯುಗಾದಿ ಉತ್ಸವ, ರಜತ ಕವಚ, ಮಹಾದ್ವಾರ ಸಮರ್ಪಣೆ

ಬಂಟ್ವಾಳ: ಬಂಟ್ವಾಳ ತಾಲೂಕು ಪಿಲಾತಬೆಟ್ಟು ಗ್ರಾಮದ ಕಲ್ಲುಬೆಟ್ಟು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ವೇ|ಮೂ| ಬಾಲಕೃಷ್ಣ ಪಾಂಗಣ್ಣಾಯ ಅವರ ನೇತೃತ್ವದಲ್ಲಿ ಯುಗಾದಿ ಉತ್ಸವ , ಚಂಡಿಕಾ ಹೋಮ, ರಜತ ಕವಚ ಮತ್ತು ಮಹಾದ್ವಾರ ಸಮರ್ಪಣೆ ಹಾಗೂ ಯಕ್ಷಗಾನ ಬಯಲಾಟವು ಎ.೬ರಂದು ಜರಗಿತು.
ಬೆಳಗ್ಗೆ ದೇವರ ಪ್ರಾರ್ಥನೆ, ಸ್ವಸ್ತಿ ಪುಣ್ಯಾಹವಾಚನ, ಯಕ್ಷಗಾನ ಬಯಲಾಟ ಸಮಿತಿ ವತಿಯಿಂದ ಶ್ರೀ ಗಣಪತಿ ದೇವರಿಗೆ ರಜತ ಕವಚ ಸಮರ್ಪಣೆ, ಪಂಚಾಮೃತ ಅಭಿಷೇಕ, ಅಲಂಕಾರ ಪೂಜೆ, ಮಧ್ಯಾಹ್ನ ಚಂಡಿಕಾಹೋಮ ಪೂರ್ಣಾಹುತಿ, ಮಂಗಳಾರತಿ, ಮಹಾಪೂಜೆ, ಪ್ರಸಾದ ವಿತರಣೆ ನಡೆಯಿತು.
ಸಂಜೆ ಭಜನೆ, ನಿವೃತ್ತ ಗ್ರಾಮಕರಣಿಕ ಅಣ್ಣು ಪೂಜಾರಿ ಮೂರ್ಜೆ ಅವರ ಹೆತ್ತವರ ಸ್ಮರಣಾರ್ಥ ನಿರ್ಮಿಸಲಾದ ಮಹಾದ್ವಾರದ ಸಮರ್ಪಣೆ ಕಾರ್ಯಕ್ರಮ ನಡೆಯಿತು. ಕಾವಳ ಮಾಗಣೆ ತಂತ್ರಿ ಗಣಪತಿ ಮುಚ್ಚಿನ್ನಾಯ ಅವರು ನೂತನ ದ್ವಾರವನ್ನು ಉದ್ಘಾಟಿಸಿದರು. ರಾತ್ರಿ ರಂಗಪೂಜೆ , ಕಟೀಲು ಮೇಳದವರಿಂದ ಯಕ್ಷಗಾನ ಬಯಲಾಟ ಶ್ರೀ ಕಟೀಲು ಕ್ಷೇತ್ರ ಮಹಾತ್ಮೆ ಪ್ರದರ್ಶನಗೊಂಡಿತು.
ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಾರಾಯಣ ಶೆಟ್ಟಿ ಕಲ್ಲುಬೆಟ್ಟು, ಪ್ರ.ಅರ್ಚಕ ಗೋವಿಂದ ಭಟ್, ದ್ವಾರ ಕೊಡುಗೆ ನೀಡಿದ ಅಣ್ಣು ಪೂಜಾರಿ ಮತ್ತು ಮನೆಯವರು, ಗ್ರಾ.ಪಂ.ಅಧ್ಯಕ್ಷ ಚಂದ್ರಶೇಖರ ಶೆಟ್ಟಿ,ಯಕ್ಷಗಾನ ಸಮಿತಿ ಗೌರವಾಧ್ಯಕ್ಷ ನಾರಾಯಣ ಶೆಟ್ಟಿ ಕುಮಂಗಿಲ, ಅಧ್ಯಕ್ಷ ಪುಷ್ಪರಾಜ್ ಶೆಟ್ಟಿ, ವ್ಯವಸ್ಥಾಪನ ಸಮಿತಿ ಸದಸ್ಯರಾದ ರಾಜೇಂದ್ರ ಕೆ.ವಿ., ಮೋಹನ ಸಾಲ್ಯಾನ್, ರವೀಂದ್ರ ಶೆಟ್ಟಿ, ನೋಣಯ್ಯ ಮೂಲ್ಯ, ರಮೇಶ್ ನಾಯ್ಕ, ಲೀಲಾವತಿ ಪಿ.ಶೆಟ್ಟಿ, ಸುನೀತ ಹೆಗ್ಡೆ, ಯಕ್ಷಗಾನ ಸಮಿತಿಯ ಪದಾಧಿಕಾರಿಗಳಾದ ಧರ್ಣಪ್ಪ ಪೂಜಾರಿ, ಮಂಜಪ್ಪ ಮೂಲ್ಯ, ಜಾರಪ್ಪ ಪೂಜಾರಿ, ಸುಂದರ ಶೆಟ್ಟಿ, ಪ್ರಕಾಶ್ ರಾವ್, ಶ್ರೀಧರ ಕೆ.ವಿ. ಮತ್ತಿತರರು ಉಪಸ್ಥಿತರಿದ್ದರು.

More from the blog

ನೀತಿ ಸಂಹಿತೆ ಉಲ್ಲಂಘನೆ : ಕೋಟಾ ಶ್ರೀನಿವಾಸ್‌ ಪೂಜಾರಿಗೆ ಕೋರ್ಟ್‌ ಸಮನ್ಸ್‌

ಬೆಂಗಳೂರು: ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್‌ ಪೂಜಾರಿ ಅವರಿಗೆ ಕೋರ್ಟ್‌ ಸಮನ್ಸ್‌ ಜಾರಿ ಮಾಡಿದೆ. ಕೋಟಾ ಶ್ರೀನಿವಾಸ ಪೂಜಾರಿ, ಗುರ್ಮೆ ಸುರೇಶ್ ಶೆಟ್ಟಿ, ಲಾಲಾಜಿ ಮೆಂಡನ್ ಹಾಗೂ ಶಾಲಾ ಆಡಳಿತ ಮಂಡಳಿಗೆ ಜನಪ್ರತಿನಿಧಿಗಳ ವಿಶೇಷ...

ಸರ್ಕಾರದ ಕೋವಿ ಠೇವಣಿ ಕ್ರಮ: ಪರವಾನಿಗೆ ಪಡೆದ ರೈತರಿಂದ ಚುನಾವಣೆ ಬಹಿಷ್ಕಾರ 

ವಿಟ್ಲ: ಕರ್ನಾಟಕ ರಾಜ್ಯ ರೈತ ಸಂಘ ಹಸಿರುಸೇನೆಯ ದ.ಕ.ಜಿಲ್ಲಾ ಸಮಿತಿ ಮತ್ತು ಕೋವಿ ಪರವಾನಿಗೆ ಪಡೆದ ರೈತ ಬಳಕೆದಾರರ ಸಂಘವು ಈ ಬಾರಿ ಚುನಾವಣೆ ಬಹಿಷ್ಕರಿಸುತ್ತದೆ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಶ್ರೀಧರ...

ಟ್ರಾಫಿಕ್ ಪೊಲೀಸ್ ಠಾಣೆಯ ಕಾಮಗಾರಿಯನ್ನು ಪೊಲೀಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ

ಬಂಟ್ವಾಳ; ಬಿಸಿರೋಡಿನ ಪಾಣೆಮಂಗಳೂರಿನಲ್ಲಿ ಅಂದಾಜು ರೂ.3.18 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಟ್ರಾಫಿಕ್ ಪೋಲೀಸ್ ಠಾಣೆಯ ಕಾಮಗಾರಿಯನ್ನು ಪೋಲಿಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ ನಡೆಸಿದರು. ಉತ್ತಮ ಗುಣಮಟ್ಟದಲ್ಲಿ ಠಾಣೆಯ ಕೆಲಸವನ್ನು ಮಾಡುವ...

ಸೌಜನ್ಯ ಹೋರಾಟ ಸಮಿತಿಯಿಂದ ನೋಟ ಅಭಿಯಾನ

ಮಂಗಳೂರು: ರಾಜಕೀಯ ಪಕ್ಷಗಳು ಮತ್ತು ನ್ಯಾಯಾಂಗ ವ್ಯವಸ್ಥೆಯ ಗಮನ ಸೆಳೆಯುವ ಉದ್ದೇಶದಿಂದ ಸೌಜನ್ಯ ಪರ ಹೋರಾಟ ಸಮಿತಿ ವತಿಯಿಂದ ಮುಂಬರುವ‌ ಲೋಕಸಭಾ ಚುನಾವಣೆಯಲ್ಲಿ ನೋಟಕ್ಕೆ ಮತ ಚಲಾಯಿಸಲು ಜನ ಸಾಮಾನ್ಯರನ್ನು ಪ್ರೇರೇಪಿಸಲು ನೋಟ...