

ಅಡ್ಯನಡ್ಕ: ಅಡ್ಯನಡ್ಕ ಜನತಾ ಪದವಿಪೂರ್ವ ಕಾಲೇಜು ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 95 ಶೇ. ಫಲಿತಾಂಶ ಪಡೆದಿದೆ.
ಕಾಲೇಜಿನ ಒಟ್ಟು 99 ಮಂದಿ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಇವರಲ್ಲಿ 94 ಮಂದಿ ಉತ್ತೀರ್ಣರಾಗಿದ್ದಾರೆ. ಒಟ್ಟು 22
ಮಂದಿ ವಿಶಿಷ್ಟ ಶ್ರೇಣಿಯಲ್ಲಿ ಪಾಸಾಗಿದ್ದು, ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ವೇದದೀಕ್ಷಾ ಅತೀ ಹೆಚ್ಚು ಅಂದರೆ 568 ಅಂಕ
ಪಡೆದಿದ್ದಾರೆ. ಈ ಸಂದರ್ಭದಲ್ಲಿ ಅಡ್ಯನಡ್ಕ ಎಜುಕೇಶನಲ್ ಸೊಸೈಟಿಯ ಅಧ್ಯಕ್ಷರು, ಸಂಚಾಲಕರು, ಆಡಳಿತ ಮಂಡಳಿ ಹಾಗೂ
ಬೋಧಕ ವರ್ಗದವರು ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.







