ಬಂಟ್ವಾಳ: ಪದವಿಪೂರ್ವ ಶಿಕ್ಷಣ ಇಲಾಖೆ ಸೋಮವಾರ ದ್ವಿತೀಯ ಪಿಯುಸಿ ಫಲಿತಾಂಶ ಪರೀಕ್ಷೆ ಫಲಿತಾಂಶ ಪ್ರಕಟಿಸಿದೆ. ಉಡುಪಿ ಪ್ರಥಮ, ದಕ್ಷಿಣ ಕನ್ನಡ ದ್ವಿತೀಯ, ಕೊಡಗು ಮೂರನೇ ಸ್ಥಾನ ಪಡೆದುಕೊಂಡಿದೆ.
2018-19ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದೆ. ಈ ಬಾರಿಯೂ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದಾರೆ.
ಮೊದಲ ಸ್ಥಾನ ಉಡುಪಿ- ಶೇ.92.20 ಎರಡನೇ ಸ್ಥಾನ ದಕ್ಷಿಣ ಕನ್ನಡ ಶೇ. 90.91- ತೃತೀಯ ಸ್ಥಾನ ಕೊಡಗು- 83.31 ಹಾಗೂ ಚಿತ್ರದುರ್ಗ ಕೊನೆಯ ಸ್ಥಾನ ಶೇ.51.42 ರಷ್ಟು ಗಳಿಸಿದೆ.
ಬೆಂಗಳೂರು ಗ್ರಾಮಾಂತರ 10ನೇ ಸ್ಥಾನ, ಬೆಂಗಳೂರು ಉತ್ತರ 11ನೇ ಸ್ಥಾನ, ವಿಕಲಚೇತನ ವಿದ್ಯಾರ್ಥಿಗಳು ಉತ್ತಮ ಫಲಿತಾಂಶ, ದೃಷ್ಟಿ ವಿಕಲಚೇತನರು ಶೇ. 72ರಷ್ಟು ಫಲಿತಾಂಶ ಪಡೆದಿದ್ದಾರೆ.
94 ಅನುದಾನ ರಹಿತ ಪದವಿ ಪೂರ್ವ ಕಾಲೇಜುಗಳು ಶೂನ್ಯ ಫಲಿತಾಂಶ ಪಡೆದುಕೊಂಡಿವೆ. ಮೂರು ಸರ್ಕಾರಿ ಪದವಿ ಪೂರ್ವ ಕಾಲೇಜುಗಳು ಶೂನ್ಯ ಫಲಿತಾಂಶ ಪಡೆದಿವೆ.
ಎಲ್ಲಾ ಕಾಲೇಜುಗಳಲ್ಲಿ ಪಿಯು ಫಲಿತಾಂಶ ಏ.16ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು http://pue.kar.nic.in ಮತ್ತು http://www.karresults.nic.in ವೆಬ್​ಸೈಟಿನ ಮೂಲಕ ಫಲಿತಾಂಶ ವೀಕ್ಷಿಸಬಹುದಾಗಿದೆ.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here