Sunday, October 22, 2023

ಬಂಟ್ವಾಳದಲ್ಲಿ ಚುನಾವಣೆಗೆ ಸಿದ್ಧತೆ

Must read

ಬಂಟ್ವಾಳ: ಎ. 18ರ ಬೆಳಗ್ಗೆ 7 ಗಂಟೆಯಿಂದ ಆರಂಭಗೊಳ್ಳುವ ಲೋಕಸಭಾ ಚುನಾವಣೆಯ ಮಸ್ಟರಿಂಗ್ ಕಾರ್ಯ ಬುಧವಾರ ಮೊಡಂಕಾಪು ಶಾಲೆಯಲ್ಲಿ ನಡೆಯಿತು.
ರಾಜ್ಯ ಚುನಾವಣಾ ಪರಿವೀಕ್ಷರು  ಬೆಳಿಗ್ಗೆ ಮೊಡಂಕಾಪುವಿಗೆ  ಆಗಮಿಸಿ, ಜಿಪಂ ಸಿಇಒ ಡಾ. ಸೆಲ್ವಮಣಿ, ಎಆರ್ ಒ ಮಹೇಶ್  ಮತ್ತು ತಹಶೀಲ್ದಾರ್ ಸಣ್ಣ ರಂಗಯ್ಯ ಅವರಿಂದ ಮಸ್ಟರಿಂಗ್ ಕಾರ್ಯದ ಮಾಹಿತಿ ಪಡೆದರು.
ಶಾಂತಿಯುತ ಮತದಾನಕ್ಕೆ ಹೆಚ್ಚಿನ ಬಂದೋಬಸ್ತ್ ಕಾರ್ಯಗಳನ್ನು ನಡೆಸಲಾಗಿದೆ. ಯಾವುದೇ ಗೊಂದಲಗಳಿಲ್ಲದೆ ಚುನಾವಣೆ ನಡೆಯಲಿದೆ ಎಂದು ಜಿಪಂ ಸಿಇಒ ಡಾ.ಸೆಲ್ವಮಣಿ ಮಾಹಿತಿ ನೀಡಿದರು.
ಚುನಾವಣೆಗೆ ತಾಲೂಕು ಆಡಳಿತ ಸಂಪೂರ್ಣವಾಗಿ ಸಜ್ಜಾಗಿದೆ. ಯಾವುದೇ ಬೂತ್ ಗಳಲ್ಲಿ ಗೊಂದಲಗಳ ನಡೆಯದಂತೆ ಹೆಚ್ಚಿನ ಅಧಿಕಾರಿಗಳನ್ನು ನಿಯೋಜನೆ ಮಾಡಲಾಗಿದೆ. ಹೆಚ್ಚಿನ ನಿಗಾ ವಹಿಸಿ, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ತಾಪಂ ಮುಖ್ಯಕಾರ್ಯ ನಿರ್ವಹಣಾಧಿಕಾರಿ ರಾಜಣ್ಣ ಮಾಹಿತಿ ನೀಡಿದರು.
ಇದೇ ವೇಳೆ ಬಂಟ್ವಾಳ ಕ್ಷೇತ್ರದ 249 ಮತಗಟ್ಟೆಗಳಿಗೆ ಮತಗಟ್ಟೆಯ ಸಿಬ್ಬಂದಿಗಳು ಮತದಾನ ಪ್ರಕ್ರಿಯೆಗೆ ಬೇಕಾದ ಇವಿಎಂ ಯಂತ್ರಗಳ ಸಹಿತ ನಾನಾ ಸಿದ್ಧತೆಗಳನ್ನು ಪರಿಶೀಲಿಸಿ ತಮ್ಮ ಬೂತ್ ಗಳಿಗೆ ತೆರಳಿದರು.

More articles

Latest article