Sunday, April 7, 2024

ಎ.25ರಂದು ಸಾಮೂಹಿಕ ವಿವಾಹ

ಬಂಟ್ವಾಳ: ಎಸ್ ಕೆ ಎಸ್ ಎಸ್ ಎಫ್ ಬಂಟ್ವಾಳ ಕೇಂದ್ರ ಘಟಕದ ಆಶ್ರಯದಲ್ಲಿ ಐದನೇ ವಾರ್ಷಿಕೋತ್ಸವದ ಪ್ರಯುಕ್ತ 6 ಜೋಡಿಗಳ ಸಾಮೂಹಿಕ ವಿವಾಹ ಹಾಗೂ ಅಗಲಿದ ಸಮಸ್ತ ನೇತಾರರ ಅನುಸ್ಮರಣೆ ಕಾರ್ಯಕ್ರಮವು ಎ.25ರಂದು ಬಿ.ಸಿ.ರೋಡಿನ ಸ್ಪರ್ಶಾ ಕಲಾಮಂದಿರದಲ್ಲಿ ನಡೆಯಲಿದೆ. ರಶೀದ್ ಆಲಿ ಶಿಹಾಬ್ ತಂಞಳ್ ರವರು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಲಿದ್ದು, ಮಂಗಳೂರು ತ್ವಾಖ ಅಹಮದ್ಮುಸ್ಲಿಯಾರ್ ಖಾಝಿ ಅವರು ಅಧ್ಯಕ್ಷತೆ ವಹಿಸುವರು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರಾದ ಜಮೀರ್ ಅಹಮ್ಮದ್ ,ಯು.ಟಿ.ಖಾದರ್, ಮಾಜಿ ಸಚಿವ ರಮಾನಾಥ ರೈ, ಶಾಸಕರಾದ ರಾಜೇಶ್ ನಾಯ್ಕ್ಉಳಿಪಾಡಿ, ಎನ್.ಎ.ಹ್ಯಾರಿಸ್,ಬಿ.ಎಂ.ಫಾರೂಕ್, ಸಹಿತ ಹಲವಾರು ಗಣ್ಯರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

More from the blog

ಬಂಟ್ವಾಳ: ನಿಯಮ ಮೀರಿ ಚಾಲನೆ ಮಾಡಿ ಪೋಲೀಸರ ಕೈಗೆ ಸಿಕ್ಕಿಬಿದ್ದರೆ ದಂಡ ಗ್ಯಾರಂಟಿ….

ಬಂಟ್ವಾಳ: ರಸ್ತೆಯಲ್ಲಿ ಟ್ರಾಫಿಕ್ ಪೋಲೀಸರು ದಂಡ ವಸೂಲಿ ಮಾಡುವ ವೇಳೆ ಸುಳ್ಳು ಹೇಳಿಬಚಾವಾಗಲು ಸಾಧ್ಯವಿಲ್ಲ, ಜೊತೆಗೆ ಅಸಭ್ಯ ವರ್ತನೆ ಮಾಡಿದರೆ ಜೋಕೆ, ಅವರ ಶರೀರದಲ್ಲಿ ಕಣ್ಗಾವಲು ಕ್ಯಾಮರಾ ಅಳವಡಿಸಿಲಾಗಿದ್ದು, ಸೂಕ್ಷ್ಮವಾಗಿ ಎಲ್ಲವನ್ನು ಸೆರೆ...

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ : ಚೆಂಡಿನ ಗದ್ದೆಯಲ್ಲಿ ಪ್ರಥಮ ಚೆಂಡು

ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ದೇವಳದ ಚೆಂಡಿನ ಗದ್ದೆಯಲ್ಲಿ ಇಂದು ಪ್ರಥಮ ಚೆಂಡು ನಡೆಯಿತು. ‌ ಇವತ್ತಿನಿಂದ ಮುಂದಿನ ಐದು ದಿನಗಳ ಕಾಲ ಇಲ್ಲಿ ಚೆಂಡು...

ಏಪ್ರಿಲ್ 7ರಂದು ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ

ಬಂಟ್ವಾಳ: ಏಪ್ರಿಲ್ 7ರಂದು ಅಪರಾಹ್ನ 3 ಗಂಟೆಗೆ ಬಿ.ಸಿ.ರೋಡು ರಂಗೋಲಿ ಸಭಾಂಗಣದಲ್ಲಿ ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ ನಡೆಯಲಿದೆ ಎಂದು ತಾಲೂಕು ಘಟಕದ...

ದ್ವಿಚಕ್ರ ವಾಹನಕ್ಕೆ ರಿಕ್ಷಾ ಡಿಕ್ಕಿ : ಸಹಸವಾರ ಸ್ಥಳದಲ್ಲೇ ಮೃತ್ಯು

ಬಂಟ್ವಾಳ: ರಿಕ್ಷಾ ಡಿಕ್ಕಿಯಾಗಿ ದ್ವಿಚಕ್ರ ವಾಹನದಲ್ಲಿ ಸಂಚಾರ ಮಾಡುತ್ತಿದ್ದ ಸಹಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನರಿಕೊಂಬು ಎಂಬಲ್ಲಿ ನಡೆದಿದೆ. ನರಿಕೊಂಬು ನಿವಾಸಿ ನೀಲಪ್ಪ ಪೂಜಾರಿ ಅವರ ಮಗ ಪವನ್ ( 17) ಮೃತಪಟ್ಟ ಬಾಲಕ. ಮನೆಯಿಂದ...