


ಬಂಟ್ವಾಳ: ತಾಲೂಕಿನ ಶಂಭೂರು ಗ್ರಾಮದ ಕೊದಂಟಿಯಡ್ಕ, ಕೊಪ್ಪಲದಲ್ಲಿ ನೂತನವಾಗಿ ನಿರ್ಮಾಣವಾದ ದೈವಸ್ಥಾನದಲ್ಲಿ ಧೂಮಾವತಿ ಬಂಟ ಸಪರಿವಾರ ದೈವಗಳ ಪುನರ್ ಪ್ರತಿಷ್ಠೆಯು ಮೇ.13ರಂದು ಪಳನೀರು ಅನಂತ ಭಟ್ ಅವರ ನೇತೃತ್ವದಲ್ಲಿ ನಡೆಯಲಿದೆ ಎಂದು ಸಮಿತಿ ಅಧ್ಯಕ್ಷ ಆನಂದ ಎ.ಶಂಭೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅಂದು ಬೆಳಿಗ್ಗೆ ಮಹಿಳೆಯರಿಂದ ಶ್ರೀ ಲಲಿತಾ ಸಹಸ್ರನಾಮ ಪಠಣ, ಜಿಲ್ಲೆಯ ಪ್ರಸಿದ್ದ ತಂಡಗಳಿಂದ ಕುಣಿತ ಭಜನೆ, ಬಳಿಕ ದೈವಗಳ ಪ್ರತಿಷ್ಠೆ, ಬ್ರಹ್ಮಕಲಶಾಭಿಷೇಕ ನಡೆಯಲಿದೆ ಎಂದು ತಿಳಿಸಿದ್ದಾರೆ. ನಂತರ ಮಾಜಿ ಮುಖ್ಯಮಂತ್ರಿಯವರ ಆಪ್ತ ಕಾರ್ಯದರ್ಶಿ ಜಗನ್ನಾಥ ಬಂಗೇರ ಅವರ ಆಧ್ಯಕ್ಷತೆಯಲ್ಲಿ ನಡೆಯುವ ಧಾರ್ಮಿಕ ಸಭೆಯಲ್ಲಿ ಒಡಿಯೂರು ಕ್ಷೇತ್ರದ ಶ್ರೀ ಗುರುದೇವಾನಂದ ಸ್ವಾಮೀಜಿ ಆಶೀರ್ವಚನ ನೀಡಲಿದ್ದು, ರಾಜ್ಯ ಸಂಸ್ಕಾರಭಾರತಿ ಲೋಕಕಲಾ ವಿಭಾಗದ ಪ್ರಮುಖ್ ದಯಾನಂದ ಕತ್ತಲ್ ಸಾರ್ ಧಾರ್ಮಿಕ ಉಪನ್ಯಾಸ ನೀಡುವರು,ಹಲವಾರು ಗಣ್ಯರು ಅತಿಥಿಗಳಾಗಿ ಭಾಗವಹಿಸಿದ್ದರು. ಸಂಜೆ ವಿಠಲ ನಾಯಕ್ ಮತ್ತು ಬಳಗದಿಂದ ಗೀತಾ ಸಾಹಿತ್ಯ ಸಂಭ್ರಮ ನಡೆಯಲಿದ್ದು,ರಾತ್ರಿ ವೈದ್ಯನಾಥ ಮತ್ತು ಧೂಮಾವತಿ ದೈವಗಳಿಗೆ ನೇಮೋತ್ಸವ ಜರಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.







