

ಮಾನಸಿಕ ಅಸ್ವಸ್ಥನನ್ನು ಮರಕ್ಕೆ ಕಟ್ಟಿ ಹಾಕಿದ ಸ್ಥಳೀಯರು!
ಬಂಟ್ವಾಳ, ಮೇ ೫: ದೇವಸ್ಥಾನದ ಡಬ್ಬಿಯಿಂದ ಹಣವನ್ನು ಕಳವಿಗೆ ಯತ್ನಿಸುತ್ತಿದ್ದ ಎಂಬ ಆರೋಪದ ಮೇರೆಗೆ ಇಲ್ಲಿನ ನಿವಾಸಿಗಳು ಮಾನಸಿಕ ಅಸ್ವಸ್ಥರೊಬ್ಬರನ್ನು ಮರಕ್ಕೆ ಕಟ್ಟಿ ಹಾಕಿದ ಘಟನೆ ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದಲ್ಲಿ ರವಿವಾರ ನಡೆದಿದೆ.
ಇಲ್ಲಿನ ತುಂಬೆಯಲ್ಲಿ ಪುನರ್ ನಿರ್ಮಾಣಗೊಳ್ಳುತ್ತಿರುವ ಶ್ರೀ ಮಹಾಲಿಂಗೆಶ್ವರ ದೇವಸ್ಥಾನದಲ್ಲಿ ಈತ
ಕಳ್ಳತನ ನಡೆಸಲು ಯತ್ನಿಸಿದ್ದ ಎಂಬ ಆರೋಪದ ಮೇರೆಗೆ ಮಂಗಳೂರು ಹೊರವಲಯದ ಅಡ್ಯಾರ್ನ ಯುವಕನೋರ್ವನನ್ನು ಸ್ಥಳೀಯರು ಪೊಲೀಸರಿಗೆ ಒಪ್ಪಿಸಿದ್ದಾರೆ.
ಈತ ದೇವಸ್ಥಾನದ ಕಾಣಿಕೆ ಡಬ್ಬಿಯಿಂದ ಹಣವನ್ನು ಎಗರಿಸಿ ಪರಾರಿಯಾಗಲೆತ್ನಿಸಿದಾಗ ಸ್ಥಳೀಯರೊಬ್ಬರು ಗಮನಿಸಿ ಬೆನ್ನಟ್ಟಿದ್ದಾರೆ. ಈ ಸಂದರ್ಭ ಆರೋಪಿಯು ರಸ್ತೆ ದಾಟಿ ಮನೆಯೊಂದಕ್ಕೆ ನುಗಿದ್ದಾಗ ಆತನನ್ನು ಹಿಡಿದು ಕೊಠಡಿಯಲ್ಲಿ ಕೂಡಿ ಹಾಕಲಾಗಿತ್ತು ಎನ್ನಲಾಗಿದೆ. ಬಳಿಕ ಇಲ್ಲಿನ ಕೆಲ ನಿವಾಸಿಗಳು ಸೇರಿ ಆತನನ್ನು ಅಲ್ಲಿಂದ ಕರೆತಂದು ಮರಕ್ಕೆ ಕಟ್ಟಿ ಹಾಕಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
“ಈತನು ವಶಕ್ಕೆ ಪಡೆದುಕೊಂಡಿದ್ದು, ಮನೆಯವರಿಗೆ ಮಾಹಿತಿ ನೀಡಲಾಗಿದೆ. ಈತ ಮಾನಸಿಕ ಅಸ್ವಸ್ಥನೆಂದು ಪರಿಚಯಸ್ಥರು ಮಾಹಿತಿ ನೀಡಿದ್ದಾರೆ. ಬಂದರ್ ಸಹಿತ ಕೆಲ ಸ್ಥಳಗಳಲ್ಲಿ ಕಳವಿಗೆ ಯತ್ನ ಮಾಡಿದ್ದು ಎನ್ನಲಾಗಿದ್ದು, ಈವರೆಗೂ ಯಾವುದೇ ಪ್ರಕರಣ ದಾಖಲಾಗಿಲ್ಲ. ಅದಲ್ಲದೆ, ತುಂಬೆಯಲ್ಲಿ ನಡೆದ ಘಟನೆಯ ಬಗ್ಗೆ ದೇವಸ್ಥಾನಕ್ಕೆ ಸಂಬಂಧಪಟ್ಟವರು ದೂರು ನೀಡದ ಹಿನ್ನೆಲೆಯಲ್ಲಿ ಈತನ ಮೇಲೆ ಯಾವುದೇ ಪ್ರಕರಣವನ್ನು ದಾಖಲಿಸಿಲ್ಲ ಎಂದು ಬಂಟ್ವಾಳ ಗ್ರಾಮಾಂತರ ಪೊಲೀಸ್ರು ತಿಳಿಸಿದ್ದಾರೆ.








