ಬಂಟ್ವಾಳ: ಸುರಕ್ಷಿತ ಪ್ರಯಾಣದ ದೃಷ್ಟಿಯಿಂದ ಪೊಲೀಸ್‌ ಹಿರಿಯ ಅಧಿಕಾರಿಗಳ ಆದೇಶದಂತೆ ಸರಕು ಸಾಗಾಟ ವಾಹನಗಳಲ್ಲಿ ಕೂಲಿ ಕಾರ್ಮಿಕರನ್ನು ಅಥವಾ ಇತರ ಪ್ರಯಾಣಿಕರನ್ನು ಸಾಗಾಟ ಮಾಡುವಂತಿಲ್ಲ. ಇದರಿಂದ ಯಾವುದೇ ಅಪಾಯದ ಸನ್ನಿವೇಶಕ್ಕೆ ಕಾರಣವಾಗಬಾರದು.


ಕಟ್ಟಡ ನಿರ್ಮಾಣ ಗುತ್ತಿಗೆದಾರರು ತಮ್ಮ ಕಾರ್ಮಿಕರನ್ನು ಯಾವುದೇ ಕಾರಣಕ್ಕೂ ಲಾರಿಗಳ ಅಥವಾ ಟಿಪ್ಪರ್‌ಗಳಲ್ಲಿ ಸಾಗಾಟ ಮಾಡಬಾರದು. ಲಾರಿಯ ಕ್ಯಾಬಿನ್‌ನಲ್ಲಿ ಕುಳಿತುಕೊಂಡು ಪ್ರಯಾಣಿಸಲು ಅನುಮತಿ ಇರುವ ಸಂಖ್ಯೆಯಷ್ಟೇ ಜನರು ಪ್ರಯಾಣ ಮಾಡಬೇಕು.
ಕಟ್ಟಡ ನಿರ್ಮಾಣ ಗುತ್ತಿಗೆದಾರರು ಸರಕು ಸಾಗಾಟ ವಾಹನಗಳಲ್ಲಿ ಕಾರ್ಮಿಕರನ್ನು ಸಾಗಾಟ ನಡೆಸುತ್ತಿರುವ ಪದ್ಧತಿಯನ್ನು ಅನುಸರಿಸುತ್ತಿದ್ದಾರೆ. ಸರಕು ಸಾಗಾಟ ವಾಹನಗಳಲ್ಲಿ ಕಾರ್ಮಿಕರನ್ನು ಅಥವಾ ಜನರನ್ನು ಸಾಗಾಟ ಮಾಡುವುದು ಪರವಾನಿಗೆ ನಿಯಮಕ್ಕೆ ವಿರುದ್ಧವಾಗಿದೆ. ಕಾರ್ಮಿಕರನ್ನು ಒಂದು ಸ್ಥಳದಿಂದ ಇನ್ನೊಂದು ಸ್ಥಳಕ್ಕೆ ಸಾಗಾಟ ಮಾಡಲು ಇತರ ವಾಹನಗಳನ್ನು ಬಳಕೆ ಮಾಡಬೇಕು. ಸರಕು ಸಾಗಾಟ ವಾಹನಗಳಲ್ಲಿ ಜನರನ್ನು ಸಾಗಾಟ ನಡೆಸಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here