



ವಿಟ್ಲ: ಸರಕಾರದ ಮಹತ್ತರ ಯೋಜನೆಗೆ ಇಲಾಖೆಯ ಅಧಿಕಾರಿಗಳ ಮತ್ತು ಶಿಕ್ಷಕರ ಕ್ರಿಯಾಶೀಲತೆ, ಜನಪ್ರತಿನಿಧಿಗಳ ಬೆಂಬಲ, ಜನತೆಯ ಸಹಕಾರ ಇದ್ದಲ್ಲಿ ಆ ಯೋಜನೆಯು ಯಶಸ್ಸನ್ನು ಗಳಿಸಲು ಸಾಧ್ಯ ಎನ್ನುವುದಕ್ಕೆ ಕರ್ನಾಟಕ ಪಬ್ಲಿಕ್ ಶಾಲೆ ಕನ್ಯಾನವು ಸಾಕ್ಷಿಯಾಗಿದೆ.
ಬಂಟ್ವಾಳ ತಾಲೂಕು ನಲಿಕೆಯವರ ಸಮಾಜ ಸೇವಾ ಸಂಘದ ವತಿಯಿಂದ ಬಂಟ್ವಾಳ ತಾಲೂಕಿನ ಸ್ವಜಾತಿ ಸಮಾಜದ 1 ರಿಂದ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣಾ ಕಾರ್ಯಕ್ರಮ ಜೂ.2 ರಂದು ವಿಟ್ಲ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿದೆ ಎಂದು ಬಂಟ್ವಾಳ ತಾಲೂಕು ನಲಿಕೆಯವರ ಸಮಾಜ ಸೇವಾ ಸಂಘದ ಅಧ್ಯಕ್ಷ ರಮೇಶ್ ಕಡಂಬು ತಿಳಿಸಿದರು.
ಅವರು ವಿಟ್ಲ ಪ್ರೆಸ್ಕ್ಲಬ್ನಲ್ಲಿ ಬುಧವಾರ ಪತ್ರಿಕಾಗೋಷ್ಠಿ ನಡೆಸಿ ಕಳೆದ 13 ವರ್ಷಗಳ ಹಿಂದೆ ಸ್ಥಾಪನೆಯಾದ ಸಂಘ ಸಾಮಾಜಿಕ, ಶೈಕ್ಷಣಿಕ, ಆರೋಗ್ಯ ಇನ್ನಿತರ ಸೇವಾ ಕಾರ್ಯಗಳನ್ನು ನಡೆಸುತ್ತಿದೆ. ತಾಲೂಕು ಸಮಿತಿ 9 ವಲಯ ಸಮಿತಿಗಳನ್ನು ಹೊಂದಿದ್ದು, ಆಯಾಯ ವ್ಯಾಪ್ತಿಯಲ್ಲಿ ವಲಯ ಸಮಿತಿಗಳು ಕಾರ್ಯ ನಿರ್ವಹಿಸುತ್ತಿವೆ. ತಾಲೂಕಿನ ಸುಮಾರು 450 ಮನೆಗಳಿಗೆ ಭೇಟಿ ಮಾಡಿ ಪ್ರತಿಯೊಂದು ಮನೆಯಿಂದ ಕನಿಷ್ಠ ಒಬ್ಬರನ್ನು ಸದಸ್ಯರನ್ನಾಗಿ ಮಾಡಲಾಗಿದೆ. ಆ ಮನೆಗಳ ಸ್ಥಿತಿಗತಿಗಳ ಮಾಹಿತಿ ಸಂಗ್ರಹಿಸುವ ಕಾರ್ಯ ನಡೆದಿದೆ ಎಂದು ತಿಳಿಸಿದರು.
ಜೂ.2 ರಂದು ಸಮಾಜದ ಗಣ್ಯರ, ಮುಖಂಡರ ಉಪಸ್ಥಿತಿಯಲ್ಲಿ ಪುಸ್ತಕ ವಿತರಣಾ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಸಂಘದ ಗೌರವ ಸಲಹೆಗಾರ ಜಿ.ಎನ್.ನೋಣಯ್ಯ, ನಿಕಟಪೂರ್ವ ಅಧ್ಯಕ್ಷ ರಾಮಣ್ಣ ಪಿಲಿಂಜ, ಜತೆ ಕಾರ್ಯದರ್ಶಿ ದಯಾನಂದ ಕಡಂಬು ಉಪಸ್ಥಿತರಿದ್ದರು.






