Wednesday, April 17, 2024

ವಿದ್ಯಾರ್ಥಿಗಳು ಓದುವ ಹವ್ಯಾಸ ಬೆಳಸಿ: ಸತೀಶ್ ಶೆಟ್ಟಿ

ಬಂಟ್ವಾಳ: ’ರಾಜ್ಯ, ರಾಷ್ಟ್ರ, ಅಂತರಾಷ್ಟ್ರೀಯ, ಪ್ರಾಂತೀಯ ಹಾಗೂ ಮಾತೃಭಾಷೆಗಳನ್ನು ತಿಳಿಯಿರಿ. ಪಠ್ಯ ಪುಸ್ತಕಗಳ ಜೊತೆಗೆ ಇತರ ಪುಸ್ತಕಗಳನ್ನೂ ಓದುವ ಹವ್ಯಾಸವನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕು ಎಂದು ಮಂಗಳೂರು ಶ್ರೀ ರಾಮಕೃಷ್ಣ ಮಠದ ಸತೀಶ್ ಶೆಟ್ಟಿ ಅವರು ಹೇಳಿದ್ದಾರೆ. ಬಂಟ್ವಾಳದ ಬಿ.ಆರ್.ಎಂ.ಪಿ.ಸಿ.ಪಿ. ಶಾಲೆಯಲ್ಲಿ ಮಂಗಳೂರು ರಾಮಕೃಷ್ಣ ಆಶ್ರಮದ ಸಂಚಾರಿ ಗ್ರಂಥಾಲಯದ ಪುಸ್ತಕ ಪ್ರದರ್ಶನ ಹಾಗೂ ಮಾರಾಟ ನಿರ್ವಹಿಸಿ  ಮಾತನ್ನಾಡಿದ ಅವರು,   ಕಲಿತ ವಿದ್ಯೆ, ಪಡೆದ ಜ್ಞಾನ ಇವೇ ಮಾನವನ ಬೆಳವಣಿಗೆಗೆ ಪೂರಕ,ತಂದೆ ತಾಯಿಗಳನ್ನು ಗೌರವಿಸಿ. ಶಿಸ್ತಿನಿಂದ ಜೀವನವನ್ನು ರೂಪಿಸಿಕೊಳ್ಳಿ. ಸ್ವಚ್ಛತೆಯು ನಿಮ್ಮನ್ನು ಭಗವಂತನೆಡೆಗೆ ಒಯ್ಯುತ್ತದೆ’ ಎಂದು ಹೇಳಿದರು. . ಶಾಲಾ ಪ್ರಾಂಶುಪಾಲೆ ರಮಾಶಂಕರ್ ಸಿ. ಶುಭಾಶಂಸನೆಗೈದರು. ಆಸಕ್ತ ವಿದ್ಯಾರ್ಥಿಗಳು ರಾಮಕೃಷ್ಣ ಪರಮಹಂಸ, ವಿವೇಕಾನಂದ ಮೌಲ್ಯಾಧಾರಿತ ಪುಸ್ತಕಗಳನ್ನು ಖರೀದಿಸಿದರು. ಚಿತ್ರಕಲಾ ಶಿಕ್ಷಕ ಹರೀಶ್ ಆಚಾರ್ಯ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು.

More from the blog

ಬಂಟ್ವಾಳದ ನರಿಕೊಂಬು ಗ್ರಾಮದಲ್ಲಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

2024 ರ ಎ. 26 ರಂದು ನಡೆಯುವ ಲೋಕಸಭಾ ಚುನಾವಣೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರನ್ನು ಬಹುಮತದಿಂದ ಗೆಲ್ಲಿಸಿಕೊಡುವ ನಿಟ್ಟಿನಲ್ಲಿ "ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಗ್ರಾಮ,ಮನೆ,ಮನ ಸಂಪರ್ಕ ಅಭಿಯಾನ" ಎಂಬ...

ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ಆತ್ಮಹತ್ಯೆ

ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಫರಂಗಿಪೇಟೆಯಲ್ಲಿ ಮಹಿಳೆಯೊಬ್ಬರು ತಂದೆ ಹಾಗೂ ಪುತ್ರಿಯ ಮುಂದೆಯೇ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು‌ ನಡೆದಿದೆ. ಕುಮ್ಡೇಲು ನಿವಾಸಿ ಉಮೇಶ್ ಬೆಳ್ಚಡರ ಪತ್ನಿ...

ಲೋಕಸಭಾ ಚುನಾವಣೆ : ದಕ್ಷಿಣ ಕನ್ನಡ ಕ್ಷೇತ್ರದ ಸಂಯೋಜಕರನ್ನಾಗಿ ಅಬ್ದುಲ್ ರೆಹಮಾನ್ ಪಡ್ಪು ನೇಮಕ

ಲೋಕಸಭಾ ಚುನಾವಣೆಯ ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸಲು ಸಂಯೋಜಕರನ್ನಾಗಿ ಅಬ್ದುಲ್ ರೆಹಮಾನ್ ಪಡ್ಪು ಅವರನ್ನು ನೇಮಕ ಮಾಡಲಾಗಿದೆ.    

ವಿಟ್ಲ ಪೇಟೆಯಲ್ಲಿ ಕಾಂಗ್ರೆಸ್ ರೋಡ್ ಶೋ: ಸುಡುಬಿಸಿಲಿಗೂ ಜಗ್ಗದ ಉತ್ಸಾಹ

ವಿಟ್ಲ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರು ಮಂಗಳವಾರ ವಿಟ್ಲ ಪೇಟೆಯಲ್ಲಿ ರೋಡ್ ಶೋ ನಡೆಸಿ, ಪ್ರಚಾರ ಕಾರ್ಯ ನಡೆಸಿದರು. ಧಾರ್ಮಿಕ ಕೇಂದ್ರಗಳಲ್ಲಿ ವಿಶೇಷ ಪ್ರಾರ್ಥನೆ ನಡೆಸಿ, ಬಳಿಕ...