ಬಂಟ್ವಾಳ: ಸಮಾನ ಮನಸ್ಕರನ್ನು ಒಗ್ಗೂಡಿಸಿ ಜನರ ಆಶೋತ್ತರಗಳನ್ನು ಈಡೇರಿಸುವ ಉದ್ದೇಶದಿಂದ ನೂತನವಾಗಿ
ಬಂಟ್ವಾಳ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿ (ನಿ) ರಚನೆ ಮಾಡಿದ್ದೇವೆ.
ನೂತನ ಪ್ರಧಾನ ಕಚೇರಿಯ ಶಾಖೆ ಕಾಂಗ್ರೇಸ್ ಕಚೇರಿಯಲ್ಲಿ ಜುಲೈ 15 ರಂದು ಶುಭಾರಂಭಗೊಳ್ಳಲಿದೆ ಎಂದು ಮಾಜಿ ಶಾಸಕ ಬ್ಯಾಂಕಿನ ಅಧ್ಯಕ್ಷ ಬಿ. ರಮಾನಾಥ ರೈ ಹೇಳಿದರು.
ಅವರು ಬಿ.ಸಿ.ರೋಡಿನ ಪಕ್ಷದ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ಕುರಿತು ಮಾಹಿತಿ ನೀಡಿದರು. ಹೋಟೆಲ್ ರಂಗೋಲಿ ಸಭಾ ಭವನ ಬಿ.ಸಿ.ರೋಡು ಇಲ್ಲಿ ಸಭಾಭವನದಲ್ಲಿ ಸಭಾ ಕಾರ್ಯಕ್ರಮ ನಡೆಯಲಿದೆ.
ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಅಧ್ಯಕ್ಷ ಡಾ| ಎಂ‌.ಎನ್ ರಾಜೇಂದ್ರ ಕುಮಾರ್ ಬ್ಯಾಂಕ್ ನ ಉದ್ಘಾಟನೆ ಮಾಡಲಿದ್ದಾರೆ ಎಂದರು.

ಗ್ರಾಹಕರ ಅನುಕೂಲಕ್ಕಾಗಿ ಸಂಪೂರ್ಣ ಗಣಕೀಕೃತ ಗೊಂಡು ಆಭರಣ ಸಾಲ, ವಾಹನ ಸಾಲ, ಕೃಷಿಯೇತರ ಸಾಲ ಸೌಲಭ್ಯಗಳೊಂದಿಗೆ ಕಾರ್ಯಾರಂಭ ಗೊಳ್ಳಲಿದೆ ಎಂದು ಅವರು ತಿಳಿಸಿದರು.
ಗ್ರಾಮೀಣ ಭಾಗದಲ್ಲಿಯೂ ಶಾಖೆಯನ್ನು ತೆರೆಯುವ ಯೋಚನೆ ಇದೆ ಎಂದರು. ಕೃಷಿಯ ಹೊರತುಪಡಿಸಿ ಉಳಿದ ಎಲ್ಲಾ ರೀತಿಯ ಸಾಲ ಸೌಲಭ್ಯ ಗಳನ್ನು ನೀಡಲಾಗುತ್ತಿದೆ, ಮುಂದಿನ ದಿನಗಳಲ್ಲಿ ಕೃಷಿ ಸಾಲವನ್ನು ನೀಡಲಾಗುತ್ತಿದೆ ಅದಕ್ಕೆ ಪೂರಕ ವ್ಯವಸ್ಥೆ ಮಾಡಲಾಗುತ್ತದೆ ಎಂದು ಅವರು ಹೇಳಿದರು.
ಗ್ರಾಮೀಣ ಪ್ರದೇಶದ ಜನರಿಗೆ ಉದ್ಯೋಗ ಸೃಷ್ಟಿ ಮಾಡಲು ಈ ಬ್ಯಾಂಕ್ ಸಹಕಾರಿಯಾಗಲಿದೆ ಎಂದು ಅವರು ಹೇಳಿದರು.

ಕಂಪ್ಯೂಟರೀಕೃತ ಬ್ಯಾಂಕ್ ನ ವ್ಯವಸ್ಥೆ ಯೊಂದಿಗೆ ಬ್ಯಾಂಕ್ ಕಾರ್ಯಚರಣೆ ಮಾಡಲಿದೆ. ಎರಡು ಸಿಬ್ಬಂದಿಗಳ ನೇಮಕ ಮಾಡಲಾಗಿದೆ ಎಂದು ಬ್ಯಾಂಕ್ ನ ಮುಖ್ಯಕಾರ್ಯನಿರ್ವಣಾಧಿಕಾರಿ ಬೇಬಿ ಕುಂದರ್ ತಿಳಿಸಿದರು.
ಜನರಿಗೆ ಸಹಕಾರ ಆಗುವ ರೀತಿಯಲ್ಲಿ ಶಿಸ್ತಿನ ಬ್ಯಾಂಕ್ ಆಗಿ ಮೂಡಿಬರಬೇಕು ಎಂಬ ಆದ್ಯಕ್ಷರ ಯೋಚನೆಯಂತೆ ಕೆಲಸ ನಿರ್ವಹಿಸಲಾಗಿದೆ.

ಈಗಾಗಲೇ 608 ಪಾಲು ಬಂಡವಾಳದಾರರು ಇದ್ದಾರೆ ಎಂದು ಅವರು ತಿಳಿಸಿದರು. ಪ್ರತಿಕಾಗೋಷ್ಟಿಯಲ್ಲಿ ಉಪಾಧ್ಯಕ್ಷ ಮಾಯಿಲಪ್ಪ ಸಾಲ್ಯಾನ್, ಆಡಳಿತ ಮಂಡಳಿ ನಿರ್ದೇಶಕ ರಾದ ಪದ್ಮಶೇಖರ್ ಜೈನ್, ಎಂ.ಎಸ್.ಮಹಮ್ಮದ್, ಸುದರ್ಶನ ಜೈನ್, ಅಬ್ಬಾಸ್ ಆಲಿ, ಪಿ.ಯೂಸ್.ಎಲ್.ರೋಡ್ರಿಗಸ್, ವಾಣಿ ಕಾರಂತ್, ಪ್ರಕಾಶ್ ಶೆಟ್ಟಿ ತುಂಬೆ, ನಾರಾಯಣ ನಾಯಕ್, ಅಲ್ಪೋನ್ಸ್ ಮಿನೇಜಸ್, ಅಮ್ಮು ಅರ್ಬಿಗುಡ್ಡೆ ಉಪಸ್ಥಿತರಿದ್ದರು.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here