

ಬಂಟ್ವಾಳ: ಗೂಡ್ಸ್ ಟೆಂಪೊ ಹಾಗೂ ಆಂಬುಲೆನ್ಸ್ ನಡುವೆ ಅಪಘಾತ ಸಂಭವಿಸಿ ಮಹಿಳೆಯೋರ್ವರು ಮೃತಪಟ್ಟು ಮೂವರು ಗಂಭೀರ ಗಾಯಗೊಂಡ ಘಟನೆ ನೇರಳಕಟ್ಟೆ ಸಮೀಪದ ಪರ್ಲೊಟ್ಟು ಎಂಬಲ್ಲಿ ಮಂಗಳವಾರ ರಾತ್ರಿ ನಡೆದಿದೆ. ಆಂಬುಲೆನ್ಸ್ ನಲ್ಲಿದ್ದವರು ಇಡ್ಕಿದು ಗ್ರಾಮದ ಏಮಾಜೆ ನಿವಾಸಿಗಳು ಎಂದು ತಿಳಿದುಬಂದಿದೆ.
ಗಾಯಾಳುಗಳನ್ನು ಪುತ್ತೂರಿನ ಆಸ್ಪತ್ರೆಗೆ ಸಾಗಿಸಲಾಗಿದ್ದು, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಸಾಗಿಸಲಾಗಿದೆ.
ರೋಗಿಯೊಬ್ಬರ ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿನ ಮಹಾವೀರ ಆಸ್ಪತ್ರೆ ಯಿಂದ ಮಂಗಳೂರಿಗೆ ಆಂಬುಲೆನ್ಸ್ ನಲ್ಲಿ ಕರೆದುಕೊಂಡು ಹೋಗುತ್ತಿದ್ದ ವೇಳೆ ಪುತ್ತೂರಿನ ಕಡೆಗೆ ಹೋಗುತ್ತಿದ್ದ ಗೂಡ್ಸ್ ಟೆಂಪೋ ನೇರಳಕಟ್ಟೆ ಸಮೀಪದ ಪರ್ಲೊಟ್ಟು ಎಂಬಲ್ಲಿ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.
ಘಟನೆಯಿಂದ ಏಮಾಜೆ ನಿವಾಸಿ ಪಾರ್ವತಿ (58)ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ ಆಂಬುಲೆನ್ಸ್ ನಲ್ಲಿದ್ದ ವ್ಯಕ್ತಿಗೂ ಗಾಯವಾಗಿದೆ.
ಘಟನಾ ಸ್ಥಳಕ್ಕೆ ಬಂಟ್ವಾಳ. ಪುತ್ತೂರು ವೃತ್ತ ನಿರೀಕ್ಷಕರು ಹಾಗೂ ವಿಟ್ಲ ಪೊಲೀಸರು ಬೇಟಿ ನೀಡಿದ್ದಾರೆ. ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.








