


ಬಂಟ್ವಾಳ: ಪುರಾಣ ಪ್ರಸಿದ್ಧ ಮಹತೋಭಾರ ಕಾರಿಂಜ ಶ್ರೀ ಕಾರಿಂಜೇಶ್ವರ ದೇವಸ್ಥಾನದಲ್ಲಿ ಗುರುವಾರ ಆಟಿ ಅಮವಾಸ್ಯೆ ಪ್ರಯುಕ್ತ ತೀರ್ಥಸ್ನಾನ, ವಿಶೇಷ ಉತ್ಸವ ಜರಗಿತು.
ಸಾವಿರಾರು ಭಕ್ತಾದಿಗಳು ಆಗಮಿಸಿ ಇಲ್ಲಿನ ಗದಾತೀರ್ಥ, ಉಂಗುಷ್ಠ ತೀರ್ಥ ಹಾಗೂ ಜಾನು ತೀರ್ಥಗಳೆಂಬ ಕೆರೆಗಳಲ್ಲಿ ತೀರ್ಥಸ್ನಾನ ಮಾಡಿ ಬಾಗಿನ ಅರ್ಪಿಸಿದರು. ಬಳಿಕ ಶ್ರೀ ಪಾರ್ವತೀ-ಪರಮೇಶ್ವರರನ್ನು ದರ್ಶಿಸಿ ಪ್ರಸಾದ ಸ್ವೀಕರಿಸಿದರು. ಮಧ್ಯಾಹ್ನ ಅನ್ನ ಸಂತರ್ಪಣೆ ನಡೆಯಿತು.
ಈ ಸಂದರ್ಭದಲ್ಲಿ ಮಾಜಿ ಸಚಿವ ಬಿ. ರಮಾನಾಥ ರೈ, ಜಿ.ಪಂ.ಸದಸ್ಯ ಬಿ.ಪದ್ಮಶೇಖರ ಜೈನ್, ಬಂಟ್ವಾಳ ತಹಶೀಲ್ದಾರ್ ರಶ್ಮಿ ಎಸ್.ಆರ್., ಬೆಳ್ತಂಗಡಿ ತಹಶೀಲ್ದಾರ್ ಗಣಪತಿ ಶಾಸ್ತ್ರಿ, ಕಾವಳಪಡೂರು ಗ್ರಾ.ಪಂ.ಅಧ್ಯಕ್ಷ ಪ್ರಮೋದ್ ಕುಮಾರ್ ರೈ, ಮಾಜಿ ಅಧ್ಯಕ್ಷ ಮಾಣಿಕ್ಯರಾಜ್ ಜೈನ್ ಮೊದಲಾದವರು ಆಗಮಿಸಿದ್ದರು.
ಶ್ರೀ ಕ್ಷೇತ್ರದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಿ.ಜಿನರಾಜ ಆರಿಗ, ಸಮಿತಿ ಸದಸ್ಯರಾದ ಜನಾರ್ದನ ಆಚಾರ್ಯ ಬಾಳ್ತಬಲ್, ಸದಾಶಿವ ಪ್ರಭು, ಕೃಷ್ಣಪ್ಪ ಗೌಡ ತಾಳಿತ್ತೊಟ್ಟು, ವಿಶ್ವನಾಥ ಪೂಜಾರಿ ಪೀರ್ಯ, ವೆಂಕಪ್ಪ ನಾಯ್ಕ ಕಾರಿಂಜಬಲ್, ಸುಜಲಾ ಶೆಟ್ಟಿ, ಸವಿತಾ, ವ್ಯವಸ್ಥಾಪಕ ಸತೀಶ್ ಪ್ರಭು, ಮತ್ತಿತರರು ಉಪಸ್ಥಿತರಿದ್ದರು. ಧನಂಜಯ ಹೆಗ್ಡೆ, ಮೋಹನ್ ಭಟ್, ರಾಜ್ ಪ್ರಸಾದ್ ಆರಿಗ ಮತ್ತಿತರರು ಸಹಕರಿಸಿದರು. .







