ಬಂಟ್ವಾಳ: ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಪ್ರಕೃತಿಯೊಂದಿಗೆ ಉತ್ತಮ ಶಿಕ್ಷಣ ಪಡೆಯುವ ಭಾಗ್ಯಶಾಲಿಗಳು ಎಂದು ಬಂಟ್ವಾಳ ಶಾಸಕ ರಾಜೇಶ್ ನಾಕ್ ಉಳಿಪಾಡಿಗುತ್ತು ಅವರು ಹೇಳಿದರು.
ಸಿದ್ದಕಟ್ಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 2019-20ನೇ ಸಾಲಿನ ವಿದ್ಯಾರ್ಥಿ ವೇದಿಕೆಯನ್ನು ಅವರು ಬುಧವಾರ ಉದ್ಘಾಟಿಸಿ ಮಾತನಾಡಿದರು.
ಗ್ರಾಮೀಣ ಪ್ರದೇಶದಲ್ಲೂ ಉತ್ತಮ ಶಿಕ್ಷಣ ದೊರೆಯುತ್ತದೆ. ಪ್ರಕೃತಿಯೊಡನೆಯ ಒಡನಾಟ ನೈಜ ಜೀವನದ ಅವಕಾಶ ನೀಡಿದೆ. ಈ ಅವಕಾಶವನ್ನು ಅತ್ಯಂತ ಜಾಗ್ರತೆ ಹಾಗೂ ಕ್ರಿಯಾತ್ಮಕವಾಗಿ ಬಳಸಿಕೊಳ್ಳಿ ಎಂದು ಅವರು ಹೇಳಿದರು.


ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣವನ್ನು ವಿದ್ಯಾರ್ಥಿ ವೇದಿಕೆಯು ಮೂಡಿಸುತ್ತದೆ. ಕಾಲೇಜು ಜೀವನ ವಿದ್ಯಾರ್ಥಿಗಳ ಭವಿಷ್ಯದ ಜೀವನವನ್ನು ನಿರ್ಮಿಸಲು ಸಹಕಾರಿಯಾಗುತ್ತದೆ. ಎಂದರು. ಪ್ರಸ್ತುತ ವಿದ್ಯಾಸಂಸ್ಥೆಗಳಲ್ಲಿ ವಿದ್ಯಾರ್ಥಿನಿಯರ ಅನುಪಾತ ಹೆಚ್ಚಿದೆ. ಹೆಣ್ಣು ಗಂಡಿನ ನಡುವಿನ ಅಂತರ ಕಡಿಮೆಯಾಗಿದ್ದು, ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಿದ್ದಾರೆ ಎಂದರು.
ಮುಂದಿನ ಜನಾಂಗ ಕೃಷಿ ಆಧಾರಿತ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳಬೇಕು. ಕೃಷಿ ಕ್ಷೇತ್ರದಲ್ಲಿಯೂ ಬಹಳ ಅವಕಾಶಗಳಿವೆ. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ತನ್ನೆಲ್ಲಾ ಪರಿಶ್ರಮವನ್ನು ಕೇಂದ್ರೀಕರಿಸಿ ಭವಿಷ್ಯವನ್ನು ರೂಪಿಸಿಕೊಳ್ಳಬೇಕು. ಎಂದರು.
ವಾಮದಪದವು ಸ.ಪ್ರ.ದ. ಕಾಲೇಜು ಪ್ರಾಂಶುಪಾಲ ಪ್ರೊ.ಹರಿಪ್ರಸಾದ್ ಶೆಟ್ಟಿ ಅವರು ಅತಿಥಿಯಾಗಿ ಭಾಗವಹಿಸಿ ಮಾತನಾಡಿ, ಮಾನವನಲ್ಲಿ ಅಂತರ್ಗತವಾಗಿರುವ ಅಂತ:ಶಕ್ತಿಯನ್ನು ವಿಕಸಿಸುವುದು ಶಿಕ್ಷಣ. ವಿದ್ಯಾರ್ಥಿವೇದಿಕೆ ಮೂಲಕ ವಿದ್ಯಾರ್ಥಿಗಳು ತಮ್ಮಲ್ಲಿ ಅಡಕವಾಗಿರುವ ಮೂಲಭೂತ ಶಕ್ತಿಯನ್ನು ವಿಕಸಿಸಿಕೊಳ್ಳಬೇಕು ಎಂದರು.
ಕಾಲೇಜು ಪ್ರಾಂಶುಪಾಲ ಪ್ರೊ. ಸತ್ಯನಾರಾಯಣ ಭಟ್ ಅವರು ಅಧ್ಯಕ್ಷತೆ ವಹಿಸಿದ್ದರು. ತಾ.ಪಂ.ಸದಸ್ಯ ಪ್ರಭಾಕರ ಪ್ರಭು, ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಸಂದೇಶ್ ಶೆಟ್ಟಿ ಪೊಡುಂಬ,ಸದಸ್ಯರಾದ ರತ್ನಕುಮಾರ ಚೌಟ, ಗ್ರಾ.ಪಂ.ಅಧ್ಯಕ್ಷೆ ಗುಲಾಬಿ ಶೆಟ್ಟಿ, ಉಪಾಧ್ಯಕ್ಷ ಸತೀಶ್ ಪೂಜಾರಿ ಹಲೆಕ್ಕಿ, ಸಿದ್ದಕಟ್ಟೆ ಪ್ರೌಢಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಉಮೇಶ್ ಗೌಡ, ಗ್ರಾ.ಪಂ.ಸದಸ್ಯ ಎಸ್.ಪಿ.ಶ್ರೀಧರ್, ದಿನೇಶ್ ಶೆಟ್ಟಿ ದಂಬೆದಾರ್, ಉಪನ್ಯಾಸಕ ವೃಂದ, ಸಿಬಂದಿ ವರ್ಗ, ವಿದ್ಯಾರ್ಥಿ ಸಂಘದ ಪದಾಽಕಾರಿಗಳು ಉಪಸ್ಥಿತರಿದ್ದರು.
ವಿದ್ಯಾರ್ಥಿ ಕ್ಷೇಮಪಾಲನಾಽಕಾರಿ ನಸೀಮಾ ಬೇಗಂ ಎಸ್. ವಿದ್ಯಾರ್ಥಿ ವೇದಿಕೆಯ ಪದಾಽಕಾರಿಗಳಿಗೆ ಪ್ರಮಾಣವಚನ ಬೋಽಸಿದರು.

ವಿದ್ಯಾರ್ಥಿ ನಾಯಕ ರಾಜೇಶ್ ಸ್ವಾಗತಿಸಿದರು. ಶುಭಾನಿ ವಂದಿಸಿದರು. ಭವ್ಯಾ ಕಾರ್ಯಕ್ರಮ ನಿರೂಪಿಸಿದರು.

 

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here