

ಬಂಟ್ವಾಳ: ಪುಂಜಾಲಕಟ್ಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ವತಿಯಿಂದ ಒಂದು ಕಂಪ್ಯೂಟರ್ ನ್ನು ಕೊಡುಗೆಯಾಗಿ ನೀಡಲಾಯಿತು.
ಸ್ವಾತಂತ್ರ್ಯೊತ್ಸವ ದಿನಾಚರಣೆ ಪ್ರಯುಕ್ತ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಸ್ಥಾಪಕಾಧ್ಯಕ್ಷ, ಜಿ.ಪಂ.ಸದಸ್ಯ ಎಂ.ತುಂಗಪ್ಪ ಬಂಗೇರ ಅವರ ನಿವಾಸದಲ್ಲಿ ಬಂಗೇರ ಅವರು ಕಂಪ್ಯೂಟರ್ ವಿತರಿಸಿದರು. ಸ್ವಸ್ತಿಕ್ ಫ್ರೆಂಡ್ಸ್ ಅಧ್ಯಕ್ಷ ಪ್ರಶಾಂತ್ ಪುಂಜಾಲಕಟ್ಟೆ, ಪದಾಽಕಾರಿಗಳಾದ ರಾಜೇಶ್ ಪುಳಿಮಜಲು, ಅಬ್ದುಲ್ ಹಮೀದ್ ಮತ್ತು ಕಾಲೇಜು ಪ್ರಥಮ ಬಿ.ಕಾಂ. ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾಲೇಜು ಪ್ರಾಂಶುಪಾಲ ಪ್ರೊ. ಗಣಪತಿಭಟ್ ಕುಳಮರ್ವ ಅವರು ಕೃತಜ್ಞತೆ ಸಲ್ಲಿಸಿದ್ದಾರೆ.








