

ಬಂಟ್ವಾಳ: ರಾರಸಂ ಫೌಂಡೇಶನ್, ಲಯನ್ಸ್ ಕ್ಲಬ್ ಬಂಟ್ವಾಳ, ಜೇಸಿಐ ಬಂಟ್ವಾಳ, ಜೇಸಿಐ ಮಡಂತ್ಯಾರ್, ಜೇಸಿಐ ಜೋಡುಮಾರ್ಗ ನೇತ್ರಾವತಿ ವತಿಯಿಂದ ನಿವೃತ್ತ ಶಿಕ್ಷಕ ಬಿ.ರಾಮಚಂದ್ರ ರಾವ್ ಅವರಿಗೆ ಗೌರವಾಭಿನಂದನೆ ಬಿ.ಸಿ.ರೋಡಿನ ಲಯನ್ಸ್ ಸೇವಾ ಮಂದಿರದಲ್ಲಿ ನಡೆಯಿತು. ಅಭಿನಂದನೆ ಸ್ವೀಕರಿಸಿ ಮಾತನಾಡಿದ ಬಿ.ರಾಮಚಂದ್ರ ರಾವ್ ಅವರು ಅಧ್ಯಾಪಕ ವೃತ್ತಿ ನನ್ನನ್ನು ಉತ್ತಮ ವ್ಯಕ್ತಿಯನ್ನಾಗಿ ಮಾಡಿ, ಮಾರ್ಗದರ್ಶನ ಮಾಡಿದೆ. ಜೇಸಿ ಸಂಸ್ಥೆಯ ಮೂಲಕ ಜೀವನದಲ್ಲಿ ಹೆಚ್ಚಿನ ಸಾಧನೆ ಮಾಡಲು ಸಾಧ್ಯವಾಗಿದ್ದು ಜೇಸಿ ಸಂಸ್ಥೆಗೆ ಆಭಾರಿಯಾಗಿದ್ದೇನೆ ಎಂದರು.
ಈ ಸಂಧರ್ಭದಲ್ಲಿ ಶಿರ್ವ ಸೈಂಟ್ ಮೇರಿಸ್ ಕಾಲೇಜಿನ ಪ್ರಾಂಶುಪಾಲ ಪ್ರೊ.ರಾಜನ್ ಸಭಾಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಬಂಟ್ವಾಳ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮೋಕ್ತೇಸರ ಡಾ.ಬಿ.ರಮೇಶಾನಂದ ಸೋಮಯಾಜಿ, ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಅನುವಂಶಿಕ ಮೊಕ್ತೇಸರ ಡಾ.ಹರ್ಷಾ ಸಂಪಿಗೆತ್ತಾಯ, ಲಯನ್ಸ್ ಜಿಲ್ಲಾ ಉಪರಾಜ್ಯಪಾಲ ವಂಸಂತ ಕುಮಾರ್ ಶೆಟ್ಟಿ, ನಿರ್ಮಲ ಹೃದಯ ಲಯನ್ಸ್ ವಿಶೇಷ ಚೇತನ ಮಕ್ಕಳ ಪಾಲನ ಕೇಂದ್ರದ ಸಂಚಾಲಕ ದಾಮೋದರ ಬಿ.ಎಂ. ಜೇಸಿಐ ಬಂಟ್ವಾಳ ದ ಅಧ್ಯಕ್ಷ ಯತೀಶ್ ಕರ್ಕೇರಾ, ಜೇಸಿಐ ಜೋಡುಮಾರ್ಗ ನೇತ್ರಾವತಿಯ ಅಧ್ಯಕ್ಷ ಹರ್ಷರಾಜ್, ಲಯನ್ಸ್ ಕ್ಲಬ್ ಬಂಟ್ವಾಳದ ಅಧ್ಯಕ್ಷ ಶ್ರೀನಿವಾಸ ಪೂಜಾರಿ, ಜೇಸಿಐ ಮಂಡತ್ಯಾರ್ ಅಧ್ಯಕ್ಷ ಅರುಣ್ ಮಾರಾಸ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ರಾರಾಸಂ ಫೌಂಡೇಶನ್ ಅಧ್ಯಕ್ಷ ರಾಧಕೃಷ್ಣ ಬಂಟ್ವಾಳ ಸ್ವಾಗತಿಸಿ, ಪ್ರಸ್ತಾಪಿಸಿದರು. ನಿರ್ದೇಶಕರಾದ ಕೇಶವ ಮಾಸ್ಟರ್ ವಂದಿಸಿದರು. ತುಳಸಿದಾಸ್ ಪೈ ಕಾರ್ಯಕ್ರಮ ನಿರೂಪಿಸಿದರು.








