


ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಬಡಗಕಜೆಕಾರು ಇಲ್ಲಿ 73ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಬಹಳ ಸಂಭ್ರಮ ಸಡಗರದಿಂದ ಆಚರಿಸಲಾಯಿತು ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಶ್ರೀ ಹರಿ ಕೀರ್ತಿ ಪೂಜಾರಿ ಗುಂಡಿಮನೆ ಅವರು ಧ್ವಜಾರೋಹಣ ಮಾಡಿದರು.
ನಂತರ ಸಭಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಸಾಲ ಬಿ ಸಮಿತಿ ಅಧ್ಯಕ್ಷರಾದ ಶ್ರೀಯುತ ಹರಿ ಕೀರ್ತಿ ಪೂಜಾರ್ ಇವರು ವಹಿಸಿದ್ದರು ವೇದಿಕೆಯಲ್ಲಿ ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷರು ಪ್ರವೀಣ್ ಮಾಡ, ಬಡಗಕಜೆಕಾರು ಗ್ರಾಮಪಂಚಾಯತ್ ಸದಸ್ಯರುಗಳಾದ ಶ್ರೀ ಪ್ರವೀಣ್ ಗೌಡ ಮತ್ತು ಸದಸ್ಯೆ ಶೋಭಾ , ಗ್ರಾಮಾಭಿವೃದ್ಧಿ ಯೋಜನೆ ವಗ್ಗ ವಲಯ ಅಧ್ಯಕ್ಷರಾದ ಮಾಧವ ಪೂಜಾರಿ, ಡಿಸಿಸಿ ಬ್ಯಾಂಕ್ ಉದ್ಯೋಗಿ ಓಬಯ್ಯ ಮಾಡ, ಶಾಲಾ ಮುಖ್ಯೋಪಾಧ್ಯಾಯರಾದ ಸೀತಾರಾಮ್, ಹಾಗೂ ಶಾಲಾಭಿವೃದ್ಧಿ ಸಮಿತಿಯ ಸದಸ್ಯರುಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು ಈ ಸಂದರ್ಭದಲ್ಲಿ ಪ್ರತಿಭಾ, ಕಾರಂಜಿಯಲ್ಲಿ ಸ್ಪರ್ಧಿಸಿ ವಿಜೇತರಾದ ಮಕ್ಕಳನ್ನು ಪ್ರಶಸ್ತಿ ಪತ್ರ ನೀಡುವ ಮೂಲಕ ಗೌರವಿಸಲಾಯಿತು.
ಕಳೆದ ವರ್ಷ ಆಯೋಜಿಸಿದ್ದ ಕಬ್ಬಡ್ಡಿ ಪಂದ್ಯಾಟದ ಸಂಕೇತವಾಗಿ ಶಾಲೆಗೆ ಶಿಕ್ಷಣ ಇಲಾಖೆಯಿಂದ ನೀಡಿದ ಪ್ರಶಸ್ತಿ ಪತ್ರವನ್ನು ಮುಖ್ಯ ಉಪಾಧ್ಯಾಯರು ಈ ಸಂದರ್ಭದಲ್ಲಿ ಅಧ್ಯಕ್ಷರಿಗೆ ವಿತರಿಸಿದರು
ವೇದಿಕೆಯಲ್ಲಿ ಪುಟಾಣಿ ಮಕ್ಕಳಿಂದ ವಿದ್ಯಾರ್ಥಿಗಳಿಂದ ಸ್ವಾತಂತ್ರ್ಯ ದಿನಾಚರಣೆಯ ಬಗ್ಗೆ ಭಾಷಣವನ್ನು ಮಕ್ಕಳು ಮಾಡಿದರು ವೇದಿಕೆಯಲ್ಲಿ ಅತಿಥಿಗಳು ಸ್ವಾತಂತ್ರ್ಯ ದಿನಾಚರಣೆ ಬಗ್ಗೆ ಮಾತನಾಡಿದರು ಶಾಲಾ ಅಭಿಮಾನಿಗಳು ನೀಡಿದ ಸಿಹಿತಿಂಡಿಗಳನ್ನು ಮಕ್ಕಳಿಗೆ ನೀಡಲಾಯಿತು ಶಾಲಾಭಿವೃದ್ಧಿ ಸಮಿತಿಯ ವತಿಯಿಂದ ಲಘು ಉಪಹಾರದ ವ್ಯವಸ್ಥೆಯನ್ನು ಮಾಡಿದ್ದರು
ಸ್ವಾಗತ ಭಾಷಣವನ್ನು ಸೀತಾರಾಮ್ ಮಾಡಿದರು ಶಿಕ್ಷಕಿ ಇವರು ಧನ್ಯವಾದವಿತ್ತರು ಕಾರ್ಯಕ್ರಮವನ್ನು ಶಿಕ್ಷಕಿ ಗೀತಾ ಇವರು ನಿರೂಪಿಸಿದರು







