ಅಡ್ಯನಡ್ಕ: ಅಡ್ಯನಡ್ಕ ಜನತಾ ಪ್ರೌಢಶಾಲೆಯ ರಕ್ಷಕ – ಶಿಕ್ಷಕ ಸಂಘದ ಸಭೆಯು ಆ. 16ರಂದು ಜನತಾ ವಿದ್ಯಾಸಂಸ್ಥೆಗಳ ವಾರಣಾಶಿ ಕೃಷ್ಣ ಸಭಾಂಗಣದಲ್ಲಿ ಜರುಗಿತು.
ಜನತಾ ವಿದ್ಯಾಸಂಸ್ಥೆಗಳ ಆಡಳಿತಾಧಿಕಾರಿಗಳಾದ ರಮೇಶ್ ಎಂ. ಬಾಯಾರು ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಪಾಲಕರು ಮಕ್ಕಳ ವಿದ್ಯಾಭ್ಯಾಸಕ್ಕೆ ಸಂಬಂಧಿಸಿ ಹೆಚ್ಚಿನ ಮುತುವರ್ಜಿಯಿಂದ ಪ್ರೋತ್ಸಾಹ ನೀಡಬೇಕೆಂದು ಸಲಹೆಯಿತ್ತರು.
ಮುಖ್ಯೋಪಾಧ್ಯಾಯರಾದ ಟಿ. ಆರ್. ನಾಯ್ಕ್ ಅವರು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡುತ್ತಾ ಪಾಲಕರಿಗೆ ಸಲಹೆ-ಸೂಚನೆಗಳನ್ನು ನೀಡಿದರು. ರಕ್ಷಕ – ಶಿಕ್ಷಕ ಸಂಘದ ಅಧ್ಯಕ್ಷ ರವೀಂದ್ರ ಶೆಟ್ಟಿ ಮಾತನಾಡಿದರು.
ಹಿರಿಯ ಶಿಕ್ಷಕರಾದ ಎಸ್. ರಾಜಗೋಪಾಲ ಜೋಶಿ ಕಾರ್ಯಕ್ರಮ ನಿರೂಪಿಸಿ, ಕನ್ನಡ ಅಧ್ಯಾಪಕ ಶಿವಕುಮಾರ ಸಾಯ ವಂದಿಸಿದರು.

 

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here