ವಿಟ್ಲ: ವಿಟ್ಲ ಪರಿಸರದಲ್ಲಿ ಬುಧವಾರ ಮಧ್ಯಾಹ್ನ ತಾಸುಗಟ್ಟಲೆ ಕಾಲ ಸುರಿದ ಧಾರಾಕಾರ ಮಳೆಗೆ ನೆರೆ ನೀರು ರಸ್ತೆಯಲ್ಲಿ ಹರಿದು ವಾಹನ ಚಾಲಕರು ಹಾಗೂ ಪಾದಚಾರಿಗಳು ತೊಂದರೆ ಅನುಭವಿಸಿದರು.
ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ರಸ್ತೆಯಲ್ಲಿ ನೀರು ಹೊಳೆಯಂತೆ ಹರಿಯ ತೊಡಗಿತ್ತು. ಬುಧವಾರ ಮಧ್ಯಾಹ್ನ ಸುರಿದ ಮಳೆ ನೀರು ರಸ್ತೆಯ ಮೇಲೆಯೇ ಹರಿದ ಕಾರಣ ಹೊಳೆಯಂತೆ ಕಾಣುತ್ತಿತ್ತು. ಇದರಿಂದ ದೇವಸ್ಥಾನಕ್ಕೆ ಬರುವ ಭಕ್ತಾದಿಗಳಿಗೆ ತೊಂದರೆಯಾಗಿತ್ತು. ಅಲ್ಲಿಯೇ ಸಮೀಪದಲ್ಲಿ ಮೆಸ್ಕಾಂ ಜನಸಂಪರ್ಕ ಸಭೆ ನಡೆಯುತ್ತಿದ್ದು, ವಾಹನಗಳು ಜೋರಾಗಿ ಓಡಾಡುತ್ತಿದ್ದ ವೇಳೆ ನೀರು ಸಭಾಂಗಣದೊಳಗೆ ಎರಚುತ್ತಿತ್ತು. ಸಭೆ ಮುಗಿದು ರಸ್ತೆಗೆ ಇಳಿಯಲು ನೀರಿನ ಪ್ರವಾಹದಿಂದ ಸಾಧ್ಯವಾಗುತ್ತಿರಲಿಲ್ಲ. ಪಕ್ಕದಲ್ಲಿರುವ ಅಂಗಡಿಯವರು ತೊಂದರೆ ಅನುಭವಿಸಿದರು. ರಸ್ತೆಯಲ್ಲಿ ನೀರು ತುಂಬಿ ಹರಿದ ಪರಿಣಾಮ ಪಾದಚಾರಿಗಳು ತೊಂದರೆ ಅನುಭವಿಸಿದ್ದಾರೆ. ದೇವಸ್ಥಾನದ ರಸ್ತೆಯಲ್ಲಿ ವಿಟ್ಲ ಪಟ್ಟಣ ಪಂಚಾಯಿತಿ ಸಮರ್ಪಕ ಚರಂಡಿ ವ್ಯವಸ್ಥೆ ಮಾಡದ ಪರಿಣಾಮ ಮಳೆ ನೀರು ಹರಿಯಲು ಸಾಧ್ಯವಾಗದೇ ಈ ಘಟನೆಗೆ ಕಾರಣವಾಗಿದೆ ಎಂಬುದು ಸ್ಥಳೀಯರ ಆರೋಪವಾಗಿದೆ.

 

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here