Wednesday, October 25, 2023

ಪೆರುವಾಯಿ: ಉಚಿತ ವೈದ್ಯಕೀಯ ಶಿಬಿರ

Must read

ಪೆರುವಾಯಿ : ಪೆರುವಾಯಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಲ್ ಕಾರ್ಗೋ ಲಾಜಿಸ್ಟಿಕ್ ಮಂಗಳೂರು, ಪ್ರಜ್ಞಾ ಸಲಹಾ ಕೇಂದ್ರ ಕಂಕನಾಡಿ ಮಂಗಳೂರು, ಜನ ಶಿಕ್ಷಣ ಟ್ರಸ್ಟ್ ಮುಡಿಪು, ಪೆರುವಾಯಿ ಗ್ರಾಮ ಪಂಚಾಯಿತಿ, ಸುಗ್ರಾಮ ಸಂಘ, ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪೆರುವಾಯಿ ಹಾಗೂ ಕೆ.ಎಂ.ಸಿ ಆಸ್ಪತ್ರೆ ಅತ್ತಾವರ ಮಂಗಳೂರು ಇವರ ಸಹಯೋಗದಲ್ಲಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರವು ಜರಗಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪೆರುವಾಯಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ರಾಲ್ಪ್ ಡಿ’ಸೋಜ ಇವರು ವಹಿಸಿದ್ದರು. ಪೆರುವಾಯಿ ಪ್ರಾಥಮಿಕ ಕೇಂದ್ರದ ವೈಧ್ಯಾಧಿಕಾರಿಗಳಾದ ಡಾ| ಕೃಷ್ಣಮೂರ್ತಿ, ಮಾಣಿಲ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ರಾಜೇಶ್ ಬಾಳೆಕಲ್ಲು, ದ.ಕ ಜಿಲ್ಲಾ ಸ್ವಚ್ಚತಾ ರಾಯಭಾರಿಗಳಾದ ಶೀನ ಶೆಟ್ಟಿ, ಸ್ಥಳೀಯ ಸಾಮಾಜಿಕ ಕಾರ್ಯಕರ್ತರಾದ ಮಂಜುನಾಥ ಶೆಟ್ಟಿ ಕಲೈತ್ತಿಮಾರು ಮತ್ತು ಪೆರುವಾಯಿ ಪಂಚಾಯಿತಿ ಸದಸ್ಯೆಯಾದ ರೇವತಿ ಉಪಸ್ಥಿತರಿದ್ದರು.
ಪ್ರಜ್ಞಾ ಸಲಹಾ ಕೇಂದ್ರದ ಸಿಬ್ಬಂದಿಗಳು, ವಿಟ್ಲ ಪ್ರಥಮ ದರ್ಜೆ ಕಾಲೇಜು ಸ್ನಾತಕೋತ್ತರ ಸಮಾಜ ಕಾರ್ಯ ವಿಭಾಗದ ವಿಧ್ಯಾರ್ಥಿಗಳು, ಶಾಲಾ ಅಧ್ಯಾಪಕ ವೃಂದದವರು, ಪೆರುವಾಯಿ ಗ್ರಾಮ ಪಂಚಾಯತ್ ಸಿಬ್ಬಂಧಿ ವರ್ಗ, ಆರೋಗ್ಯ ತಪಾಸಣಾ ಶಿಬಿರದ ಫಲಾನುಭವಿಗಳು ಹಾಗೂ ಶಾಲಾ ವಿಧ್ಯಾರ್ಥಿಗಳು ಉಪಸ್ಥಿತರಿದ್ದರು.
ಪೆರುವಾಯಿ ಶಾಲಾ ಮುಖ್ಯ ಶಿಕ್ಷಕ ಕುಂಞಣ್ಣ ನಾಯ್ಕ ಸ್ವಾಗತಿಸಿದರು. ಪ್ರಜ್ಞಾ ಸಲಹಾ ಕೇಂದ್ರ ಕಂಕನಾಡಿ ಇಲ್ಲಿಯ ಯೋಜನಾ ಸಂಯೋಜಕರಾದ ವಿಲಿಯಂ ಸ್ಯಾಮುವೆಲ್ ಇವರು ವಾಸ್ತವಿಕ ಮಾತುಗಳನ್ನಾಡಿದರು.
ಪೆರುವಾಯಿ ಗ್ರಾಮ ಪಂಚಾಯತ್ ಸದಸ್ಯರಾದ ಬಾಲಕೃಷ್ಣ ಪೂಜಾರಿ ವಂದಿಸಿದರು. ಕಂಕನಾಡಿ ಇಲ್ಲಿಯ ವಲಯ ಸಂಯೋಜಕರಾದ ಅಶೋಕ್ ಕಾರ್ಯಕ್ರಮ ನಿರೂಪಿಸಿದರು. ಈ ಶಿಬಿರದಲ್ಲಿ ಒಟ್ಟು 209 ಮಂದಿ ಭಾಗವಹಿಸಿದ್ದರು. 121 ಮಂದಿ ಕಣ್ಣಿನ ತಪಾಸಣೆ ಮಾಡಿಕೊಂಡರು. 81 ಮಂದಿ ಫಲಾನುಭವಿಗಳಿಗೆ ಉಚಿತ ಕನ್ನಡಕಗಳನ್ನು ವಿತರಿಸಲಾಯಿತು.

More articles

Latest article