



ಬಂಟ್ವಾಳ: ಲಯನ್ಸ್ ಕ್ಲಬ್ ಬಂಟ್ವಾಳ ಹಾಗೂ ಜೇಸಿಐ ಜೋಡುಮಾರ್ಗ ನೇತ್ರಾವತಿ ಇದರ ಜಂಟಿ ಆಶ್ರಯದಲ್ಲಿ ಸರಕಾರಿ ಪಾಲಿಟೆಕ್ನಿಕ್ ಬಂಟ್ವಾಳ ಇದರ ವಿದ್ಯಾರ್ಥಿಗಳಿಗಾಗಿ ರಸ್ತೆ ಸುರಕ್ಷತೆ ಮತ್ತು ಅಪಘಾತ ಜಾಗೃತಿ ಕಾರ್ಯಕ್ರಮವನ್ನು ನಡೆಸಲಾಯಿತು. ಸಂಪನ್ಮೂಲ ವ್ಯಕ್ತಿಗಳಾಗಿ ಅಗಮಿಸಿದ ಮೂಡಬಿದ್ರೆ ಲಯನ್ಸ್ ಕ್ಲಬ್ನ ಪೂವಾಧ್ಯಕ್ಷರೂ, ಎ.ಜಿ.ಸೋನ್ಸ್ ಐ.ಟಿ.ಐನ ಉಪನ್ಯಾಸಕರು ಹಾಗೂ ಮಂಜುಶ್ರೀ ಡ್ರೈವಿಂಗ್ ಸ್ಕೂಲ್ ಇದರ ಮಾಲಕರೂ ಆಗಿರುವ ಲ| ಶಿವಪ್ರಸಾದ್ ಹೆಗ್ಡೆ ಇವರು ವಿದ್ಯಾರ್ಥಿಗಳಿಗೆ ಆಡಿಯೋ ಮತ್ತು ವಿಡಿಯೋ ತುಣುಕುಗಳ ಮೂಲಕ ರಸ್ತೆ ಸುರಕ್ಷತೆ ಮತ್ತು ಸುರಕ್ಷತೆ ವಾಹನ ಚಾಲನೆಯ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರಕಾಶ್ ಸಿ.ಜೆ ವಹಿಸಿದ್ದರು. ವೇದಿಕೆಯಲ್ಲಿ ಲಯನ್ಸ್ ಕ್ಲಬ್ ಬಂಟ್ವಾಳ ಇದರ ಅಧ್ಯಕ್ಷ ಶ್ರೀನಿವಾಸ ಪೂಜಾರಿ, ಜೇಸಿಐ ಜೋಡುಮಾರ್ಗ ನೇತ್ರಾವತಿ ಇದರ ಅಧ್ಯಕ್ಷರಾದ ಹರ್ಷರಾಜ್ ಸಿ ವೇದಿಕೆಯಲ್ಲಿ ಉಪಸ್ಥಿತರಿದ್ದು ವಿದ್ಯಾರ್ಥಿಗಳು ಸದಾ ವಾಹನ ಚಾಲನೆಯಲ್ಲಿ ಸುರಕ್ಷತಾ ಕ್ರಮಗಳನ್ನು ತಪ್ಪದೇ ಅನುಸರಿಸಿ ಯಾವಾUಲೂ ಕ್ಷೇಮವಾಗಿರಬೇಕು ಮತ್ತು ನಿಮ್ಮ ಹೆತ್ತವರ ಬದುಕಿನ ದಾರಿ ದೀಪವಾಗಬೇಕೇಂದು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.





