ಬಂಟ್ವಾಳ : ಪ್ರಭಾವ ವಿಜ್ಞಾನ ಸಂಘ, ಐಕ್ಯುಎಸಿ ಹಾಗೂ ಅಟಲ್ ಟಿಂಕರಿಂಗ್ ಲ್ಯಾಬ್ ಇದರ ಸಹಯೋಗದೊಂದಿಗೆ ಪುತ್ತೂರು ವಿವೇಕಾನಂದ ತಾಂತ್ರಿಕ ಮಹಾವಿದ್ಯಾಲಯದ ವಿದ್ಯಾರ್ಥಿ ಹಾಗೂ ಯುವ ವಿಜ್ಞಾನಿ ಸ್ವಸ್ತಿಕ್ ಪದ್ಮ ಇವರೊಂದಿಗೆ ವಿದ್ಯಾರ್ಥಿ ಸಂವಾದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು .
ಸ್ವಸ್ತಿಕ್ ಪದ್ಮ ಇವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ತಮ್ಮ ಸಾಧನೆಯ ಯಶೋಗಾಥೆಯನ್ನು ಹಂಚಿಕೊಳ್ಳುತ್ತಾ, ತಮ್ಮ ಅನ್ವೇಷಣೆಗಳ ವಿವರಗಳೊಂದಿಗೆ ಸ್ಥಳೀಯ ಸಮಸ್ಯೆಗಳು ಹಾಗೂ ಅದಕ್ಕೆ ಬೇಕಾದ ತಂತ್ರಜ್ಞಾನದ ಅವಶ್ಯಕತೆಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ನಂತರ ವಿದ್ಯಾರ್ಥಿಗಳ ಜೊತೆ ಸಮಾಲೋಚನೆ ನಡೆಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಶೆಕೋಡಿ ಸೂರ್ಯನಾರಾಯಣ ಭಟ್ ವಹಿಸಿದ್ದರು. ಈ ಸಂದರ್ಭದಲ್ಲಿ ಸಂಚಾಲಕರಾದ ವಸಂತ ಮಾಧವ, ಸಹ ಸಂಚಾಲಕರಾದ ರಮೇಶ್, ಪ್ರಾಂಶುಪಾಲ ಕೃಷ್ಣಪ್ರಸಾದ ಕಾಯರ್‌ಕಟ್ಟೆ, ಉಪನ್ಯಾಸಕ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಭೌತಶಾಸ್ತ್ರ ಉಪನ್ಯಾಸಕ ಅಭಿಷೇಕ್ ಸ್ವಾಗತಿಸಿ, ಕಾವ್ಯ ದ್ವಿತೀಯ ಬಿ.ಎಸ್ಸಿ ವಂದಿಸಿದರು. ಕಾರ್ಯಕ್ರಮವನ್ನು ಸವಿತಾ ಪ್ರಥಮ ಬಿ.ಎಸ್ಸಿ ನಿರೂಪಿಸಿದರು.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here