






ಬಂಟ್ವಾಳ: ಸರಕಾರಿ ಪ್ರಥಮ ದರ್ಜೆ ಕಾಲೇಜು ಸಿದ್ಧಕಟ್ಟೆ ಇದರ ಗ್ರಂಥಾಲಯ ವಿಭಾಗದಿಂದ ಗ್ರಂಥಾಲಯ ದಿನಾಚರಣೆಯನ್ನು ಆಚರಿಸಲಾಯಿತು.
ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ರಾಮ ಕೆ, ಹಿರಿಯ ಶ್ರೇಣಿ ಗ್ರಂಥಪಾಲಕರು, ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಟ್ಟಂಪಾಡಿ ಇವರು ವಿದ್ಯಾರ್ಥಿಗಳು ವಿದ್ಯಾರ್ಥಿ ಜೀವನದಲ್ಲಿಯೇ ಓದುವಿಕೆಯನ್ನು ಮೈಗೂಡಿಸಿಕೊಂಡರೆ ಮಾತ್ರ ಉತ್ತಮ ಜ್ಞಾನವನ್ನು ಪಡೆಯಲು ಸಾಧ್ಯ. ಆ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಗ್ರಂಥಾಲಯವನ್ನು ಸಮರ್ಪಕವಾಗಿ ಉಪಯೋಗಿಸಿಕೊಳ್ಳಬೇಕು ಮತ್ತು ಆಧುನಿಕ ಗ್ರಂಥಾಲಯದ ಪಿತಾಮಹರಾಗಿರುವ ಡಾ. ಎಸ್.ಆರ್ ರಂಗನಾಥನ್ ಇವರ ಸಾಧನೆ ವಿದ್ಯಾರ್ಥಿಗಳಿಗೆ ಮಾದರಿಯಾಗಬೇಕು ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಸತ್ಯನಾರಾಯಣ ಭಟ್, ಇವರು ಮಾತನಾಡಿ ವಿದ್ಯಾರ್ಥಿಗಳು ಪುಸ್ತಕಗಳನ್ನು ಓದುವುದರ ಜೊತೆಗೆ ವಾರ್ತಾ ಪತ್ರಿಕೆಗಳು ಹಾಗೂ ನಿಯತಕಾಲಿಕೆಗಳನ್ನು ಓದುವುದರಿಂದ ಜ್ಞಾನ ವೃದ್ಧಿಸುತ್ತದೆ ಎಂದರು.
ಗ್ರಂಥಪಾಲಕರಾದ ಶ್ರೀನಿವಾಸ ಇವರು ಕಾರ್ಯಕ್ರಮವನ್ನು ಉದ್ದೇಶಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಐಕ್ಯೂಎಸಿ ಸಂಚಾಲಕರಾದ ಸೌಮ್ಯ ಹೆಚ್.ಕೆ, ಉಪನ್ಯಾಸಕರಾದ ನಸೀಮಾ ಬೇಗಂ,ಎಸ್, ಹನುಮಂತಯ್ಯ ಜಿ.ಹೆಚ್, ದೇವಿಪ್ರಸಾದ್, ರಂಗನಾಥ್ ಉಪಸ್ಥಿತರಿದ್ದರು.
ಸುಶ್ಮಿತ ಮತ್ತು ರಕ್ಷಿತ ಪ್ರಾರ್ಥಿಸಿ, ದ್ವಿತೀಯ ಬಿಕಾಂ ಪ್ರಜ್ವಲ್ ಸ್ವಾಗತಿಸಿದ ಕಾರ್ಯಕ್ರಮದಲ್ಲಿ ಮೆಲ್ಡ್ರೀಯಾ ಡೀನ ಕ್ಯಾಸ್ತೆಲಿನೊ ತೃತೀಯ ಬಿಕಾಂ ನಿರೂಪಿಸಿ ಪ್ರಥಮ ಬಿಎ ಸುಭಾಸ್ ಬಂಗೇರ ವಂದಿಸಿದರು.





