ಬಂಟ್ವಾಳ, ಆ. ೩೧: ಸಮಗ್ರ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ-೨೦೨೦ ಕುರಿತು ಮತದಾರರ ಪಟ್ಟಿಯ ಸೇರ್ಪಡೆ, ತೆಗೆದು ಹಾಕುವಿಕೆ ಹಾಗೂ ಮತದಾರರ ಪಟ್ಟಿಯ ಪರಿಶೀಲನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಇದರ ತಾಲೂಕು ಮಟ್ಟದ ಉದ್ಘಾಟನಾ ಕಾರ್ಯಕ್ರಮವು ಬಂಟ್ವಾಳ ತಾಲೂಕು ಆಡಳಿತ ತಾಲೂಕು ಪಂಚಾಯತ್ ಸಹಯೋಗದಲ್ಲಿ ಸೆ. ೧ರಂದು ಬೆಳಿಗ್ಗೆ ೧೦ಕ್ಕೆ ಬಿ.ಸಿ.ರೋಡಿನ ಮಿನಿವಿಧಾನ ಸೌಧದ ಕೊಠಡಿ ನಂ. ೨ರಲ್ಲಿ ನಡೆಯಲಿದೆ. ಸೆ.೧ರಿಂದ ೩೦ರವೆರೆಗೆ ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆ ಭೇಟಿ ನೀಡಿ ಮತದಾರರ ಪಟ್ಟಿಯಲ್ಲಿ ಕ್ರಮ ಜರಗಿಸುವರು ಎಂದು ಬಂಟ್ವಾಳ ತಹಶೀಲ್ದಾರ್ ರಶ್ಮಿ ಎಸ್.ಆರ್ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here