ಪುಣಚ: ಪುಣಚ ಅಜ್ಜಿನಡ್ಕ ದುರ್ಗಾನಗರ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರ 14ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ನಡೆಯಿತು.
ಬೆಳಗ್ಗೆ ವೇ.ಮೂ. ಸುಬ್ರಾಯ ಉಪಾಧ್ಯಾಯರ ಪೌರೋಹಿತ್ಯದಲ್ಲಿ ವಿಘ್ನೇಶ್ವರನ ಬಿಂಬ ಪ್ರತಿಷ್ಠೆ, ಭಜನಾ ಕಾರ್ಯಕ್ರಮ, ನಾನಾ ಆಟೋಟ ಸ್ಪರ್ಧೆಗಳು ನಡೆದವು.
ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷರಾದ ವೀರಪ್ಪ ಮೂಲ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ವಿಶ್ವಹಿಂದೂ ಪರಿಷತ್, ಪುತ್ತೂರು ಪ್ರಖಂಡದ ಕಾರ್ಯದರ್ಶಿ ನವೀನ್ ಕುಲಾಲ್ ಧಾರ್ಮಿಕ ಉಪನ್ಯಾಸಕ ನೀಡಿದರು.
ಕೇಪು ಗ್ರಾಮ ಪಂಚಾಯಿತಿ ಸದಸ್ಯ ಹರೀಶ್. ಎನ್, ಅಜ್ಜಿನಡ್ಕ ಶ್ರೀ ದುರ್ಗಾಪರಮೇಶ್ವರಿ ಮಹಿಳಾ ಸಂಘದ ಅಧ್ಯಕ್ಷೆ ಬೇಬಿ ಉಪಸ್ಥಿತರಿದ್ದರು. ಜಯಪ್ರಕಾಶ ಅಜ್ಜಿನಡ್ಕ ಸ್ವಾಗತಿಸಿದರು. ವಿನಯ ಚಂದ್ರ ವಂದಿಸಿದರು.
ಬಳಿಕ ಮಹಾಮಂಗಳಾರತಿ, ಪ್ರಸಾದ ವಿತರಣೆ ಮತ್ತು ಸಾರ್ವಜನಿಕ ಅನ್ನ ಸಂತರ್ಪಣೆ ನಡೆಯಿತು. ಸಂಜೆ ಶ್ರೀ ಗಣೇಶನ ಶೋಭಾಯಾತ್ರೆ ನಡೆದ ಬಳಿಕ ವಿಗ್ರಹ ವಿಸರ್ಜನೆಗೊಳಿಸಲಾಯಿತು.

 

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here