ಬಂಟ್ವಾಳ: ಭಾರತ ದೇಶ ಜಗತ್ತ್ ಗುರುವಾಗುವ ಉದ್ದೇಶದಿಂದ ದೇಶವನ್ನು ಕಟ್ಟಲು ಬೇಕಾಗಿರುವ ವಿದ್ಯಾರ್ಥಿಗಳನ್ನು ರೂಪಿಸುವ ಮಹತ್ತರವಾದ ಜವಾಬ್ದಾರಿ ಶಿಕ್ಷಕರ ಮೇಲಿದೆ , ಅಂತಹ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಿ ಎಂದು ಶಿಕ್ಷಕರಿಗೆ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಕರೆನೀಡಿದರು.


ಅವರು ಸಾರ್ವಜನಿಕ ಶಿಕ್ಷಣ ಇಲಾಖೆ, ಬಂಟ್ವಾಳ ತಾಲೂಕು ಶಿಕ್ಷಕರ ದಿನಾಚರಣೆ ಸಮಿತಿ ಇವರ ಆಶ್ರಯದಲ್ಲಿ ರೋಟರಿ ಕ್ಲಬ್ ಬಂಟ್ವಾಳ ಇವರ ಸಹಯೋಗದಲ್ಲಿ ಆದರ್ಶ ಶಿಕ್ಷಕ ಖ್ಯಾತ ಶಿಕ್ಷಣ ತಜ್ಞ ಭಾರತದ ಮಾಜಿ ರಾಷ್ಟ್ರಪತಿ ಡಾ!ಸರ್ವಪಲ್ಲಿ ರಾಧಾಕೃಷ್ಣನ್ ಇವರ ಜನ್ಮದಿನದ ನೆನಪಿಗಾಗಿ ಬಂಟ್ವಾಳ ಧರ್ಮಸ್ಥಳ
ಮಂಜುನಾಥೇಶ್ವರ ಕಲ್ಯಾಣ ಮಂಟಪದಲ್ಲಿ ನಡೆದ ಗುರುವಂದನಾ ಸಮಾರಂಭ 2019 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಶಿಕ್ಷಿತ ಸಮಾಜದಿಂದ ದೇಶದ ಬದಲಾವಣೆ ಸಾಧ್ಯ, ಗುಣಮಟ್ಟದ ಶಿಕ್ಷಣದ ಜೊತೆ ಸಂಸ್ಕಾರದ ಶಿಕ್ಷಣ ಪ್ರತಿಯೊಂದು ಸಂಸ್ಥೆಗಳು ನೀಡಬೇಕು ಎಂದು ಅವರು ಹೇಳಿದರು.
ಜೇಸಿ ರಾಷ್ಟ್ರೀಯ ತರಬೇತುದಾರ ಕೃಷ್ಣಮೋಹನ್ ಪಿ.ಎಸ್. ಪ್ರಧಾನ ಉಪನ್ಯಾಸ ಮಾಡಿದ ಅವರು ಶಾಲೆಯಲ್ಲಿರುವ ಮಕ್ಕಳು ಶಿಕ್ಷಕರ ಮಕ್ಕಳು ಎಂಬ ಮನಸ್ಸು ಮಾಡಿ ಅವರಿಗೆ ಶಿಕ್ಷಣ ನೀಡಿದಾಗ ಮಹತ್ತರ ಬದಲಾವಣೆ ಸಾಧ್ಯ ಎಂದು ಅವರು ತಿಳಿಸಿದರು.
ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗೆ ಶಿಕ್ಷಕನ ಪಾತ್ರ ಮುಖ್ಯವಾಗಿರುತ್ತದೆ. ಶಿಕ್ಷಕರು ವಿದ್ಯಾರ್ಥಿಗಳ ಜೀವನದಲ್ಲಿ ವ್ಯಕ್ತಿಯಾಗದೆ ಶಕ್ತಿಯಾಗಬೇಕು ಎಂದು ಅವರು ತಿಳಿಸಿದರು.

ವೇದಿಕೆಯಲ್ಲಿ ತಾ.ಪಂ.ಅಧ್ಯಕ್ಷ ಚಂದ್ರಹಾಸ ಕರ್ಕೇರ, ಉಪಾಧ್ಯಕ್ಷ ಅಬ್ಬಾಸ್ ಆಲಿ, ಜಿ.ಪಂ.ಸದಸ್ಯರಾದ ಎಂ.ತುಂಗಪ್ಪ ಬಂಗೇರ, ಎಂ.ಎಸ್.ಮಹಮ್ಮದ್,ಮಮತಾ ಡಿ.ಎಸ್. ಗಟ್ಟಿ, ಚಂದ್ರಪ್ರಕಾಶ್ ಶೆಟ್ಟಿ, ಮಂಜುಳಾಮಾದವ ಮಾವೆ, ಸ್ಥಾಯಿ ಸಮಿತಿ ಅಧ್ಯಕ್ಷೆ ಧನಲಕ್ಮೀ ಸಿ ಬಂಗೇರ
ವಿಟ್ಲ ಪಟ್ಟಣ ಪಂಚಾಯತ್ ಅಧ್ಯಕ್ಷೆ ದಮಯಂತಿ, ರೋಟರಿ ಕ್ಲಬ್ ಬಂಟ್ವಾಳ ಅಧ್ಯಕ್ಷೆ ಶಿವಾನಿ ಬಾಳಿಗಾ , ತಾ ಪಂ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ, ಕ್ಷೇತ್ರ ಶಿಕ್ಷಣಾಧಿಕಾರಿ ಜ್ಞಾನೇಶ್, ಸರಕಾರಿ ನೌಕರರ ಸಂಘದ ಅಧ್ಯಕ್ಷ ಉಮಾನಾಥ ರೈ ಮೆರಾವು, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಶಿವಪ್ರಸಾದ್ ಶೆಟ್ಟಿ , ಪ್ರೌಡ ಶಾಲಾ ಶಿಕ್ಷಕ ಸಂಘದ ಅಧ್ಯಕ್ಷ ಜೊಯೆಲ್ ಲೊಬೊ, ಪ್ರೌಡಶಾಲಾ ಮುಖ್ಯ ಶಿಕ್ಷಕ ಸಂಘದ ಅಧ್ಯಕ್ಷ ರಮಾನಂದ, ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಜಿನ್ನಪ್ಪ, ಅನುದಾನಿತ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸುಬ್ರಾಯ ಕಾಮತ್, ಎಸ್.ಸಿ.ಎಸ್.ಟಿ.ನೌಕರರ ಸಂಘದ ಅಧ್ಯಕ್ಷ ಶಂಕರ್, ಚಿತ್ರಕಲಾ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಚೆನ್ನಕೇಶವ, ಟಿ.ಜಿ.ಟಿ.ಸಂಘದ ಅಧ್ಯಕ್ಷೆ ಶ್ರೀಮತಿ ಶಿಕ್ಷಕರ ದಿನಾಚರಣೆ ಸಮಿತಿ ಅಧ್ಯಕ್ಷೆ ಶಾರದ ಎಸ್.ರಾವ್,ರಾಷ್ಟ್ರ ಪ್ರಶಸ್ತಿ ವಿಜೇತ ಶಿಕ್ಷಕ ರಮೇಶ್ ನಾಯಕ್ ರಾಯಿ ಹಾಗೂ ಇಲಾಖಾ ಅಧಿಕಾರಗಳು ಮತ್ತಿತರರು ಉಪಸ್ಥಿತರಿದ್ದರು. ‌
ಕಾರ್ಯಕ್ರಮದಲ್ಲಿ ತಾಲೂಕಿನ ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತರನ್ನು ಗುರುತಿಸಿ ಸನ್ಮಾನಿಸಲಾಯಿತು.
ಕ್ಷೇತ್ರ ಶಿಕ್ಷಣಾಧಿಕಾರಿ ಜ್ಞಾನೇಶ್ ಸ್ವಾಗತಿಸಿದರು.
ರಾಮಚಂದ್ರ ಮಾಸ್ತರ್ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here