ಬಂಟ್ವಾಳ: ಶಾಲೆ, ಕಾಲೇಜುಗಳಲ್ಲಿ ನಡೆಯುವ ಸ್ಪರ್ಧಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಸಕ್ರಿಯವಾಗಿ ಭಾಗವಹಿಸುವುದರಿಂದ ಅವರ ವ್ಯಕ್ತಿತ್ವ ವಿಕಾಸವಾಗಲು ಸಾಧ್ಯವಿದೆ ಎಂದು ಮಂಗಳೂರು ವಿವಿಯ ಕುಲಸಚಿವ ಪ್ರೊ. ಎ.ಎಂ.ಖಾನ್ ಹೇಳಿದರು.
ಬಂಟ್ವಾಳದ ಶ್ರೀ ವೆಂಕಟರಮಣ ಸ್ವಾಮಿ ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ ಜಿಲ್ಲಾ ಮಟ್ಟದ ಅಂತರ್ ಕಾಲೇಜು ಶೈಕ್ಷಣಿಕ ಸ್ಪರ್ಧಾ ಕಾರ್ಯಕ್ರಮ ವಿಕಾಸ್-2019 ಉದ್ಘಾಟಿಸಿ ಮಾತನಾಡಿದರು.


ಯುವ ಜನರಿಗೆ ಕಲಿಯಲು ಸಾಕಷ್ಟು ಅವಕಾಶವಿದೆ. ಅಂತಹ ಅವಕಾಶಗಳನ್ನು ಉಪಯೋಗಿಸಿಕೊಂಡು ತಮ್ಮ ವ್ಯಕ್ತಿತ್ವವನ್ನು ಅಭಿವೃದ್ಧಿ ಪಡಿಸಿಕೊಳ್ಳಬೇಕು ಎಂದು ತಿಳಿಸಿದ ಅವರು ಪೋಷಕರು, ಶಿಕ್ಷಕರನ್ನು ಗೌರವಿಸುವ ಗುಣವನ್ನು ಬೆಳೆಸಿಕೊಂಡು ಉತ್ತಮ ನಾಗರೀಕರಾಗಬೇಕು ಎಂದರು.
ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಪ್ರೊ. ಶಶಿಕಲಾ ಕೆ ಅಧ್ಯಕ್ಷತೆ ವಹಿಸಿದ್ದರು. ಪದವಿ ಕಾಲೇಜಿನ ಪ್ರಾಂಶುಪಾಲ ಡಾ. ಪಾಂಡುರಂಗ ನಾಯಕ್, ಉಪನ್ಯಾಸಕ ಹಾಗೂ ಕಾರ್ಯಕ್ರಮ ಸಂಯೋಜಕ ಪ್ರೊ.ಬಾಲಕೃಷ್ಣ ಗೌಡ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.
ಉಪನ್ಯಾಸಕ ಲಕ್ಷ್ಮೀ ನಾರಾಯಣ ಸ್ವಾಗತಿಸಿದರು. ಉಪನ್ಯಾಸಕಿ ಅಪರ್ಣ ವಂದಿಸಿದರು. ಮನೋಹರ ಶಾಂತಪ್ಪ ದೊಡ್ಡಮನಿ ಕಾರ್ಯಕ್ರಮ ನಿರೂಪಿಸಿದರು
ಜಿಲ್ಲೆಯ ಒಟ್ಟು 25 ಕಾಲೇಜಿನ ವಿದ್ಯಾರ್ಥಿಗಳು ಸ್ಪರ್ಧಾ ಕಾರ್ಯದಲ್ಲಿ ಭಾಗವಹಿಸಿದ್ದರು.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here