Saturday, April 13, 2024

ಬುರೂಜ್ : ಶಿಕ್ಷಕರಿಗೆ ಗೌರವ ಸಮರ್ಪಣೆ

ಬುರೂಜ್ ಆಂಗ್ಲ ಮಾಧ್ಯಮ ಪ್ರೌಢಶಾಲೆ ರಝಾನಗರ ಮೂಡುಪಡುಕೋಡಿ ಇಲ್ಲಿ ಸಂಸ್ಥೆಯ ಹಾಗೂ ವಿದ್ಯಾರ್ಥಿಗಳ
ಸಹಯೋಗದೊಂದಿಗೆ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು. ಎಲ್ಲ ಶಿಕ್ಷಕರನ್ನು ಮತ್ತು ಶಿಕ್ಷಕೇತರ ಸಿಬ್ಬಂದಿಗಳನ್ನು
ಶೇಕ್ ಅಸ್ಮಾ ಮ್ಯಾನೇಜರ್ ಬುರೂಜ್ ಸಂಸ್ಥೆ ಇವರು ಶಾಲು ಹೊದಿಸಿ ಗೌರವಿಸಿದರು ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು
ಮತ್ತು ಶಿಕ್ಷಕರಿಗೆ ವಿವಿಧ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಿ ವಿಜೇತ ಶಿಕ್ಷಕರನ್ನು ಬಹುಮಾನಗಳನ್ನು ನೀಡಿ
ಗೌರವಿಸಿದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ಸಂಚಾಲಕರು ಹಾಜರಿದ್ದು ವಿದ್ಯಾರ್ಥಿಯ ಬೆಳವಣಿಗೆಯಲ್ಲಿ ಶಿಕ್ಷಕರ ಪಾತ್ರ ವನ್ನು ವಿವರಿಸಿ
ದರು ಮುಖ್ಯ ಶಿಕ್ಷಕಿಯಾದ  ಜಯಶ್ರೀ ಸಾಲ್ಯಾನ್ ಶಿಕ್ಷಕರ ದಿನಾಚರಣೆ ಮಹತ್ವ ಮತ್ತು ವಿದ್ಯಾರ್ಥಿಗಳು ಜೀವನಕ್ಕೆ ಬೇಕಾದ
ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕೆಂದು ಕರೆ ನೀಡಿದರು. ಕಾರ್ಯಕ್ರಮದ ನಿರೂಪಣೆಯನ್ನು ಶೇಕ್ ಸಾದಿಯಾ, ಲಿಶಾ ಎನ್ ಶೆಟ್ಟಿ, ಸ್ವಾಗತ
ಫಮಾ ಝಬೀನ್ ಹಾಗೂ ಝಕಿಯಾ ವಂದನಾರ್ಪಣೆಗೈದರು.

More from the blog

ಸ್ವಿಮ್ಮಿಂಗ್​ ಪೂಲ್​ ನೀರಿಗೆ ಬಿದ್ದು 4ನೇ ತರಗತಿ ವಿದ್ಯಾರ್ಥಿ ಸಾವು

ಉಡುಪಿ‌: ಸ್ವಿಮ್ಮಿಂಗ್​ ಫೂಲ್​ನಲ್ಲಿ ಮುಳುಗಿ 4ನೇ ತರಗತಿಯ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಕುಂದಾಪುರ ತಾಲೂಕಿನ ಹೆಂಗವಳ್ಳಿ ಸಮೀಪದ ಟಿನ್ ಟಾನ್ ಎನ್ವೆಂಚರ್ಸ್ ರೆಸಾರ್ಟ್​​ನಲ್ಲಿ ನಡೆದಿದೆ. ಉಡುಪಿ‌ಯ ಹೊಡೆ ಮೂಲದ ಮುಹಮ್ಮದ್ ಅರೀಝ್ ಮೃತ ವಿದ್ಯಾರ್ಥಿ. ದಾರುಸ್ಸಲಾಮ್...

ರಾಮೇಶ್ವರಂ ಕೆಫೆ ಬ್ಲಾಸ್ಟ್‌ ಪ್ರಕರಣ : ನಿದ್ದೆಯಲ್ಲಿದ್ದ ಉಗ್ರರನ್ನು ಬಡಿದೆಬ್ಬಿಸಿದ ಎನ್ಐಎ

ಬೆಂಗಳೂರು: ರಾಮೇಶ್ವರಂ ಕೆಫೆ ಬ್ಲಾಸ್ಟ್‌ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಷ್ಟ್ರೀಯ ತನಿಖಾ ಸಂಸ್ಥೆ ಭರ್ಜರಿ ಕಾರ್ಯಾಚರಣೆ ನಡೆಸಿ, ಉಗ್ರರ ಗ್ಯಾಂಗ್ ಅನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. ರಾಮೇಶ್ವರಂ ಕೆಫೆ ಬಾಂಬರ್‌ ಗ್ಯಾಂಗ್ ಬಂಧಿಸಲು NIA ಭರ್ಜರಿ ಬಲೆ...

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನ ವಾರ್ಷಿಕ ಜಾತ್ರೆ..ಮಹಾರಥೋತ್ಸವ ಕಣ್ಣುಂಬಿಕೊಂಡ ಸಾವಿರಾರು ಭಕ್ತರು

ಬಂಟ್ವಾಳ: ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರೆಯಲ್ಲಿ ಎ. ೧೧ರಂದು ಸಂಜೆ ರಥೋತ್ಸವ ನಡೆಯಿತು. ಜಾತ್ರೆಯಲ್ಲಿ ಸಹಸ್ರಾರು ಭಕ್ತರು ಪಾಲ್ಗೊಂಡಿದ್ದರು. ಮಹಾಪೂಜೆಯ ಬಳಿಕ ದೇವರು ರಥಾರೋಹಣಗೊಂಡು ಸಾಂಕೇತಿಕವಾಗಿ ರಥವನ್ನು ಎಳೆಯಲಾಯಿತು. ಮಧ್ಯಾಹ್ನ ರಥಕ್ಕೆ...

ಬಂಟ್ವಾಳದ ಬಡಗಕಜೆಕಾರು, ತೆಂಕಕಜೆಕಾರು ಗ್ರಾಮದಲ್ಲಿ ಮತದಾರರ ಮನೆಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

ಲೋಕ ಸಭಾ ಚುನಾವಣೆಯ ಹಿನ್ನಲೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರ ಗೆಲುವಿಗಾಗಿ "ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಗ್ರಾಮ,ಮನೆ,ಮನ ಸಂಪರ್ಕ ಅಭಿಯಾನ"ದ ಅಂಗವಾಗಿ ಬಂಟ್ವಾಳದ ಬಡಗಕಜೆಕಾರು, ತೆಂಕಕಜೆಕಾರು ಗ್ರಾಮದಲ್ಲಿ ಮತದಾರರ ಮನೆಗೆ...