

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ನೂತನ ಜಿಲ್ಲಾಧಿಕಾರಿಯಾಗಿ ಸಿಂಧು ಬಿ. ರೂಪೇಶ್ ಅವರು ಶನಿವಾರ ಮಂಗಳೂರಿನಲ್ಲಿ ಅಧಿಕಾರ ಸ್ವೀಕರಿಸಿದರು.
ಅಪರ ಜಿಲ್ಲಾಧಿಕಾರಿ ರೂಪಾ ನೂತನ ಜಿಲ್ಲಾಧಿಕಾರಿಗಳನ್ನು ಸ್ವಾಗತಿಸಿದರು. ಇನ್ನು ಸಿಂದು ಬಿ. ರೂಪೇಶ್ ಅವರು ದ.ಕ. ಜಿಲ್ಲೆಯ 129 ನೇ ಜಿಲ್ಲಾಧಿಕಾರಿ. ಇದೇ ಮೊದಲ ಬಾರಿಗೆ ದ.ಕ. ಜಿಲ್ಲೆಯಲ್ಲಿ ಜಿಲ್ಲಾಧಿಕಾರಿ ಮತ್ತು ಅಪರ ಜಿಲ್ಲಾಧಿಕಾರಿಗಳೆರಡೂ ಹುದ್ದೆಗಳಲ್ಲಿ ಮಹಿಳೆಯರಿರುವುದು ವಿಶೇಷವಾಗಿದೆ.








