

ಬಂಟ್ವಾಳ: ಪಾದಾಚಾರಿಯೋರ್ವರಿಗೆ ಕಾರು ಡಿಕ್ಕಿಯಾದ ಪರಿಣಾಮ ಗಂಭೀರ ಗಾಯಗೊಂಡು ಮಂಗಳೂರು ಆಸ್ಪತ್ರೆಗೆ ದಾಖಲಾದ ಘಟನೆ ರವಿವಾರ ರಾತ್ರಿ ಪೆಲತ್ತಕಟ್ಟೆ ಎಂಬಲ್ಲಿ ನಡೆದಿದೆ.
ಸಜೀಪಮೂಡ ಗ್ರಾಮದ ಸುಭಾಷ್ ನಗರ ನಿವಾಸಿ ಸುಂದರ ಮೂಲ್ಯ (38) ಅಪಘಾತದಲ್ಲಿ ಗಾಯಗೊಂಡವರು.
ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಪೆಲತ್ತಕಟ್ಟೆ ಎಂಬಲ್ಲಿ ಅತೀವೇಗದಿಂದ ಬಂದ ರಿಟ್ಜ್ ಕಾರು ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಸುಂದರ ಮೂಲ್ಯರಿಗೆ ಡಿಕ್ಕಿಹೊಡೆದಿದೆ.
ಡಿಕ್ಕಿಯಿಂದ ಗಂಭೀರ ಗಾಯಗೊಂಡ ಸುಂದರ ಮೂಲ್ಯರನ್ನು ಮಂಗಳೂರಿನ ಖಾಸಗೀ ಆಸ್ಪತ್ರೆಯಲ್ಲಿ ದಾಖಲು ಮಾಡಲಾಗಿದ್ದು ತುರ್ತು ಚಿಕಿತ್ಸಾ ವಿಭಾಗದಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ.
ಮೆಲ್ಕಾರ್ ಟ್ರಾಫಿಕ್ ಠಾಣಾ ಪೋಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿ ಕೊಂಡಿದ್ದಾರೆ.








