ಬಂಟ್ವಾಳ: ಗ್ರಾಮೀಣ ಭಾಗದ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಕ್ರೀಡಾ ಪ್ರಾಧಿಕಾರವನ್ನು ರಚನೆ ಮಾಡಬೇಕು. ಆ ಮೂಲಕ ಕ್ರೀಡಾಚಟುವಟಿಕೆಯನ್ನು ಅಭಿವೃದ್ಧಿಪಡಿಸುವುದರ ಜತೆಗೆ ಕ್ರೀಡಾಪಟುಗಳನ್ನು ನಿರಂತರವಾಗಿ ಪ್ರೋತ್ಸಾಹಿಸುವ ಕಾರ್ಯ ಆಗಬೇಕು ಎಂದು ಸಂಗಬೆಟ್ಟು ಜಿ.ಪಂ.ಸದಸ್ಯ ಎಂ. ತುಂಗಪ್ಪ ಬಂಗೇರ ಅವರು ಹೇಳಿದರು.
ದ.ಕ.ಜಿಪಂ., ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬಂಟ್ವಾಳ , ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಬಂಟ್ವಾಳ, ಮೂಡುಪಡುಕೋಡಿ ಸ.ಹಿ.ಪ್ರಾ.ಶಾಲೆ ವತಿಯಿಂದ ಮೂಡುಪಡುಕೋಡಿ ಸ.ಹಿ.ಪ್ರಾ.ಶಾಲೆಯಲ್ಲಿ ಬುಧವಾರ ಜರಗಿದ ದ.ಕ. ಜಿಲ್ಲಾ ಮಟ್ಟದ ಖೋ ಖೋ ಪಂದ್ಯಾಟವನ್ನು ಉದ್ಘಾಟಿಸಿ ಮಾತನಾಡಿದರು.


ಗ್ರಾಮೀಣ ಭಾಗದ ಕ್ರೀಡಾಪಟುಗಳಿಗೆ ಸರಿಯಾದ ಪ್ರೋತ್ಸಾಹ ಸಿಗುತ್ತಿಲ್ಲ, ಶಾಲೆಗಳ ಮೂಲಕ ಕ್ರೀಡಾ ಚಟುವಟಿಕೆಗಳು ನಡೆಯುತ್ತಿದೆ. ಜನಪ್ರತಿನಿಽಗಳು ಅನುದಾನದ ಸಹಕಾರ ನೀಡಬೇಕು ಎಂದರು. ವಿದ್ಯಾರ್ಥಿಗಳ ಕ್ರಿಯಾಶೀಲತೆಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಮುಂದಿನ ನವೆಂಬರ್ ತಿಂಗಳಿನಲ್ಲಿ ಮಕ್ಕಳ ಅಧಿವೇಶನ ಹಾಗೂ ಮಕ್ಕಳ ಸಮ್ಮೇಳನ ನಡೆಸುವುದಾಗಿ ಅವರು ತಿಳಿಸಿದರು.
ಬಂಟ್ವಾಳ ತಾ.ಪಂ.ಅಧ್ಯಕ್ಷ ಚಂದ್ರಹಾಸ ಕರ್ಕೇರ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಕ್ರೀಡೆಯಿಂದ ವ್ಯಕ್ತಿತ್ವ ವಿಕಸನವಾಗುತ್ತದೆ. ದೈಹಿಕವಾಗಿ ಬಲಾಢ್ಯರಾಗುವುದರ ಜತೆಗೆ ಮಾನಸಿಕವಾಗಿ ಶಕ್ತಿವಂತರಾಗಲು ಸಾಧ್ಯವಿದೆ ಎಂದರು. ಸರಕಾರದಿಂದ ಕ್ರೀಡಾಪಟುಗಳಿಗೆ ಸರಿಯಾದ ಪ್ರೋತ್ಸಾಹ ಸಿಕ್ಕಾಗ ಅವರು ಹೆಚ್ಚು ಆಸಕ್ತಿಯಿಂದ ಕ್ರೀಡೆಯಲ್ಲಿ ತೊಡಗಿಸಿಕೊಳ್ಳಲು ಸಾಧ್ಯವಿದೆ ಎಂದರು.
ತಾ.ಪಂ. ಸ್ಥಾಯಿ ಸಮಿತಿ ಅಧ್ಯಕ್ಷೆ ಧನಲಕ್ಷ್ಮಿ ಸಿ.ಬಂಗೇರ, ತಾ.ಪಂ.ಸದಸ್ಯ ರಮೇಶ್ ಕುಡ್ಮೇರು ಶುಭ ಹಾರೈಸಿದರು. ಇರ್ವತ್ತೂರು ಗ್ರಾ.ಪಂ.ಅಧ್ಯಕ್ಷೆ ಸುಜಾತಾ, ಪಿಲಾತಬೆಟ್ಟು ಗ್ರಾ.ಪಂ.ಅಧ್ಯಕ್ಷ ಚಂದ್ರಶೇಖರ ಶೆಟ್ಟಿ, ಚೆನ್ನೈತ್ತೋಡಿ ಗ್ರಾ.ಪಂ. ಅಧ್ಯಕ್ಷ ಯತೀಶ್ ಶೆಟ್ಟಿ, ದ.ಕ, ಉಡುಪಿ ಜಿಲ್ಲಾ ಹಾಪ್‌ಕಾಮ್ಸ್ ಅಧ್ಯಕ್ಷ ಕೆ.ಲಕ್ಷ್ಮಿ ನಾರಾಯಣ ಉಡುಪ, ವಾಮದಪದವು ವ್ಯ.ಸೇ.ಸ. ಸಂಘದ ಅಧ್ಯಕ್ಷ ಯಶೋಧರ ಶೆಟ್ಟಿ ದಂಡೆ, ಉದ್ಯಮಿಗಳಾದ ಹರೀಂದ್ರ ಪೈ, ಪ್ರಭಾಕರ ಶೆಟ್ಟಿ ಅಲೆಕ್ಕಿ, ನಜೀರ್ ಸಾಹೇಬ್, ಕಂಬಳ ಪ್ರಧಾನ ತೀರ್ಪುಗಾರ ರಾಜೀವ ಶೆಟ್ಟಿ ಎಡ್ತೂರು, ಡಾ. ರಾಮಕೃಷ್ಣ ಎಸ್., ಗುತ್ತಿಗೆದಾರ ಮೊಹನ್ ಶೆಟ್ಟ ನರ್ವಲ್ದಡ್ಡ, ಎಲ್ಲೈಸಿ ಪ್ರತಿನಿಽ ರಮೇಶ್ ಶೆಟ್ಟಿ ಬಜೆ, ಗ್ರೇಡ್ ವನ್ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಗಣೇಶ್ ಎನೇಕಲ್, ಗ್ರೇಡ್‌ಟು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಯುವರಾಜ್, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಶಿವರಾಮ ಏನೇಕಲ್, ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಚಿನ್ನಪ್ಪ, ದೈಹಿಕ ಶಿಕ್ಷಣ ಪರಿವೀಕ್ಷಣಾಽಕಾರಿ ರತ್ನಾವತಿ, ಮೂಡುಪಡುಕೋಡಿ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಶ್ರೀನಿವಾಸ ಪೂಜಾರಿ ಸೇವಾ, ಸರಕಾರಿ ನೌಕರರ ಸಂಘದ ಅಧ್ಯಕ್ಷ ಉಮಾನಾಥ ರೈ ಮೇರಾವು, ಪ್ರಾಥಮಿಕ ಶಿಕ್ಷಕರ ಸಂಘದ ಅಧ್ಯಕ್ಷ ಶಿವಪ್ರಸಾದ್ ಶೆಟ್ಟಿ, ರಾಷ್ಟ್ರಪ್ರಶಸ್ತಿ ಪುರಸ್ಕೃತ ನಿವೃತ್ತ ಶಿಕ್ಷಕ ರಮೇಶ್ ನಾಯಕ್ ರಾಯಿ, ಇರ್ವತ್ತೂರು ಗ್ರಾ.ಪಂ.ಸದಸ್ಯರು, ಶಾಲಾ ಶಿಕ್ಷಕ ವೃಂದ ವಿವಿಧ ಶಾಲಾ ದೈಹಿಕ ಶಿಕ್ಷಣ ಶಿಕ್ಷಕರು ಉಪಸ್ಥಿತರಿದ್ದರು.
ಶಾಲಾ ಮುಖ್ಯ ಶಿಕ್ಷಕಿ ವಿಲ್ಮಾ ಡಿಸೋಜ ಸ್ವಾಗತಿಸಿದರು. ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ರಘುನಾಥ್ ಪ್ರಸ್ತಾವಿಸಿದರು.ಗ್ರಾ.ಪಂ. ಉಪಾಧ್ಯಕ್ಷ ಶಂಕರ ಶೆಟ್ಟಿ ಬೆದ್ರಮಾರ್ ವಂದಿಸಿದರು. ಭರತ್‌ರಾಜ್ ಜೈನ್ ಮತ್ತು ದೈಹಿಕ ಶಿಕ್ಷಣ ಸಂಘದ ಕಾರ್ಯದರ್ಶಿ ಜಯರಾಮ ಕಾರ್ಯಕ್ರಮ ನಿರೂಪಿಸಿದರು.
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ, ತಾ.ಪಂ. ಸದಸ್ಯ ಪ್ರಭಾಕರ ಪ್ರಭು ಅವರು ಪಂದ್ಯಾಟಕ್ಕೆ ಆಗಮಿಸಿ ಶುಭ ಹಾರೈಸಿದರು.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here