

ಬಂಟ್ವಾಳ: ಬಂಟ್ವಾಳ ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ ಪ್ರೋತ್ಸಾಹ ಪ್ರಶಸ್ತಿ ಲಭಿಸಿದೆ. 2018-19 ನೇ ಸಾಲಿನಲ್ಲಿ ಸಹಕಾರಿ ಸಂಘಗಳ ಸಾಲಿನಲ್ಲಿ ಉತ್ತಮ ಸಾಧನೆ ಮಾಡಿದಕ್ಕೆ ಗುರುತಿಸಿ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಈ ಪ್ರಶಸ್ತಿ ನೀಡಿ ಗೌರವಿಸಿದೆ.
ಇತ್ತೀಚಿಗೆ ಮಂಗಳೂರು ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕನಲ್ಲಿ ನಡೆದ ಮಹಾಸಭೆಯಲ್ಲಿ ಡಿ.ಸಿ.ಸಿ.ಬ್ಯಾಂಕ್ ಆಧ್ಯಕ್ಷ ರಾಜೇಂದ್ರ ಕುಮಾರ್ ಅವರು ಬಂಟ್ವಾಳ ವ್ಯವಸಾಯ ಸೇವಾ ಸಹಕಾರಿ ಸಂಘದ ಉಪಾಧ್ಯಕ್ಷ ಮಹಾಬಲ ಶೆಟ್ಟಿ ಹಾಗೂ ಶಾಖಾ ಮುಖ್ಯಕಾರ್ಯನಿರ್ವಣಾಧಿಕಾರಿ ಜಯಪ್ರಕಾಶ್ ಕಾಮತ್ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಟಿ.ರಾಜಾರಾಮ್ ಭಟ್ ಹಾಗೂ ಬಂಟ್ವಾಳ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ನಿರ್ದೇಶಕರುಗಳು ಹಾಜರಿದ್ದರು.








