


ಬಂಟ್ವಾಳ: ಬಂಟ್ವಾಳ ತಾಲೂಕು ಮಟ್ಟದ ಬ್ರಹ್ಮ ಶ್ರೀ ನಾರಾಯಣ ಗುರು ಜಯಂತಿ ಆಚರಣೆ ಕಾರ್ಯಕ್ರಮ ಬಿ.ಸಿ.ರೋಡಿನ ಮಿನಿ ವಿಧಾನಸೌಧದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ರಾಜೇಶ್ ನಾಯ್ಕ್ ಅವರು ಧನಾತ್ಮಕ ಚಿಂತನೆಯ ಮೂಲಕ ವ್ಯಕ್ತಿ ಉನ್ನತವಾದ ಸ್ಥಾನ ಪಡೆಯಲು ಸಾಧ್ಯ ಎಂಬುದಕ್ಕೆ ಬ್ರಹ್ಮ ಶ್ರೀ ನಾರಾಯಣ ಗುರುಗಳ ತತ್ವ ಆದರ್ಶಗಳೇ ಸಾಕ್ಷಿ ಎಂದು ಅವರು ಹೇಳಿದರು.
ಸಂಘರ್ಷದಿಂದ ಯಾವುದೇ ಕೆಲಸಗಳು ಸಾಧ್ಯವಿಲ್ಲ, ಸಾಧನೆಯಿಂದ , ಸಂಘಟನೆಯಿಂದ ಮಾತ್ರ ಯಶಸ್ಸು ಸಾಧ್ಯ ಎಂದು ನಾರಾಯಣ ಗುರುಗಳ ಜೀವನ ಚರಿತ್ರೆ ಹೇಳುತ್ತದೆ ಎಂದು ಅವರು ಹೇಳಿದರು.
ಬಂಟ್ವಾಳ ತಾಲೂಕು ಪಂಚಾಯತ್ ಆಧ್ಯಕ್ಷ ಚಂದ್ರಹಾಸ ಕರ್ಕೇರ, ಉಪಾಧ್ಯಕ್ಷ ಅಬ್ಬಾಸ್ ಆಲಿ, ಸ್ಥಾಯಿ ಸಮಿತಿ ಅಧ್ಯಕ್ಷೆ ಧನಲಕ್ಮೀ ಸಿ.ಬಂಗೇರ, ಜಿ.ಪಂ.ಸದಸ್ಯರಾದ ಎಂ.ತುಂಗಪ್ಪ ಬಂಗೇರ, ರವೀಂದ್ರ ಕಂಬಳಿ, ಕಮಲಾಕ್ಷಿ ಕೆ.ಪೂಜಾರಿ, ಸಂಪನ್ಮೂಲ ವ್ಯಕ್ತಿ
ಮಹೇಶ್ ಕುಮಾರ್ , ಬಂಟ್ವಾಳ ತಹಶಿಲ್ದಾರ್ ರಶ್ಮಿ.ಎಸ್.ಆರ್. ತಾ.ಪಂ.ಕಾರ್ಯನಿರ್ವಹಣಾಧಿಕಾರಿ ರಾಜಣ್ಣ ಹಾಗೂ ತಾ.ಪಂ.ಸದಸ್ಯರುಗಳು ಉಪಸ್ಥಿತರಿದ್ದರು.






