ಬಂಟ್ವಾಳ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯ ಪಾಕ್ಷಿಕ ಆಚರಣೆಯ ಪ್ರಯುಕ್ತ ಜಾಥ ಕಾರ್ಯಕ್ರಮವನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉದ್ಘಾಟಿಸಿದರು.
ಬಂಟ್ವಾಳ ಸಮುದಾಯ ಆಸ್ಪತ್ರೆಯಿಂದ ಬಿಸಿರೋಡಿನ  ಸರ್ಕಲ್ ವರಗೆ ಜಾಥ ನಡೆಯಿತು. ಈ ಸಂದರ್ಭದಲ್ಲಿ ತಾಲೂಕು ಪಂಚಾಯತ್ ಅಧ್ಯಕ್ಷ ಚಂದ್ರಹಾಸ ಕರ್ಕೇರ, ಉಪಾಧ್ಯಕ್ಷ ಅಬ್ಬಾಸ್ ಆಲಿ, ಸ್ಥಾಯಿ ಸಮಿತಿ ಅಧ್ಯಕ್ಷೆ ಧನಲಕ್ಮೀ ಸಿ .ಬಂಗೇರ, ತಾಲೂಕು ವೈದ್ಯಾಧಿಕಾರಿ ಡಾ| ದೀಪಾ ಪ್ರಭು, ಸಾರ್ವಜನಿಕ ಆಸ್ಪತ್ರೆ ಯ ಆಡಳಿತಾಧಿಕಾರಿ ಡಾ| ಸದಾಶಿವ, ಪುರಸಭಾ ಇಂಜಿನಿಯರ್ ಡೋಮೋನಿಕ್ ಡಿಮೆಲ್ಲೋ , ಪುರಸಭಾ ಅಧಿಕಾರಿಗಳು, ತಾಲೂಕು ಆಸ್ಪತ್ರೆಯ ಸಿಬ್ಬಂದಿಗಳು, ಆಶಾ ಕಾರ್ಯಕರ್ತೆ ಯರು, ವಿವಿಧ ಸ್ವಸಹಾಯ ಸಂಘ ದ ಸದಸ್ಯರು ಪಾಲ್ಗೊಂಡು ಜಾಥವನ್ನು ಯಶಸ್ವಿಗೊಳಿಸಿದರು.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here