

ಬಂಟ್ವಾಳ : ಇಂದಿನ ಆಧುನಿಕ ಜಗತ್ತಿಗೆ ಅವಶ್ಯವಿರುವ ಜವಾಬ್ದಾರಿಯುತ ವ್ಯಕ್ತಿಯನ್ನಾಗಿ ರೂಪಿಸುವಲ್ಲಿ ಶಿಕ್ಷಕರ ಜೊತೆಗೆ ಪೋಷಕರ ಪಾತ್ರವೂ ಮಹತ್ತರವಾದುದು ಎಂದು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಾ. ಪ್ರಭಾಕರ್ ಭಟ್ ಕಲ್ಲಡ್ಕ ಹೇಳಿದರು.
ಅವರು ಕಲ್ಲಡ್ಕ ಶ್ರೀರಾಮ ಪದವಿಪೂರ್ವ ಕಾಲೇಜಿನ ೨೦೧೯-೨೦ನೇ ಸಾಲಿನ ಪೋಷಕರ ಸಭೆಯಲ್ಲಿ ಪೋಷಕರನ್ನುದ್ದೇಶಿಸಿ ಮಾತನಾಡಿದರು.
ವೇದಿಕೆಯಲ್ಲಿ ಶ್ರೀರಾಮ ವಿದ್ಯಾಕೇಂದ್ರದ ಅಧ್ಯಕ್ಷರಾದ ನಾರಾಯಣ ಸೋಮಯಾಜಿ, ಸಹಸಂಚಾಲಕರಾದ ರಮೇಶ್ ಹಾಗೂ ಆಡಳಿತ ಮಂಡಳಿ ಸದಸ್ಯರಾದ ನಾಗೇಶ್ ಉಪಸ್ಥಿತರಿದ್ದರು.
ಕಾಲೇಜಿನ ಪ್ರಾಂಶುಪಾಲರಾದ ವಸಂತ ಬಲ್ಲಾಳ್ ಪ್ರಾಸ್ತವಿಕ ನುಡಿಗಳೊಂದಿಗೆ ಸ್ವಾಗತಿಸಿದರು. ದೈಹಿಕ ಶಿಕ್ಷಣ ನಿರ್ದೇಶಕರಾದ ಕರುಣಾಕರ್ ವಂದಿಸಿದರು. ಜೀವಶಾಸ್ತ್ರ ಉಪನ್ಯಾಸಕಿಯಾದ ಶೈಲಿನಿ.ಬಿ ನಿರೂಪಿಸಿದರು.








