ಬಂಟ್ವಾಳ: ಪುರಸಭಾ ಬಂಟ್ವಾಳ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ಶಿಶು ಅಭಿವೃದ್ಧಿ ಯೋಜನೆ ಬಂಟ್ವಾಳ ಇವರ ಜಂಟಿ ಆಶ್ರಯದಲ್ಲಿ ಪೋಷಣ್ ಅಭಿಯಾನ ಮಾಸಾಚರಣೆ ಕಾರ್ಯಕ್ರಮ ಬಿ.ಸಿ.ರೋಡಿನ ಸ್ತ್ರೀ ಶಕ್ತಿ ಭವನದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಬಂಟ್ವಾಳ ಪ್ರಾಥಮಿಕ ಆರೋಗ್ಯ ಕೇಂದ್ರ ದ ವೈದ್ಯಾಧಿಕಾರಿ ವಾಣಿಶ್ರೀ ಅವರು ದಿನಬಳಕೆಯ ಆಹಾರದ ಕ್ರಮದ ಬಗ್ಗೆ ಸ್ಥೂಲವಾದ ಮಾಹಿತಿ ನೀಡಿದರು. ಮಿತ ಹಾಗೂ ಪೌಷ್ಟಿಕ ಆಹಾರದ ಮೂಲಕ ಆರೋಗ್ಯ ವನ್ನು ಕಾಪಾಡುವುದು ಹೇಗೆ ಎಂಬ ಬಗ್ಗೆ ಮಾಹಿತಿ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷ ತೆ ವಹಸಿ ಮಾತನಾಡಿದ ಪುರಸಭಾ ಮುಖ್ಯಾಧಿಕಾರಿ ರೇಖಾ ಶೆಟ್ಟಿ ಮಹಿಳೆಯಿಂದ ಮಾತ್ರ ಸುಂದರ ಸದೃಢ ಸಮಾಜ ನಿರ್ಮಾಣ ಸಾಧ್ಯ ಎಂದು ಅವರು ಹೇಳಿದರು. ಮಹಿಳೆ ಆರೋಗ್ಯವಾಗಿ ಆರ್ಥಿಕವಾಗಿ ಸಬಲರಾದಾಗ ಅಂತಹ ಕುಟುಂಬ ಸಮರ್ಥವಾಗಿ ಜೀವನ ನಡೆಸಲು ಸಾಧ್ಯವಾಗುತ್ತದೆ ಎಂದು ಅವರು ಹೇಳಿದರು. ಮಹಿಳೆಯರು ಸಂಘಟನಾತ್ಮಕ ವಾಗಿ ಬದುಕಲು ಸ್ತ್ರೀ ಶಕ್ತಿ
ಪ್ರೇರಣೆ ಯಾಗಿದೆ .

ಮಹಿಳಾ ಮತ್ತು ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ನಿರೂಪಣಾಧಿಕಾರಿ ಉಸ್ಮಾನ್. ಎ. ಅವರು ಮಾತನಾಡಿ ಬಹಳ ಅರ್ಥಪೂರ್ಣವಾದ ಕಾರ್ಯಕ್ರಮ ಎಂದು ಅವರು ಹೇಳಿದರು. ಶಿಶು ಮರಣ ಹಾಗೂ ಬಾಣಂತಿ ಸಾವು ಕಡಿಮೆಯಾಗಬೇಕು, ಹೆಣ್ಣು ಮಕ್ಕಳ ಅನುಪಾತದಲ್ಲಿ ಏರುಪೇರು ಅಗಬಾರದು ಈ ನಿಟ್ಟಿನಲ್ಲಿ ವಿವಿಧ ಕಾರ್ಯಕ್ರಮ ಗಳನ್ನು ಇಲಾಖೆ ಹಮ್ಮಿಕೊಂಡಿದೆ. ಇಲಾಖೆಯ ಎಲ್ಲಾ ಯೋಜನೆಗಳ ಪ್ರಯೋಜನವನ್ನು ಸಾರ್ವಜನಿಕ ರು ಪಡೆಯಬೇಕು ಎಂದರು.

ವೇದಿಕೆಯಲ್ಲಿ ಹಿರಿಯ ಮೇಲ್ವಿಚಾರಕಿ ಉಷಾ ಕುಮಾರಿ, ಸಹಕಾರಿ ಒಕ್ಕೂಟದ ಅಧ್ಯಕ್ಷೆ ವಸಂತಿ , ಮೇಲ್ವಿಚಾರಕಿ ಇಂದಿರಾ ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಇಲಾಖೆಯ ವತಿಯಿಂದ ಸುಮಾರು 15 ಮಂದಿ ಗರ್ಭಿಣಿಯರಿಗೆ ಸೀಮಂತ ಕಾರ್ಯಕ್ರಮ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಪೋಷಣ್ ಅಭಿಯಾನದ ಬಗ್ಗೆ ಕಾರ್ಯಕರ್ತೆಯರಿಂದ ಕಿರು ನಾಟಕ ಪ್ರದರ್ಶನ ನಡೆಯಿತು. ಆರಂಭದಲ್ಲಿ ಸ್ತ್ರೀ ಶಕ್ತಿಯ ವಿವಿಧ ಸಂಘಟನೆಯ ಸದಸ್ಯರು ಹಾಗೂ ಪುರಸಭೆಯ ಸಿಬ್ಬಂದಿ ಗಳು, ಅಂಗನವಾಡಿ ಕಾರ್ಯಕರ್ತೆಯರು, ಆರೋಗ್ಯ ಸಹಾಯಕಿಯರು ಜಾಥದಲ್ಲಿ ಪಾಲ್ಗೊಂಡರು.
ಬಂಟ್ವಾಳ ಶಿಶು ಅಭಿವೃದ್ದಿ ಯೋಜನಾಧಿಕಾರಿ ಗಾಯತ್ರಿ ಕಂಬಳಿ ಪ್ರಸ್ತಾವಿಕವಾಗಿ ಮಾತನಾಡಿದರು.
ಪುರಸಭಾ ಯೋಜನಾ ಸಂಘಟಕಿ ಉಮಾವತಿ ಸ್ವಾಗತಿಸಿದರು. ಮೇಲ್ವಿಚಾರಕಿ ಇಂದಿರಾ ವಂದಿಸಿದರು. ಹಿರಿಯ ಮೇಲ್ಬಿಚಾರಕಿ ಬಿ.ಭಾರತಿ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here