

ವಿಟ್ಲ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿಟ್ಲ ವಲಯ ಮತ್ತು ವಿಟ್ಲ ಜೆಸಿಐ ಘಟಕದ ಸಹಭಾಗಿತ್ವದಲ್ಲಿ ವಿಟ್ಲದ ವಿಠಲ ಪದವಿ ಪೂರ್ವ ಕಾಲೇಜಿನಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ ನಡೆಯಿತು. ದುಶ್ಚಟ ಮುಕ್ತ ಸಮಾಜ ನಿರ್ಮಾಣ ಉದ್ದೇಶದಿಂದ ಶ್ರೀ ಕ್ಷೇತ್ರದ ಪೂಜ್ಯ ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಅಖಿಲ ಕರ್ನಾಟಕ ಜನಗಾಗೃತಿ ವೇದಿಕೆಯು ಹಲವು ಶಾಲಾ ಕಾಲೇಜುಗಳಲ್ಲಿ ಈ ಕಾರ್ಯಕ್ರಮ ನಡೆಸುತ್ತಿದೆ.
ಕಾರ್ಯಕ್ರಮವನ್ನು ವಿಟ್ಲ ಜೆಸಿಐ ಅಧ್ಯಕ್ಷ ಬಾಲಕೃಷ್ಣ ವಿಟ್ಲ ಉದ್ಘಾಟಿಸಿದರು. ನಿವೃತ್ತ ಮಲೇರಿಯಾ ಪರಿವೀಕ್ಷಕ ಜಯರಾಮ ಪೂಜಾರಿ ಮಾಹಿತಿ ನೀಡಿದರು. ಕೃಷ್ಣಯ್ಯ ಕೆ. ವಿಟ್ಲ ಅರಮನೆ, ಬಾಲಕೃಷ್ಣ ಕಾರಂತ ಎರುಂಬು ಮತ್ತು ಆದರ್ಶ ಚೊಕ್ಕಾಡಿ ವೇದಿಕೆಯಲ್ಲಿದ್ದರು. ವಿಟ್ಲ ತಾಲೂಕು ಯೋಜನಾಧಿಕಾರಿ ಮೋಹನ್ ಧರ್ಮಸ್ಥಳ ಸ್ವಾಗತಿಸಿ ಪ್ರಸ್ತಾವಿಸಿದರು. ವಲಯ ಮೇಲ್ವಿಚಾರಕ ರಮೇಶ್ ನಿರೂಪಿಸಿದರು. ಸೇವಾಪ್ರತಿನಿಧಿ ಸರಿತಾ ವಂದಿಸಿದರು.








